ಬೆಂಗಳೂರು: ಖ್ಯಾತ ಕವಿ, ಸಾಹಿತಿ, ದಲಿತ ಹೋರಾಟಗಾರ ಡಾ. ಸಿದ್ದಲಿಂಗಯ್ಯ ಇಂದು (ಜೂನ್ 11) ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಕೊವಿಡ್-19 ಸೋಂಕಿನ ವಿರುದ್ಧ ಹೋರಾಡಿದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ವಿಧಾನಪರಿಷತ್‌ನ ಮಾಜಿ ಸದಸ್ಯರೂ ಆಗಿದ್ದ ಸಿದ್ದಲಿಂಗಯ್ಯ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ದಲಿತರ ನೋವನ್ನು ಸಮರ್ಥವಾಗಿ ಅಕ್ಷರ ರೂಪಕ್ಕಿಳಿಸಿ, ಅವರನ್ನು ಜಾಗೃತಗೊಳಿಸಿದವರು ಡಾ. ಸಿದ್ದಲಿಂಗಯ್ಯ. ನೋವಿನ ಕೆಂಡವನ್ನೇ ಒಡಲೊಳಗಿರಿಸಿಕೊಂಡ ಅವರ ಕವನಗಳು ದಲಿತ ಚಳವಳಿಗೆ ಕಾವು ನೀಡಿತ್ತು ಎಂದು ಬರೆದುಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಅವರ ನಿಧನದಿಂದ, ಸಾಮಾಜಿಕ ಕಳಕಳಿಯ ಅಪೂರ್ವ ಸಾಹಿತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.
ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ದಲಿತರ ನೋವನ್ನು ಸಮರ್ಥವಾಗಿ ಅಕ್ಷರ ರೂಪಕ್ಕಿಳಿಸಿ, ಅವರನ್ನು ಜಾಗೃತಗೊಳಿಸಿದವರು ಡಾ. ಸಿದ್ದಲಿಂಗಯ್ಯ. ನೋವಿನ ಕೆಂಡವನ್ನೇ ಒಡಲೊಳಗಿರಿಸಿಕೊಂಡ ಅವರ ಕವನಗಳು ದಲಿತ ಚಳವಳಿಗೆ ಕಾವು ನೀಡಿತ್ತು. (1/2)
— CM of Karnataka (@CMofKarnataka) June 11, 2021
ಕವಿ, ಆತ್ಮೀಯ ಮಿತ್ರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಸಾವನ್ನು ಮೀರಿದ ಸಾಹಿತ್ಯದ ಮೂಲಕ ಅವರು ಅಜರಾಮರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ವಿಧಾನಪರಿಷತ್‌ನ ಮಾಜಿ ಸದಸ್ಯ ಮತ್ತು ನನ್ನ ಆತ್ಮೀಯ ಮಿತ್ರ ಸಿದ್ದಲಿಂಗಯ್ಯನವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಸಾವನ್ನು ಮೀರಿದ ಸಾಹಿತ್ಯದ ಮೂಲಕ ಅವರು ಅಜರಾಮರ. ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.
ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ವಿಧಾನಪರಿಷತ್‌ನ ಮಾಜಿ ಸದಸ್ಯ ಮತ್ತು ನನ್ನ ಆತ್ಮೀಯ ಮಿತ್ರ ಸಿದ್ದಲಿಂಗಯ್ಯನವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ಸಾವನ್ನು ಮೀರಿದ
ಸಾಹಿತ್ಯದ ಮೂಲಕ ಅವರು ಅಜರಾಮರ.ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/ivXQqgzy84
— Siddaramaiah (@siddaramaiah) June 11, 2021
ಕನ್ನಡದ ಪ್ರಮುಖ ಲೇಖಕ, ದಲಿತ ಕವಿ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿರುವವರು.
ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ ಜನಿಸಿದ ಸಿದ್ದಲಿಂಗಯ್ಯನವರ ಜಿಲ್ಲೆಯಿಂದಲೇ ನಾನು ರಾಜಕೀಯ ಪ್ರವೇಶ ಮಾಡಿದ್ದು ಎಂಬುದನ್ನು ವಿನಮ್ರತೆಯಿಂದ ಸ್ಮರಿಸಿಕೊಳ್ಳುತ್ತೇನೆ. ಸಿದ್ಧಲಿಂಗಯ್ಯನವರ ಸೃಜನಶೀಲ ಸಾಹಿತ್ಯ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ಡಾ. ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ. ಅಂಬೇಡ್ಕರ್ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ ಗಳಿಗೆ ಭಾಜನರಾಗಿದ್ದರು.
ಕವಿ ಡಾ.ಸಿದ್ದಲಿಂಗಯ್ಯ ಅವರು ಶ್ರವಣಬೆಳಗೊಳದಲ್ಲಿ ನಡೆದ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ 1988-94, 1995-2001 ರವರೆಗೆ ಎರಡುಬಾರಿ ನಾಮಕರಣಗೊಂಡಿರುವುದರ ಜೊತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ 2006-08 ಅವಧಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
‘ಆ ಬೆಟ್ಟದಲ್ಲಿ ಬೆಳದಿಂಗಳಲ್ಲಿ ಸುಳಿದಾಡ ಬೇಡ ಗೆಳತಿ..’ ಎರಡು ಚಲನ ಚಿತ್ರಗಳಲ್ಲಿ ಗೀತೆ ಬಳಕೆ ಮಾಡಿಕೊಳ್ಳಲಾಗಿದೆ. ಪುಟ್ಟಣ್ಣ ಕಣಗಾಲ್ ಅವರ ಧರಣಿ ಮಂಡಲ ಮಧ್ಯದೊಳಗೆ ಚಿತ್ರದ ಗೆಳತಿ ಓ ಗೆಳತಿ.. ಇವು ಬಂಡಾಯ ಕವಿಯ ಪ್ರೇಮ ಗೀತೆಗಳು. ಅವರಗೊಳ ಗಿದ್ದ ವ್ಯವಸ್ಥೆಯ ಬಗೆಗಿನ ಕಿಚ್ಚು ಜೊತೆಯಲ್ಲೇ ಒಬ್ಬ ಅಪ್ಪಟ ಪ್ರೇಮಿಯು ಇದ್ದ ಎಂಬುದಕ್ಕೆ ಮೇಲಿನ ಗೀತೆಗಳು ಸದಾ ಹಸಿರು. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಅವರ ಸಾಹಿತ್ಯಾಭಿಮಾನಿಗಳಿಗೆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯದ ಅಗ್ರಗಣ್ಯ ಲೇಖಕ, ದಲಿತ ಕವಿ ಡಾ. ಸಿದ್ದಲಿಂಗಯ್ಯ ಅವರು ಕರುಣೆ ಇಲ್ಲದ ಕೊರೊನಾ ಕೈಗೆ ಸಿಕ್ಕು, ‘ಊರು ಕೇರಿ’ ತೊರೆದು ಹೋಗಿದ್ದಾರೆ. ಇದು ಕನ್ನಡ ಸಾಂಸ್ಕೃತಿಕ ಲೋಕಕ್ಕೆ ದೊಡ್ಡ ಆಘಾತ . ಡಾ. ಸಿದ್ದಲಿಂಗಯ್ಯ ನನ್ನ ಅತ್ಯಂತ ಆತ್ಮೀಯ ಮಿತ್ರರಾಗಿದ್ದರು ಎಂದು ಅರವಿಂದ ಲಿಂಬಾವಳಿ ಬರೆದುಕೊಂಡಿದ್ದಾರೆ.
ಕನ್ನಡ ಸಾಹಿತ್ಯದ ಅಗ್ರಗಣ್ಯ ಲೇಖಕ, ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರು ಕರುಣೆ ಇಲ್ಲದ ಕರೋನಾ ಕೈಗೆ ಸಿಕ್ಕು, ‘ಊರು ಕೇರಿ’ ತೊರೆದು ಹೋಗಿದ್ದಾರೆ. ಇದು ಕನ್ನಡ ಸಾಂಸ್ಕೃತಿಕ ಲೋಕಕ್ಕೆ ದೊಡ್ಡ ಆಘಾತ .
ಡಾ.ಸಿದ್ದಲಿಂಗಯ್ಯ ನನ್ನ ಅತ್ಯಂತ ಆತ್ಮೀಯ ಮಿತ್ರರಾಗಿದ್ದರು, 1/2 https://t.co/4SP6HVLiBd pic.twitter.com/OurL7GymXJ— Aravind Limbavali (@ArvindLBJP) June 11, 2021
ಸಾವಿರಾರು ಶಿಷ್ಯರ ಪಾಲಿಗೆ ಪ್ರೀತಿಯ ಮೇಷ್ಟ್ರು, ಅತ್ಯಂತ ಸರಳ, ನೇರ ನಡೆ, ಸದಾ ಹಾಸ್ಯಭರಿತ ಮಾತುಗಳಿಂದಲೇ ಎದುರಿಗಿದ್ದವರನ್ನು ಮೋಡಿ ಮಾಡುವ ಮಾತುಗಾರ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಸಿದ್ದಲಿಂಗಯ್ಯ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಲಿಂಬಾವಳಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಕಾಂಗ್ರೆಸ್, ಬಿಜೆಪಿ ಕರ್ನಾಟಕ, ಪ್ರಲ್ಹಾದ್ ಜೋಶಿ, ಪ್ರಿಯಾಂಕ್ ಖರ್ಗೆ, ಜಗದೀಶ್ ಶೆಟ್ಟರ್, ಪ್ರತಾಪ್ ಸಿಂಹ, ಸಿ.ಪಿ. ಯೋಗೇಶ್ವರ್ ಸಹಿತ ಹಲವು ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಬಂಡಾಯ ಸಾಹಿತ್ಯದ ಮೇರು ಕವಿ, ನಾಡೋಜ ಡಾ. ಸಿದ್ದಲಿಂಗಯ್ಯ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ.
ಅಂಬೇಡ್ಕರ್, ಲೋಹಿಯಾ, ಪೆರಿಯಾರ್ ಅಂತವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದ ಸಿದ್ದಲಿಂಗಯ್ಯನವರ ನಿಧನವು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.
ಅವರ ಕುಟುಂಬ ಹಾಗೂ ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 11, 2021
ನಾಡಿನ ಹಿರಿಯ ಸಾಹಿತಿ ನಾಡೋಜ ಡಾ. ಸಿದ್ದಲಿಂಗಯ್ಯ ಅವರು ವಿಧಿವಶರಾದ ಸುದ್ದಿ ತಿಳಿದು ಮನಸ್ಸಿಗೆ ನೋವುಂಟಾಗಿದೆ.
ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುವೆ. pic.twitter.com/l7IPCSNLWB
— Jagadish Shettar (@JagadishShettar) June 11, 2021
ಹಿರಿಯ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ನವರು ವಿಧಿವಶರಾಗಿರುವ ವಿಷಯ ತಿಳಿದು ಮನಸ್ಸಿಗೆ ತುಂಬಾ ಆಘಾತವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/62U0opu84x
— Pralhad Joshi (@JoshiPralhad) June 11, 2021
ಪಂಪ, ನಾಡೋಜ ಪ್ರಶಸ್ತಿ ಪುರಸ್ಕೃತ ಖ್ಯಾತ ಕವಿ ಮತ್ತು ಮಾಜಿ ವಿಧಾನಪರಿಷತ್ ಸದಸ್ಯರಾದ
ಡಾ.ಸಿದ್ದಲಿಂಗಯ್ಯ ಅವರ
ನಿಧನ ನಾಡಿಗೆ ಬಹುದೊಡ್ಡ ನಷ್ಟವಾಗಿದೆ.
ಮೃತರಿಗೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ. pic.twitter.com/Oym7RoipHc— C.P Yogeeshwara | ಸಿ.ಪಿ ಯೋಗೇಶ್ವರ (@CPYogeeshwara) June 11, 2021
ಬಂಡಾಯ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದ, ವಿಧಾನಪರಿಷತ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದ ನಾಡಿನ ಹಿರಿಯ ಸಾಹಿತಿ ಡಾ. ಸಿದ್ದಲಿಂಗಯ್ಯ ಅವರ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.
ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಅಗಲಿಕೆ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. pic.twitter.com/BQ8Jt9Bvrm
— Karnataka Congress (@INCKarnataka) June 11, 2021
ಸಾಹಿತಿ, ಖ್ಯಾತ ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. pic.twitter.com/lO8Hj7GhsO
— Pratap Simha (@mepratap) June 11, 2021
ಸಾಹಿತಿ, ಖ್ಯಾತ ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. pic.twitter.com/LpVljKNCtP
— BJP Karnataka (@BJP4Karnataka) June 11, 2021
ಪ್ರೊ. ಬಿ. ವಿವೇಕ ರೈ, ಹಿರಿಯ ಸಾಹಿತಿ
ನಲವತ್ತು ವರ್ಷಗಳಿಂದ ಆಪ್ತ ಸ್ನೇಹಿತರು. ಅವರು ಜಿಎಸ್ಎಸ್ ಅವರ ಮಾರ್ಗದರ್ಶನದಲ್ಲಿ ಗ್ರಾಮ ದೇವತೆಗಳ ಕುರಿತು ಡಾಕ್ಟರೇಟ್ ಮಾಡುತ್ತಿದ್ದ ಸಂದರ್ಭದಲ್ಲಿ ನಾನು ಸಂಶೋಧನಾ ಮೌಲ್ಯಮಾಪಕನಾಗಿದ್ದೆ. ನಂತರ 1988ರಿಂದ ಆಪ್ತಸ್ನೇಹಿತರಾದೆವು. ನನಗಿಂತ ಕಿರಿಯರಿರಬಹುದು ಆದರೆ ಮಂಗಳೂರಿನಿಂದ ಬೆಂಗಳೂರಿಗೆ ಬಂದಾಗ ಭೇಟಿ ಮಾಡದೆ ಹೋಗುತ್ತಿರಲಿಲ್ಲ. ವಿಧಾನ ಪರಿಷತ್ ಸದಸ್ಯರಾದಾಗ ದಲಿತರಾಗಲಿ ಅಥವಾ ಯಾರೇ ಸಮಸ್ಯೆ ಎಂದು ಬರಲಿ ಸ್ವಂತ ಖರ್ಚಿನಲ್ಲಿ ಊಟೋಪಚಾರ ವ್ಯವಸ್ಥೆ ಮಾಡುತ್ತಿದ್ದರು. ಅಕ್ಷರ ಬಾರದವರಿಗೆಲ್ಲ ತಮ್ಮ ಟೈಪಿಸ್ಟ್ ಮೂಲಕ ಅರ್ಜಿ, ಪತ್ರಗಳನ್ನು ತಯಾರಿಸುತ್ತಿದ್ದರು.
ನಾನು ಜರ್ಮನಿಯಲ್ಲಿದ್ಧಾಗ ಜರ್ಮನ್ ವಿದ್ಯಾರ್ಥಿಗಳಿಗೆ ಇವರ ‘ಸಾವಿರಾರು ನದಿಗಳು’ ಪಾಠ ಮಾಡುತ್ತಿದ್ದೆ. ಜರ್ಮನಿಗೆ ಇದನ್ನು ಅನುವಾದಿಸಬೇಕೆಂದುಕೊಂಡೆ, ಆಗಲಿಲ್ಲ. ಅವರ ‘ಅವತಾರಗಳು’ ಪುಸ್ತಕವನ್ನು (2009ನೇ ಆವೃತ್ತಿ) ನನಗೇ ಅರ್ಪಿಸಿದಾರೆ. ಅವರು ಮಾತುಗಳು ಅಂಬೇಡ್ಕರ್, ಬಸವಣ್ಣ, ಮುಂತಾದವರ ವಚನಗಳ ಒಳನೋಟಗಳಿಂದ ಕೂಡಿರುತ್ತಿದ್ದವು. ಅವರ ಹಾಸ್ಯಪ್ರಸಂಗಗಳ ಹಿಂದೆ ಮಾನವೀಯ ಕಾಳಜಿ ಸದಾ ಇರುತ್ತಿತ್ತು.
ಇದನ್ನೂ ಓದಿ: ದಲಿತ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ಕೊರೊನಾದಿಂದ ನಿಧನ
Published On - 7:09 pm, Fri, 11 June 21