ಬಿಬಿಎಂಪಿಯಿಂದ ಬೆಡ್​ ಬುಕ್ಕಿಂಗ್ ಹಗರಣ: ಇಬ್ಬರನ್ನು ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸರು

ಬೆಡ್​ ಬುಕಿಂಗ್​ ದಂಧೆಗೆ ಸಂಬಂಧಪಟ್ಟಂತೆ ಇನ್ನಿಬ್ಬರನ್ನು ಬಂಧಿಸಿರುವ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಈ ದಂಧೆಯಲ್ಲಿ ಪಾತ್ರವಹಿಸಿದ್ದಾರೆ ಎನ್ನಲಾದ ರೋಹಿತ್​ ಮತ್ತು ನೇತ್ರಾ ಬಂಧಿತರು.

  • TV9 Web Team
  • Published On - 19:33 PM, 4 May 2021
ಬಿಬಿಎಂಪಿಯಿಂದ ಬೆಡ್​ ಬುಕ್ಕಿಂಗ್ ಹಗರಣ: ಇಬ್ಬರನ್ನು ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸರು
ಬೆಡ್ ಬುಕ್ಕಿಂಗ್ ಹಗರಣದಲ್ಲಿ ಬಂಧಿತರು

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳಿಂದ ನಡೆಯುತ್ತಿದ್ದ ಬಹುದೊಡ್ಡ ಬುಕ್ಕಿಂಗ್​ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಉದಯ ಗರುಡಾಚಾರ್, ಸತೀಶ್ ರೆಡ್ಡಿ ಇತರರು ಸೇರಿ ಬಯಲಿಗೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಿತ್ ಎಂಬಾತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಇದೀಗ ಈ ಬೆಡ್​ ಬುಕಿಂಗ್​ ದಂಧೆಗೆ ಸಂಬಂಧಪಟ್ಟಂತೆ ಇನ್ನಿಬ್ಬರನ್ನು ಬಂಧಿಸಿರುವ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಈ ದಂಧೆಯಲ್ಲಿ ಪಾತ್ರವಹಿಸಿದ್ದಾರೆ ಎನ್ನಲಾದ ರೋಹಿತ್​ ಮತ್ತು ನೇತ್ರಾ ಎಂಬುವರನ್ನು ಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

ಬಂಧಿತ ರೋಹಿತ್​ ಹಾಗೂ ನೇತ್ರಾರನ್ನು ಪೊಲೀಸರು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದ್ದು, ಇವರ ಜತೆ ಇನ್ಯಾರೆಲ್ಲ ಇದ್ದಾರೆ ಎಂಬ ಬಗ್ಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: 12 ಆಸ್ಪತ್ರೆಗಳಲ್ಲಿ ರಾತ್ರೋರಾತ್ರಿ ಬಿಬಿಎಂಪಿಯಿಂದ ಬೆಡ್ ಬುಕ್ಕಿಂಗ್ ದಂದೆ: ಇದು ಭ್ರಷ್ಟಾಚಾರ ಅಲ್ಲ, ಸೋಂಕಿತರ ಹತ್ಯೆ – ಸಂಸದ ತೇಜಸ್ವಿ ಸೂರ್ಯ

Explained: ಐಪಿಎಲ್ ಅರ್ಧಕ್ಕೆ ಸ್ಥಗಿತ! ಬಿಸಿಸಿಐಗಾಗುವ ನಷ್ಟವೆಷ್ಟು.. ಆಟಗಾರರ ಸಂಬಳದ ಹಂಚಿಕೆ ಹೇಗೆ? ಇಲ್ಲಿದೆ ಮಾಹಿತಿ

ನಟ ಹರ್ಷವರ್ಧನ್ ರಾಣೆ ಆಮ್ಲಜನಕ ಖರೀದಿಸಲು ತಮ್ಮ ಬೈಕ್ ಮಾರಿದ್ದಾರೆ!