
ದೇವನಹಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಪೆದ್ದಬಾಬುನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 15.5 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಪೆದ್ದಬಾಬು ಅಕ್ರಮವಾಗಿ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದನು. ಸೂಲಿಬೆಲೆ ಪಿಎಸ್ಐ ರಮೇಶ್ ನೇತೃತ್ವದಲ್ಲಿ ಪೊಲೀಸರ ಕಾರ್ಯಾಚರಣೆ ನಡೆದಿದ್ದು, ಆರೋಪಿ ಪೆದ್ದಬಾಬುನನ್ನು ಬಂಧಿಸಲಾಗಿದೆ. ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಶಕ್ಕೆ ಪಡೆಯಲಾದ 15.5 ಕೆಜಿ ಗಾಂಜಾ
ಮೆಕ್ಕೆಜೋಳದ ನಡುವೆ ಬೆಳೆದಿದ್ದ ಗಾಂಜಾ ವಶ, ಯಾವೂರಲ್ಲಿ?