AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

31 ವರ್ಷಗಳ ಹಿಂದೆ ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು; 1983ರಲ್ಲಿ ನಡೆದಿದ್ದ ಪ್ರಕರಣ

ಸುಮಾರು 31 ವರ್ಷಗಳ ಕಾಲ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡಿದ್ದ ಆರೋಪಿ ನಾಗರಾಜ್​ ಕೊನೆಗೂ ಪತ್ತೆಯಾಗಿದ್ದು, ಇದೀಗ ಆತನನ್ನು ಹಿಡಿದಿರುವ ಪಿರಿಯಾಪಟ್ಟಣ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

31 ವರ್ಷಗಳ ಹಿಂದೆ ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು; 1983ರಲ್ಲಿ ನಡೆದಿದ್ದ ಪ್ರಕರಣ
ಆರೋಪಿಯನ್ನು ಬಂಧಿಸಿದ ಪೊಲೀಸರು
TV9 Web
| Updated By: Skanda|

Updated on: Jul 07, 2021 | 9:59 AM

Share

ಮೈಸೂರು: ಬರೋಬ್ಬರಿ ಮೂರು ದಶಕಗಳ ಹಿಂದೆ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸರು ಆರೋಪಿಯನ್ನು ಕೊನೆಗೂ ಬಂಧಿಸಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. 31 ವರ್ಷಗಳ ಹಿಂದೆ ಅಂದರೆ 1983 ನೇ ಇಸವಿಯಲ್ಲಿ ನಡೆದ ಕಳ್ಳತನ ಪ್ರಕರಣ ಇದಾಗಿದ್ದು, ಆರೋಪಿ ನಾಗರಾಜ್ ಎಂಬಾತನನ್ನು ಪತ್ತೆ ಹಚ್ಚಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಳ್ಳತನದ ನಂತರ ತಲೆಮರೆಸಿಕೊಂಡಿದ್ದ ನಾಗರಾಜ್​ ನ್ಯಾಯಾಲಯಕ್ಕೂ ಹಾಜರಾಗದೇ, ಪೊಲೀಸರ ಕಣ್ಣಿಗೂ ಬೀಳದೆ ನಾಪತ್ತೆಯಾಗಿದ್ದ. ಆದರೆ, ಇದೀಗ ಪೊಲೀಸರು ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗ್ರಾಮದ ಬಸಪ್ಪ ಎಂಬುವವರ ಮನೆಯಲ್ಲಿ 1983ರಲ್ಲಿ ಕಳ್ಳತನ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಆ ಸಂದರ್ಭದಲ್ಲೇ ದೂರು ದಾಖಲಾಗಿತ್ತಾದರೂ ಆರೋಪಿ ನಾಗರಾಜ್​ ತಲೆಮರೆಸಿಕೊಂಡಿದ್ದ. ಸುಮಾರು 31 ವರ್ಷಗಳ ಕಾಲ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡಿದ್ದ ಆರೋಪಿ ನಾಗರಾಜ್​ ಕೊನೆಗೂ ಪತ್ತೆಯಾಗಿದ್ದು, ಇದೀಗ ಆತನನ್ನು ಹಿಡಿದಿರುವ ಪಿರಿಯಾಪಟ್ಟಣ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಖತರ್ನಾಕ್​ ಸರಗಳ್ಳನ ಬಂಧನ ಮೈಸೂರು: ಮೈಸೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಸರಗಳ್ಳತನ ನಡೆಸಿ ಪೊಲೀಸರಿಗೆ ತಲೆನೋವಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಗ್ರಾಮಾಂತರ ಸಿಪಿಐ ಕಾರ್ಯಾಚರಣೆ ವೇಳೆ ಆರೋಪಿ ಗಿರೀಶ್ ಕುಮಾರ್ ಹೆಚ್.ಬಿ ಬಲೆಗೆ ಬಿದ್ದಿದ್ದು, ಆತನಿಂದ ಬೆಲೆ ಬಾಳುವ ಚಿನ್ನದ ಒಡವೆಗಳು ಹಾಗೂ ಬೈಕ್​ ಒಂದನ್ನು ವಶಕ್ಕೆ ಪಡೆಯಲಾಗಿದೆ.

ಗಿರೀಶ್ ಕುಮಾರ್ ಹೆಚ್.ಬಿ ಹಲವು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಇಲವಾಲ, ಜಯಪುರ, ಮೈಸೂರು ಗ್ರಾಮಾಂತರ, ಕೆ.ಆರ್. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ಹಾಗೂ ವರುಣಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಳ್ಳತನ ಸೇರಿ ಒಟ್ಟು ಆರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆತನಿಂದ 147 ಗ್ರಾಂ ತೂಕದ ಚಿನ್ನದ ಒಡವೆಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಮೋಟಾರ್ ಬೈಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದಾಬಸ್‌ಪೇಟೆಯ 3 ಅಂಗಡಿಗಳಲ್ಲಿ ಸರಣಿ ಕಳ್ಳತನ; ಅಂಗಡಿಗಳ ಶೆಟರ್ ಮುರಿದು ನಗದು ದೋಚಿರುವ ಕಳ್ಳರು 

ಮೊನ್ನೆ ಫೀಲ್ಡಿಗಿಳಿದು 19 ಕಡೆ ಸರಗಳ್ಳತನ ಮಾಡಿದ್ದ ಖದೀಮರ ಪೈಕಿ ಇಬ್ಬರು ಅರೆಸ್ಟ್ ಆದ್ರು: ಸರಗಳ್ಳರ ಮೋಡಸ್​ ಆಪರೆಂಡಿ ಹೀಗಿತ್ತು!

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ