ಅಗತ್ಯವೆನಿಸಿದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಗೃಹಸಚಿವ ಜಿ ಪರಮೇಶ್ವರ್​

ಪೋಕ್ಸೋ ಕೇಸ್​ನಲ್ಲಿ ಈಗ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ ಕೂಡ ಅದೇ ಸುಳಿವು ನೀಡಿದ್ದಾರೆ. ಯಡಿಯೂರಪ್ಪ ಬಂಧನ ಆಗಲಿದೆಯೇ? ಈ ಬಗ್ಗೆ ಪರಮೇಶ್ವರ ಹೇಳಿದ್ದೇನು? ತಿಳಿಯಲು ಮುಂದೆ ಓದಿ.

ಅಗತ್ಯವೆನಿಸಿದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಗೃಹಸಚಿವ ಜಿ ಪರಮೇಶ್ವರ್​
ಯಡಿಯೂರಪ್ಪ & ಜಿ ಪರಮೇಶ್ವರ್
Follow us
ಮಹೇಶ್ ಇ, ಭೂಮನಹಳ್ಳಿ
| Updated By: Ganapathi Sharma

Updated on: Jun 13, 2024 | 9:44 AM

ತುಮಕೂರು, ಜೂನ್ 13: ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಬಂಧನವಾಗಲಿದೆಯೇ ಎಂಬ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ (G Parameshwara) ಪ್ರತಿಕ್ರಿಯಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೋಟಿಸ್​ಗೆ ಉತ್ತರ ನೀಡಬೇಕಾಗುತ್ತದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್​ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ನೋಟಿಸ್ ಕೊಟ್ಟಿದ್ದಾರೆ. ಅಗತ್ಯ ಬಿದ್ರೆ ಸಿಐಡಿಯವರು ಯಡಿಯೂರಪ್ಪರನ್ನ ಬಂಧಿಸ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದು ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಯಡಿಯೂರಪ್ಪ ಹೇಳಿದ್ದೇನು?

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇಂದು ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ, ಅಪಾಯ ಮನಗಂಡ ಯಡಿಯೂರಪ್ಪ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್​ಗೂ ಉತ್ತರ ನೀಡಿರುವ ಅವರು, ಜೂನ್ 17 ರಂದು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ನೋಟಿಸ್: ಕೇಸ್ ರದ್ದು ಕೋರಿ ಬಿಎಸ್​ವೈ ಹೈಕೋರ್ಟ್​​ಗೆ ಮೊರೆ​

ಮಾರ್ಚ್ 28 ರಂದು ನೀಡಿದ್ದ ನೋಟಿಸ್​​ನಂತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಆದರೆ ಮತ್ತೆ ಜೂನ್ 12 ರಂದು ತಾವು ನೀಡಿರುವ ನೋಟಿಸ್ ನನಗೆ ನಿನ್ನೆಯಷ್ಟೇ ತಲುಪಿದೆ. ನಾನು ಪಕ್ಷದ ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ನಾನು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಾನು ಜೂನ್ 17 ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಈ ಹಿಂದೆಯೂ ನಾನು ತನಿಖೆಗೆ ಸಹಕರಿಸಿದ್ದೇನೆ. ಸಕಾರಣಗಳಿಂದಲೇ ಈ ಬಾರಿ ತನಿಖೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ