ಬೈಕ್ ಕಳ್ಳತನ, ರಾಬರಿ ಮಾಡುತ್ತಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ

ಸೊಲದೇವನಹಳ್ಳಿಯ ಆಚಾರ್ಯ ಕಾಲೇಜ್ ಬಳಿ ಸುತ್ತಾಡುತ್ತಿದ್ದ ಆರೋಪಿ ಗಣೇಶ್(24) ಅಲಿಯಾಸ್ ಗಣಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವಿಚಾರಣೆ ವೇಳೆ ಮಾಡಿರುವ ಅಪರಾಧ ಕೃತ್ಯಗಳ ಬಗ್ಗೆ ಆತ ಬಾಯಿಬಿಟ್ಟಿದ್ದಾನೆ.

ಬೈಕ್ ಕಳ್ಳತನ, ರಾಬರಿ ಮಾಡುತ್ತಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ
ಆರೋಪಿ ಗಣೇಶ್
Edited By: ಸಾಧು ಶ್ರೀನಾಥ್​

Updated on: Jan 19, 2021 | 4:54 PM

ಬೆಂಗಳೂರು: ಬೈಕ್​ ಕಳ್ಳತನ ಮತ್ತು ರಾಬರಿ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಸೊಲದೇವನಹಳ್ಳಿಯಲ್ಲಿ ನಡೆದಿದೆ.

ಸೊಲದೇವನಹಳ್ಳಿಯ ಆಚಾರ್ಯ ಕಾಲೇಜ್ ಬಳಿ ಸುತ್ತಾಡುತ್ತಿದ್ದ ಆರೋಪಿ ಗಣೇಶ್ (24) ಅಲಿಯಾಸ್ ಗಣಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವಿಚಾರಣೆ ವೇಳೆ ಮಾಡಿರುವ ಅಪರಾಧ ಕೃತ್ಯಗಳ ಬಗ್ಗೆ ಆತ ಬಾಯಿಬಿಟ್ಟಿದ್ದಾನೆ.

ಬಂಧಿತನಿಂದ 3.5 ಲಕ್ಷ ಮೌಲ್ಯದ 3 ದ್ವಿಚಕ್ರ ವಾಹನ, 57 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಸೊಲದೇವನಹಳ್ಳಿ ಪೊಲೀಸರು ಒಪ್ಪಿಸಿದ್ದಾರೆ.

ಗಣೇಶ್

ಬೆಂಗಳೂರಿನಲ್ಲಿ ಬೈಕ್ ಕದ್ದು ಆಂಧ್ರದಲ್ಲಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್

Loading...
Unable to load recommendations.
Follow Us