Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಹೇಳಿಕೆ ಪಡೆಯುಲು ಪೊಲೀಸರಿಂದ ಸಿದ್ಧತೆ

ಯುವತಿ ಹೇಳಿಕೆ ಪಡೆದು ಬಳಿಕ ಮ್ಯಾಜಿಸ್ಟ್ರೇಟ್ ಮುಂದೆ 164 ಸ್ಟೇಟ್ಮೆಂಟ್ ಮಾಡಿಸಲು ಚಿಂತನೆ ನಡೆಸಿದ ಜೊತೆಗೆ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ರಾಮಮೂರ್ತಿನಗರ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ಕೆಲಕಾಲ ವಿಚಾರಣೆಯನ್ನು ನಡೆಸಿದ್ದಾರೆ.

ಬಾಂಗ್ಲಾ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಹೇಳಿಕೆ ಪಡೆಯುಲು ಪೊಲೀಸರಿಂದ ಸಿದ್ಧತೆ
ಆರೋಪಿಗಳಾದ ರಿದಾಯ್ ಬಾಬು ಮತ್ತು ಸಾಗರ್‌
Follow us
sandhya thejappa
|

Updated on: May 29, 2021 | 11:55 AM

ಬೆಂಗಳೂರು: ಬಾಂಗ್ಲಾ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು (ಮೇ 29) ಸಂತ್ರಸ್ತೆಯ ಹೇಳಿಕೆ ಪಡೆಯುಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಇರುವವರ ಜೊತೆ ಬೇರೆಯವರು ಇದ್ದಾರಾ? ಯಾರೆಲ್ಲಾ ಕಿರುಕುಳ ನೀಡಿದ್ದಾರೆ? ಯಾವ ಕಾರಣಕ್ಕಾಗಿ ಗಲಾಟೆ, ಲೈಂಗಿಕ ದೌರ್ಜನ್ಯ ಎಸಗಿದ್ದರು? ಆರೋಪಿಗಳು ನಿಮಗೆ ಹೇಗೆ ಪರಿಚಯ? ದೌರ್ಜನ್ಯ ನಡೆದಿದ್ದರೂ ದೂರು ಕೊಡದಿರಲು ಕಾರಣವೇನು? ಯಾರಾದರೂ ಬೆದರಿಕೆ ಹಾಕಿದ್ರಾ? ಎಂದು ಕೃತ್ಯದ ಬಗ್ಗೆ ಸಂತ್ರಸ್ತ ಯುವತಿಯಿಂದ ಪೊಲೀಸರು ಹೇಳಿಕೆ ಪಡೆಯಲಿದ್ದಾರೆ.

ಯುವತಿ ಹೇಳಿಕೆ ಪಡೆದು ಬಳಿಕ ಮ್ಯಾಜಿಸ್ಟ್ರೇಟ್ ಮುಂದೆ 164 ಸ್ಟೇಟ್ಮೆಂಟ್ ಮಾಡಿಸಲು ಚಿಂತನೆ ನಡೆಸಿದ ಜೊತೆಗೆ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ರಾಮಮೂರ್ತಿನಗರ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ಕೆಲಕಾಲ ವಿಚಾರಣೆಯನ್ನು ನಡೆಸಿದ್ದಾರೆ.

ಗುಂಡೇಟು ತಿಂದಿರುವವರ ಬಗ್ಗೆ ಮಾಹಿತಿ ಕೃತ್ಯ ಎಸಗಿದ ಇಬ್ಬರ ಬಗ್ಗೆ ಯುವತಿ ಮಾಹಿತಿ ನೀಡಿದ್ದಾರೆ. ಶೂಟೌಟ್​ಗೆ ಒಳಗಾದ ರಖೀಬುಲ್ ಇಸ್ಲಾಂ ಸಾಗರ್ ಮತ್ತು ರಿದಯ್ ಬಾಬು ಬಗ್ಗೆ ಹಾಗೂ ವಿಡಿಯೋದಲ್ಲಿದ್ದ ಮತ್ತೊಬ್ಬ ವ್ಯಕ್ತಿ ಹಾಗೂ ಮಹಿಳೆ ಬಗ್ಗೆ ಯುವತಿ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ವಿಡಿಯೋದಲ್ಲಿ ಇರುವವರು ಯಾರು ಎಂದು ಪೊಲೀಸರು ವಿಚಾರಿಸಿದ್ದಾರೆ. ಈ ವೇಳೆ ಘಟನೆ ಸಮಯದಲ್ಲಿ ಯಾರು ಯಾರು ಇದ್ದರು ಎಂಬುದನ್ನು ಸಂತ್ರಸ್ತ ಯುವತಿ ಹೇಳಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಓರ್ವ ಮಹಿಳೆ ಮತ್ತು ವ್ಯಕ್ತಿಗಾಗಿ ಪೊಲೀಸರ ಶೋಧ ಕಾರ್ಯ ಮುಂದುವರೆದಿದೆ.

ಘಟನೆ ಏನು? ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಈ ಕೇಸ್​ನಲ್ಲಿ ಶಾಮೀಲಾದವರೆಲ್ಲ ಬಾಂಗ್ಲಾ ದೇಶದ ಮೂಲದವರು. ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನ ರಾಮಮೂರ್ತಿ ನಗರದ ಎನ್ಆರ್​ಐ ಕಾಲೋನಿಯಲ್ಲಿ ವಾಸವಾಗಿದ್ರು. ಇಷ್ಟು ದಿನ ಸೈಲೆಂಟಾಗಿ ವೇಶ್ಯಾವಾಟಿಕೆ ಮಾಡಿಕೊಂಡು ದುಡ್ ಮಾಡ್ತಿದ್ರು. ಎಲ್ರು ಖುಷಿಯಾಗೆ ಲೈಫ್ ಎಂಜಾಯ್ ಮಾಡ್ತಿದ್ರು. ಆದ್ರೆ, ಸ್ನೇಹಿತರ ಮಧ್ಯೆ ಅದು ಏನ್ ದ್ವೇಷ ಇತ್ತೋ ಗೊತ್ತಿಲ್ಲ. ಕಳೆದ 10 ದಿನಗಳ ಹಿಂದೆ ಬಾಂಗ್ಲಾ ಮೂಲದ ಯುವತಿ ಮೇಲೆ ಯುವಕರು ಎರಗಿದ್ದಾರೆ. ಅದು ಕೂಡ ಇಬ್ಬರು ಯುವಕರು ಯುವತಿಯ ಕೈ, ಬಾಯಿ ಗಟ್ಟಿಯಾಗಿ ಮುಚ್ಚಿಕೊಂಡಿದ್ರೆ, ಉಳಿದವರು ಅಟ್ಟಹಾಸ ಮೆರೆದಿದ್ದಾರೆ. ಎಲ್ಲವನ್ನೂ ಮೊಬೈಲ್​ನಲ್ಲಿ ದೃಶ್ಯ ಸೆರೆ ಹಿಡಿದು, ವೈರಲ್ ಮಾಡಿದ್ದಾರೆ.

ಇದನ್ನೂ ಓದಿ

Bengaluru Gang Rape: ಬೆಂಗಳೂರು ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಕಲ್ಲಿಕೋಟೆಯಲ್ಲಿ ಪತ್ತೆ

ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್; ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳಿಗೆ ಗುಂಡೇಟು

(Police are preparing to obtain information from a young woman who has been raped in bengaluru)

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ