Murugha Mutt Case: ಪ್ರಕರಣದ ಎ2 ಆರೋಪಿ ಮಹಿಳಾ ವಾರ್ಡನ್​ಗೆ 14 ದಿನ ನ್ಯಾಯಾಂಗ ಬಂಧನ

ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದ ಬೆನ್ನಲ್ಲೆ ಪ್ರಕರಣದ ಎರಡನೇ ಆರೋಪಿ ಮಹಿಳಾ ವಾರ್ಡನ್​ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

Murugha Mutt Case: ಪ್ರಕರಣದ ಎ2 ಆರೋಪಿ ಮಹಿಳಾ ವಾರ್ಡನ್​ಗೆ 14 ದಿನ ನ್ಯಾಯಾಂಗ ಬಂಧನ
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
Edited By:

Updated on: Sep 02, 2022 | 6:18 PM

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದ ಬೆನ್ನಲ್ಲೆ ಪ್ರಕರಣದ ಎರಡನೇ ಆರೋಪಿ ಮಹಿಳಾ ವಾರ್ಡನ್​ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಆರೋಪಿ ಮಹಿಳಾ ವಾರ್ಡನ್​ ಅವರನ್ನು ಜಿಲ್ಲೆಯ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯದ ಮುಂದೆ ಪೊಲೀಸರು ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಧೀಶೆ ಕೋಮಲಾ ಅವರಿದ್ದ ಪೀಠವು ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪದಡಿ ಬಂಧಿತರಾಗಿರುವ ಮಹಿಳಾ ವಾರ್ಡನ್ 2ನೇ ಆರೋಪಿಯಾಗಿದ್ದಾರೆ. ಇವರನ್ನು ಗುರುವಾರ (ಸೆ.01) ಪೊಲೀಸರು ಬಂಧಿಸಿದ್ದರು. ಇಂದು ಅವರನ್ನು 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಅದರಂತೆ ಆರೋಪಿಯನ್ನು 14ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಆಗಸ್ಟ್‌ 26 ಶುಕ್ರವಾರ ಮುರುಘಾಶ್ರೀಗಳ ವಿರುದ್ಧ ಮೈಸೂರಿನ ನಜರ್‌ಬಾದ್‌ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆ ನೆರವು ಪಡೆದು ಕೇಸ್ ದಾಖಲಿಸಿದ್ದರು. ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆ ಆಗಿತ್ತು. ಅದರಂತೆ ಚಿತ್ರದುರ್ಗ ಪೊಲೀಸರು ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಇನ್ನೊಂದೆಡೆ ಶ್ರೀಗಳ ವಿರುದ್ಧ ಪೊಲೀಸರು ಲುಕ್‌ಔಟ್‌ ನೋಟಿಸ್ ಕೂಡ ಜಾರಿ ಮಾಡಿದ್ದರು. ಅದರಂತೆ ಗುರುವಾರ ರಾತ್ರಿ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಬಂಧಿಸಿದ್ದರು. ಪ್ರಕರಣದ ಎ2 ಆರೋಪಿಯಾಗಿರುವ ಮಹಿಳಾ ವಾರ್ಡನ್​ ಅವರನ್ನು ಕೂಡ ಗುರುವಾರವೇ ಬಂಧಿಸಲಾಗಿತ್ತು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Fri, 2 September 22