ಪೋಕ್ಸೊ ಪ್ರಕರಣ: ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್​ ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್​ ಮಹತ್ವದ ಆದೇಶದಿಂದಾಗಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಬಂಧನದಿಂದ ಬಚಾವ್ ಆಗಿದ್ದಾರೆ.

ಪೋಕ್ಸೊ ಪ್ರಕರಣ: ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಬಿಎಸ್ ಯಡಿಯೂರಪ್ಪ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Jul 26, 2024 | 5:09 PM

ಬೆಂಗಳೂರು, (ಜುಲೈ 26): ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್​ ಮತ್ತೆ ಬಿಗ್ ರಿಲೀಫ್ ನೀಡಿದೆ. ತಮ್ಮ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣವನ್ನು ರದ್ದು ಕೋರಿ ಬಿಎಸ್​ವೈ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜುಲೈ 26) ಕೈಗೆತ್ತಿಕೊಂಡ ಹೈಕೋರ್ಟ್, ವಿಚಾರಣೆಯನ್ನು ಒಂದು ವಾರ ಮುಂದೂಡಿದೆ. ಅಲ್ಲದೇ ಈ ಹಿಂದೆ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿದೆ. ಇದರೊಂದಿಗೆ ಯಡಿಯೂರಪ್ಪ ಮತ್ತೆ ಬಂಧನದ ಭೀತಿಯಿಂದ ಬಚಾವ್ ಆಗಿದ್ದಾರೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ತಾಯಿ ಮಾರ್ಚ್​ 3 ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದರು. ಈ ಬಗ್ಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಬಳಿಕ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.  ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ 2 ಬಾರಿ ನೋಟಿಸ್​ ನೀಡಿದ್ದರು. ಆದರೆ, ವಿಚಾರಣೆಗೆ ಅವರು ಹಾಜರಾಗಿರಲಿಲ್ಲ. ಇದರಿಂದಾಗಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿರುವ ನ್ಯಾಯಪೀಠ ಬಿಎಸ್​ವೈ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಇದನ್ನೂ ಓದಿ: ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ಮಧ್ಯಂತರ ಜಾಮೀನು ವಿಸ್ತರಣೆ

ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಯಡಿಯೂರಪ್ಪ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಬಂಧಿಸದಂತೆ ನಿರ್ದೆಶನ ನೀಡಿತ್ತು. ಇದರಿಂದಾಗಿ ಮಾಜಿ ಸಿಎಂ ಬಂಧನ ಭೀತಿಯಿಂದ ನಿರಾಳರಾಗಿದ್ದರು. ಬಳಿಕ ಕೋರ್ಟ್​ ನಿರ್ದೇಶನದಂತೆ ಬಿಎಸ್​ವೈ ಸಿಐಡಿ ಎದುರು ಹಾಜರಾಗಿ ವಿಚಾರಣೆಗೆ ಹಾಜರಾಗಿದ್ದರು.

ಸದ್ಯ ಯಡಿಯೂರಪ್ಪ ಅವರು ಈ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದು, ಇದೀಗ ಕೇಸ್​ ರದ್ದುಗೊಳಿಸುವಂತೆ ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:45 pm, Fri, 26 July 24

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?