ಅಕ್ರಮ ರೆಮ್​ಡಿಸಿವಿರ್ ಇಂಜೆಕ್ಷನ್ ಮಾರಾಟ; ಕಲಬುರಗಿಯಲ್ಲಿ ಇಬ್ಬರು ಬಂಧನ

ಪೊಲೀಸರು ಬಂಧಿತರಿಂದ ಐದು ರೆಮ್​ಡಿಸಿವಿರ್ ಇಂಜೆಕ್ಷನ್ ಬಾಟಲ್, ಮೊಬೈಲ್ ಮತ್ತು ಬೈಕ್​ನ ವಶಪಡಿಸಿಕೊಂಡಿದ್ದಾರೆ. ಬಂಧಿತರು ಮಹಂತೇಶ್ ಮಠಪತಿ, ಸಾಜೀದ್ ಕೂಡಿ ಎಂದು ತಿಳಿದುಬಂದಿದ್ದು, ಇವರಿಬ್ಬರು ನಗರದ ನವಜೀವನ್ ಬ್ಲಡ್ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಿದ್ದರು.

ಅಕ್ರಮ ರೆಮ್​ಡಿಸಿವಿರ್ ಇಂಜೆಕ್ಷನ್ ಮಾರಾಟ; ಕಲಬುರಗಿಯಲ್ಲಿ ಇಬ್ಬರು ಬಂಧನ
ರೆಮ್​ಡಿಸಿವಿರ್​ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ
Follow us
sandhya thejappa
|

Updated on: May 03, 2021 | 12:15 PM

ಕಲಬುರಗಿ: ಕೊರೊನಾ ಸೋಂಕಿನಿಂದ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಸೂಕ್ತ ಚಿಕಿತ್ಸೆ, ಬೆಡ್ ಹಾಗು ಆಕ್ಸಿಜನ್ ಸಿಗದೆ ಸಾವನ್ನಪ್ಪುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಕೆಲವು ಕಡೆ ಅಕ್ರಮವಾಗಿ ರೆಮ್ಡಿಸಿವಿರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ. ಇಂತಹದೊಂದು ಘಟನೆ ಇದೀಗ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ರೆಮ್​ಡಿಸಿವಿರ್​ನ್ನು ಇಬ್ಬರು ಮಾರಾಟ ಮಾಡುತ್ತಿದ್ದರು. ನಗರ ರೌಡಿ ನಿಗ್ರಹ ಪಡೆಯ ಪೊಲೀಸರು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರು ಬಂಧಿತರಿಂದ ಐದು ರೆಮ್​ಡಿಸಿವಿರ್ ಇಂಜೆಕ್ಷನ್ ಬಾಟಲ್, ಮೊಬೈಲ್ ಮತ್ತು ಬೈಕ್​ನ ವಶಪಡಿಸಿಕೊಂಡಿದ್ದಾರೆ. ಬಂಧಿತರು ಮಹಂತೇಶ್ ಮಠಪತಿ, ಸಾಜೀದ್ ಕೂಡಿ ಎಂದು ತಿಳಿದುಬಂದಿದ್ದು, ಇವರಿಬ್ಬರು ನಗರದ ನವಜೀವನ್ ಬ್ಲಡ್ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳು ಕೆಲ ಆಸ್ಪತ್ರೆಯವರಿಂದ ರೆಮ್​ಡಿಸಿವಿರ್ ಇಂಜೆಕ್ಷನ್ ಪಡೆಯುತ್ತಿದ್ದರು. ಜೊತೆಗೆ ಒಂದು ಬಾಟಲ್ ರೆಮ್​ಡಿಸಿವಿರ್​ಗೆ ಇಪ್ಪತ್ತರಿಂದ ಇಪ್ಪತ್ತೈದು ಸಾವಿರಕ್ಕೆ ಮಾರಾಟ ಮಾಡುತ್ತಿದ್ದರೆಂದು ಹೇಳಲಾಗುತ್ತಿದೆ.

ಬಂಧಿತರಿಂದ ಐದು ಬಾಟಲ್​ ರೆಮ್​ಡಿಸಿವಿರ್​ನ ವಶಪಡಿಸಿಕೊಂಡಿದ್ದಾರೆ

ಆಂಬುಲೆನ್ಸ್ ಚಾಲಕ ಅಮಾನತು ಈ ಹಿಂದೆ ಅಕ್ರಮವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಆಂಬುಲೆನ್ಸ್ ಚಾಲಕನನ್ನು ರಿಮ್ಸ್ ನಿರ್ದೇಶಕ ಡಾ.ಪೀರಾಪುರರಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ರಾಯಚೂರಿನ ಒಪೆಕ್ ಬಳಿ ಆ್ಯಂಬುಲೆನ್ಸ್ ನಿಲ್ಲಿಸಿ, ಚಾಲಕ ಬಂಡೆಪ್ಪನನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ಸಂದರ್ಭ ಚಾಲಕನ ಜೇಬಿನಲ್ಲಿ ವಯಲ್​ಗಳು ಪತ್ತೆಯಾಗಿದ್ದವು. ಚಾಲಕನ ವಿರುದ್ಧ ಪೊಲೀಸರಿಗೆ ಸ್ಥಳೀಯರು ದೂರು ನೀಡಿದ್ದರು. ಚಾಲಕ ರೆಮ್​ಡಿಸಿವಿರ್ ಇಂಜೆಕ್ಷನ್ ಸಾಗಾಟ ಮಾಡುತ್ತಿದ್ದ ವಿಡಿಯೊ ವೈರಲ್ ಆಗಿತ್ತು.

ಇದನ್ನೂ ಓದಿ

ಅಕ್ರಮ ರೆಮ್​ಡಿಸಿವಿರ್ ಇಂಜೆಕ್ಷನ್ ಸಾಗಣೆ: ರಾಯಚೂರಿನಲ್ಲಿ ಆಂಬುಲೆನ್ಸ್​ ಚಾಲಕ ಅಮಾನತು, ಬೆಂಗಳೂರಿನಲ್ಲಿ ಇಬ್ಬರ ಬಂಧನ

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲ; 4 ದಿನದಿಂದ ತುಮಕೂರಿನ ವ್ಯಕ್ತಿ ಪರದಾಟ

(Police arrested two people who were illegally selling Remdesivir injection in kalaburagi)

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್