ಬೈಕ್ ಕಳ್ಳತನ, ರಾಬರಿ ಮಾಡುತ್ತಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ
ಸೊಲದೇವನಹಳ್ಳಿಯ ಆಚಾರ್ಯ ಕಾಲೇಜ್ ಬಳಿ ಸುತ್ತಾಡುತ್ತಿದ್ದ ಆರೋಪಿ ಗಣೇಶ್(24) ಅಲಿಯಾಸ್ ಗಣಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವಿಚಾರಣೆ ವೇಳೆ ಮಾಡಿರುವ ಅಪರಾಧ ಕೃತ್ಯಗಳ ಬಗ್ಗೆ ಆತ ಬಾಯಿಬಿಟ್ಟಿದ್ದಾನೆ.

ಆರೋಪಿ ಗಣೇಶ್
ಬೆಂಗಳೂರು: ಬೈಕ್ ಕಳ್ಳತನ ಮತ್ತು ರಾಬರಿ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಸೊಲದೇವನಹಳ್ಳಿಯಲ್ಲಿ ನಡೆದಿದೆ.
ಸೊಲದೇವನಹಳ್ಳಿಯ ಆಚಾರ್ಯ ಕಾಲೇಜ್ ಬಳಿ ಸುತ್ತಾಡುತ್ತಿದ್ದ ಆರೋಪಿ ಗಣೇಶ್ (24) ಅಲಿಯಾಸ್ ಗಣಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವಿಚಾರಣೆ ವೇಳೆ ಮಾಡಿರುವ ಅಪರಾಧ ಕೃತ್ಯಗಳ ಬಗ್ಗೆ ಆತ ಬಾಯಿಬಿಟ್ಟಿದ್ದಾನೆ.
ಬಂಧಿತನಿಂದ 3.5 ಲಕ್ಷ ಮೌಲ್ಯದ 3 ದ್ವಿಚಕ್ರ ವಾಹನ, 57 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಸೊಲದೇವನಹಳ್ಳಿ ಪೊಲೀಸರು ಒಪ್ಪಿಸಿದ್ದಾರೆ.

ಗಣೇಶ್
ಬೆಂಗಳೂರಿನಲ್ಲಿ ಬೈಕ್ ಕದ್ದು ಆಂಧ್ರದಲ್ಲಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್