ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳಿಂದ ನಡೆಯುತ್ತಿದ್ದ ಬಹುದೊಡ್ಡ ಬುಕ್ಕಿಂಗ್ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಉದಯ ಗರುಡಾಚಾರ್, ಸತೀಶ್ ರೆಡ್ಡಿ ಇತರರು ಸೇರಿ ಬಯಲಿಗೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಿತ್ ಎಂಬಾತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಇದೀಗ ಈ ಬೆಡ್ ಬುಕಿಂಗ್ ದಂಧೆಗೆ ಸಂಬಂಧಪಟ್ಟಂತೆ ಇನ್ನಿಬ್ಬರನ್ನು ಬಂಧಿಸಿರುವ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಈ ದಂಧೆಯಲ್ಲಿ ಪಾತ್ರವಹಿಸಿದ್ದಾರೆ ಎನ್ನಲಾದ ರೋಹಿತ್ ಮತ್ತು ನೇತ್ರಾ ಎಂಬುವರನ್ನು ಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.
ಬಂಧಿತ ರೋಹಿತ್ ಹಾಗೂ ನೇತ್ರಾರನ್ನು ಪೊಲೀಸರು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದ್ದು, ಇವರ ಜತೆ ಇನ್ಯಾರೆಲ್ಲ ಇದ್ದಾರೆ ಎಂಬ ಬಗ್ಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.