ಸೋನಿಯಾ ವಿರುದ್ಧ FIR: ಗೃಹ ಸಚಿವ ಬೊಮ್ಮಾಯಿ ಏನಂದ್ರು?

ಮೈಸೂರು: ಪ್ರಧಾನಿ ಮೋದಿ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ವಿಚಾರದಲ್ಲಿ ಕಾಂಗ್ರೆಸ್‌ನವರು ದಿನಕ್ಕೊಂದು ಬೇಡಿಕೆಯನ್ನು ಇಡುತ್ತಾರೆ. ಯಾರೇ ದೂರು ನೀಡಿದರೂ FIR ದಾಖಲಿಸುವ ಕಾನೂನು ಇದೆ. ಸುಪ್ರೀಂಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ದೇಶದ ಕಾನೂನು ಎಲ್ಲರಿಗೂ ಒಂದೇ ತನಿಖೆಯಲ್ಲಿ ಏನು ಮಾಡಬೇಕೊ ಅದನ್ನು ಪೊಲೀಸ್ ಅಧಿಕಾರಿಗಳು ಮಾಡುತ್ತಾರೆ. ಕಾಂಗ್ರೆಸ್‌ನವರು ಅರ್ನಬ್ ಗೋಸ್ವಾಮಿ ವಿರುದ್ಧ FIR ಹಾಕಿಸಿದರು. […]

ಸೋನಿಯಾ ವಿರುದ್ಧ FIR: ಗೃಹ ಸಚಿವ ಬೊಮ್ಮಾಯಿ ಏನಂದ್ರು?
ಸಾಧು ಶ್ರೀನಾಥ್​

Updated on: May 22, 2020 | 3:02 PM

ಮೈಸೂರು: ಪ್ರಧಾನಿ ಮೋದಿ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ವಿಚಾರದಲ್ಲಿ ಕಾಂಗ್ರೆಸ್‌ನವರು ದಿನಕ್ಕೊಂದು ಬೇಡಿಕೆಯನ್ನು ಇಡುತ್ತಾರೆ. ಯಾರೇ ದೂರು ನೀಡಿದರೂ FIR ದಾಖಲಿಸುವ ಕಾನೂನು ಇದೆ. ಸುಪ್ರೀಂಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ದೇಶದ ಕಾನೂನು ಎಲ್ಲರಿಗೂ ಒಂದೇ
ತನಿಖೆಯಲ್ಲಿ ಏನು ಮಾಡಬೇಕೊ ಅದನ್ನು ಪೊಲೀಸ್ ಅಧಿಕಾರಿಗಳು ಮಾಡುತ್ತಾರೆ. ಕಾಂಗ್ರೆಸ್‌ನವರು ಅರ್ನಬ್ ಗೋಸ್ವಾಮಿ ವಿರುದ್ಧ FIR ಹಾಕಿಸಿದರು. ದೇಶದಾದ್ಯಂತ 1500ಕ್ಕೂ ಹೆಚ್ಚು FIR ದಾಖಲು ಮಾಡಿದ್ದಾರೆ. ಆಗ ಈ ನಿಲುವು, ನ್ಯಾಯ ಕಾಂಗ್ರೆಸ್‌ನವರಿಗೆ ಗೊತ್ತಿರಲಿಲ್ಲವೇ? ಈ ದೇಶದ ಕಾನೂನು ಎಲ್ಲರಿಗೂ ಅನ್ವಯವಾಗುತ್ತದೆ. ಹೀಗಾಗಿ ಕಾನೂನು ತನ್ನ ಕೆಲಸವನ್ನು ಮಾಡುತ್ತಾ ಇರುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us