ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ಮಧ್ಯಂತರ ಜಾಮೀನು ವಿಸ್ತರಣೆ

ಪೊಕ್ಸೊ ಪ್ರಕರಣದಲ್ಲಿ ಮಾಜಿ ,ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದೆ. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (ಪೋಕ್ಸೋ) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ, ನ್ಯಾಯಾಲಯಕ್ಕೆ ಸಿಐಡಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ಇದರ ಬೆನ್ನಲ್ಲೇ ಇದೀಗ ಹೈಕೋರ್ಟ್​, ಯಡಿಯೂರಪ್ಪನವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿದೆ.

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ಮಧ್ಯಂತರ ಜಾಮೀನು ವಿಸ್ತರಣೆ
ಬಿಎಸ್ ಯಡಿಯೂರಪ್ಪ
Updated By: ರಮೇಶ್ ಬಿ. ಜವಳಗೇರಾ

Updated on: Jun 28, 2024 | 5:09 PM

ಬೆಂಗಳೂರು, (ಜೂನ್ 28): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಸಿಐಡಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಇದರ ಬೆನ್ನಲ್ಲೇ ಇದೀಗ ಕೋರ್ಟ್​ ಬಿ.ಎಸ್. ಯಡಿಯೂರಪ್ಪ ಅವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿದೆ. ಇಂದು (ಜೂನ್ 28) ಕರ್ನಾಟಕ ಹೈಕೋರ್ಟ್​, ಯಡಿಯೂರಪ್ಪನವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸಿಐಡಿ ಎಸ್​ಪಿಪಿಗೆ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಎರಡು ವಾರ ಮುಂದೂಡಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇದೀಗ ಜಾಮೀನು ವಿಸ್ತರಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಎಸ್​ವೈ ಬಂಧನ ಭೀತಿಯಲ್ಲಿದ್ದ ಪಾರಾಗಿದ್ದಾರೆ. ಇನ್ನು ಈ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿಯನ್ನು (ಚಾರ್ಜ್​ಶೀಟ್) ಸಲ್ಲಿಕೆ ಮಾಡಲಾಗಿದೆ. ನಿನ್ನೆ (ಜೂನ್ 27) ಪೊಲೀಸರು, ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ: ಬಿಎಸ್ ​ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ಕೋರ್ಟ್​ಗೆ ಆರೋಪ ಪಟ್ಟಿ ಸಲ್ಲಿಕೆ

ಪ್ರಕರಣದ ಹಿನ್ನೆಲೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಮಾರ್ಚ್‌ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿಂದೆ, ತಮ್ಮ 17 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲಾಗಿತ್ತು. ಆದರೆ, ಯಾವುದೇ ಕ್ರಮ ಜರುಗಿರಲಿಲ್ಲ. ಫೆ. 2ರಂದು ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಿದ್ದರು. ನೀಡಲಾಗಿತ್ತು. ಆ ಹಿನ್ನೆಲೆಯಲ್ಲಿ, ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಪ್ರಾಸಿಕ್ಯೂಷನ್ ಪರವಾಗಿ ವಕಾಲತ್ತು ವಹಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಅಶೋಕ್ ಎನ್.ನಾಯಕ್ ಅವರನ್ನು ನೇಮಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ