AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ: ಎರಡೇ ವರ್ಷದಲ್ಲಿ ಶೇ 26 ರಷ್ಟು ಹೆಚ್ಚಾದ ಪೋಕ್ಸೊ ಕೇಸ್

ಕರ್ನಾಟಕದಲ್ಲಿ ಕಳೆದ ಎರಡು ವರ್ಷಗಳಲ್ಲಿ ಪೋಕ್ಸೊ ಪ್ರಕರಣಗಳು ಶೇ 26ರಷ್ಟು ಏರಿಕೆಯಾಗಿವೆ. ಆದರೆ, ಶಿಕ್ಷೆಯ ಪ್ರಮಾಣ ಕಡಿಮೆ ಇರುವುದು ಮತ್ತು ಕುಟುಂಬದ ಒತ್ತಡದಿಂದ ಪ್ರಕರಣಗಳು ಹಿಂಪಡೆಯಲಾಗುತ್ತಿರುವ ಬಗ್ಗೆ ತಿಳಿದುಬಂದಿದೆ. ಪೋಕ್ಸೊ ಪ್ರಕರಣಗಳ ಸಂಬಂಧ ಸರ್ಕಾರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ: ಎರಡೇ ವರ್ಷದಲ್ಲಿ ಶೇ 26 ರಷ್ಟು ಹೆಚ್ಚಾದ ಪೋಕ್ಸೊ ಕೇಸ್
ಸಾಂದರ್ಭಿಕ ಚಿತ್ರ
Ganapathi Sharma
|

Updated on: Aug 19, 2025 | 8:12 AM

Share

ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ, ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿರುವುದು ಗೊತ್ತಾಗಿದೆ. ಕೇವಲ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಪೋಕ್ಸೊ (Pocso) (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣಗಳ ಸಂಖ್ಯೆ ಶೇ 26 ರಷ್ಟು ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ. ವಿಧಾನ ಪರಿಷತ್ತಿಗೆ (Assembly Session) ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, 2022 ರಲ್ಲಿ ಸುಮಾರು 3,209 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಅದು 2024 ರ ವೇಳೆಗೆ 4,064 ಕ್ಕೆ ಏರಿಕೆಯಾಗಿದೆ. 2025 ರಲ್ಲಿ ಈವರೆಗೆ 2,544 ಪ್ರಕರಣಗಳು ದಾಖಲಾಗಿವೆ.

ಪೋಕ್ಸೊ ಪ್ರಕರಣಗಳು ಹೆಚ್ಚುತ್ತಿದ್ದರೂ, ಅವುಗಳಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಪ್ರಕರಣಗಳು ಖುಲಾಸೆಗೊಳ್ಳುತ್ತವೆ ಮತ್ತು ಶಿಕ್ಷೆಯ ಪ್ರಮಾಣ ಕಡಿಮೆ ಇರುತ್ತದೆ.

2022 ರಲ್ಲಿ ದಾಖಲಾದ 3,209 ಪ್ರಕರಣಗಳಲ್ಲಿ, 1,562 ಪ್ರಕರಣಗಳು ಖುಲಾಸೆಗೊಂಡಿದ್ದವು. ಕೇವಲ 186 ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿತ್ತು. ಇನ್ನೂ 1,224 ಪ್ರಕರಣಗಳು ವಿಚಾರಣೆಯ ಹತದಲ್ಲಿವೆ.

ಜಾಗೃತಿ ಹೆಚ್ಚುತ್ತಿರುವುದು ಕಾರಣ!

ಪೋಕ್ಸೊ ಪ್ರಕರಣಗಳ ಕುರಿತು ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿದೆ. ಮಕ್ಕಳಲ್ಲಿಯೂ ಅರಿವು ಮೂಡಿಸುವ ಕೆಲಸವಾಗುತ್ತಿದೆ. ಜನ ಜಾಗೃತಿ ಹೆಚ್ಚುತ್ತಿರುವುದರಿಂದ ಪ್ರಕರಣಗಳನ್ನು ದಾಖಲಿಸುವ ಸಂಖ್ಯೆಯೂ ಹೆಚ್ಚಾಗಿರಬಹುದು ಎಂದು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪ್ರಕರಣಗಳನ್ನು ಮುಂದುವರಿಸಿಕೊಂಡು ಪೋಷಕರು ಹಿಂಜರಿಯುವುದರಿಂದ ಶಿಕ್ಷೆ ಕಡಿಮೆಯಾಗುತ್ತಿರಬಹುದು. ಅನೇಕ ಪೋಷಕರು ಪ್ರಕರಣವನ್ನು ಹೆಚ್ಚು ಕಾಲ ಮುಂದುವರಿಸಲು ಅಥವಾ ಗುರುತು ಬಹಿರಂಗಪಡಿಸಲು ಬಯಸುವುದಿಲ್ಲ. ಅನೇಕರು ನ್ಯಾಯಾಲಯದ ಹೊರಗೆ ಅದನ್ನು ಇತ್ಯರ್ಥಪಡಿಸಿಕೊಳ್ಳಲು ಮತ್ತು ರಾಜಿ ಮಾಡಿಕೊಳ್ಳಲು ಆಯ್ಕೆ ಮಾಡುತ್ತಾರೆ. ಆದ್ದರಿಂದ, ಶಿಕ್ಷೆಯ ಪ್ರಮಾಣ ಕಡಿಮೆಯಾಗಿರಬಹುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣಗೌಡ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ನಾವು ಜಿಲ್ಲಾ ಮಟ್ಟದಲ್ಲಿ ಸಲಹೆಗಾರರನ್ನು ಒಳಗೊಂಡ ತಂಡಗಳನ್ನು ರಚಿಸಿದ್ದೇವೆ. ಅವರು ಸಂತ್ರಸ್ತರು ಮತ್ತು ಅವರ ಪೋಷಕರೊಂದಿಗೆ ಕೆಲಸ ಮಾಡುತ್ತಾರೆ. ಅವರಿಗೆ ಕಾನೂನು ನೆರವು ಮತ್ತು ನ್ಯಾಯಕ್ಕಾಗಿ ಹೋರಾಡಲು ಸಹಾಯ ಮಾಡಲು ಸಮಾಲೋಚನೆ ನಡೆಸುತ್ತಾರೆ ಎಂದು ಅವರು ಹೇಳಿರುವುದಾಗಿಯೂ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ ಇಲ್ಲಿದೆ

ಕೆಲವು ಪ್ರಕರಣಗಳಲ್ಲಿ ಆರೋಪಿಗಳು ಕುಟುಂಬದ ಸದಸ್ಯರೇ ಆಗಿರುತ್ತಾರೆ ಮತ್ತು ಕುಟುಂಬದ ಒತ್ತಡದಿಂದಾಗಿ ಪೋಷಕರು ಹಿಂದೆ ಸರಿಯುತ್ತಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿಯೂ ವರದಿ ಉಲ್ಲೇಖಿಸಿದೆ.

ಏತನ್ಮಧ್ಯೆ, ಪೋಕ್ಸೊ ಪ್ರಕರಣಗಳ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ವಿಧಾನ ಪರಿಷತ್​ನಲ್ಲಿ ಲಿಖಿತ ಉತ್ತರ ನೀಡಿದ್ದು, ಇಂತಹ ಪ್ರಕರಣಗಳನ್ನು ತಡೆಗಟ್ಟಲು, ಮಕ್ಕಳು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ