ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಕೇಸ್: ಆಟೋ ಚಾಲಕ ಖಾಕಿ ವಶಕ್ಕೆ

|

Updated on: Jan 21, 2020 | 11:28 AM

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆಟೋ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ವ್ಯಕ್ತಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಆಟೋದಲ್ಲಿ ಬಂದಿದ್ದ ವ್ಯಕ್ತಿ ಸಜೀವ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಸಿಸಿಟಿವಿ ದೃಶ್ಯ ಆಧರಿಸಿ ಶಂಕಿತ ಆಟೋ ಗುರುತು ಪತ್ತೆ ಹಚ್ಚಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಚಾಲಕನ ಬಳಿ ಬ್ಯಾಗ್ ಇಟ್ಟುಹೋಗಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ. KIALನಲ್ಲಿ […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಕೇಸ್: ಆಟೋ ಚಾಲಕ ಖಾಕಿ ವಶಕ್ಕೆ
Follow us on

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆಟೋ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ವ್ಯಕ್ತಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಆಟೋದಲ್ಲಿ ಬಂದಿದ್ದ ವ್ಯಕ್ತಿ ಸಜೀವ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಸಿಸಿಟಿವಿ ದೃಶ್ಯ ಆಧರಿಸಿ ಶಂಕಿತ ಆಟೋ ಗುರುತು ಪತ್ತೆ ಹಚ್ಚಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಚಾಲಕನ ಬಳಿ ಬ್ಯಾಗ್ ಇಟ್ಟುಹೋಗಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.

KIALನಲ್ಲಿ ಮುಂದುವರಿದ ರೆಡ್ ಅಲರ್ಟ್:
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಆದ ಹಿನ್ನೆಲೆ ದೇವನಹಳ್ಳಿಯ KIALನಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ಜನವರಿ28ರವರೆಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲು ತೀರ್ಮಾನಿಸಲಾಗಿದೆ. ಕೆಐಎಎಲ್ ಬಳಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, ಶ್ವಾನದಳ, ಕೆಎಸ್‌ಆರ್‌ಪಿ ತುಕಡಿ, ಪೊಲೀಸರ ನಿಯೋಜನೆ ಮಾಡಲಾಗಿದೆ.

Published On - 8:22 am, Tue, 21 January 20