ಒಳ ಉಡುಪಿನಲ್ಲಿ ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಅರೆಸ್ಟ್
ವಿಶೇಷ ವಿನ್ಯಾಸದ ಒಳ ಉಡುಪಿನಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮಮ್ಮಿನಿ ಖಾಲಿದ್ನಿಂದ 33,75,470 ರೂಪಾಯಿ ಮೌಲ್ಯದ 737 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ: ಒಳ ಉಡುಪಿನಲ್ಲಿ ಚಿನ್ನ ಸಾಗಣೆ ಮಾಡುತ್ತಿದ್ದ ಕೇರಳದ ಕೊಪ್ಪ ಮೂಲದ ವ್ಯಕ್ತಿಯನ್ನು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ. ಮಮ್ಮಿನಿ ಖಾಲಿದ್ ಎಂಬುವ ವ್ಯಕ್ತಿಯನ್ನು ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ವಿಶೇಷ ವಿನ್ಯಾಸದ ಒಳ ಉಡುಪಿನಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮಮ್ಮಿನಿ ಖಾಲಿದ್ನಿಂದ 33,75,470 ರೂಪಾಯಿ ಮೌಲ್ಯದ 737 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.
ವಿಜಯಪುರ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶ: ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನೂ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ದೊಂಡಿಬಾ ಜರಕ ಆಕಾಶ ಬೋರಕರ, ಯಲ್ಲಪ್ಪ ಕರೆಪ್ಪನವರನ್ನು ಪೊಲೀಸರು ಬಂಧಿಸಿದ್ದಾರೆ.
ಸಿಪಿಐ ಸಂಗಮೇಶ ಪಾಲಬಾವಿ, ಪಿಎಸ್ಐ ಆನಂದ ಠಕ್ಕಣನವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 8 ಕೆ.ಜಿ ಗಾಂಜಾ, ಒಂದು ಬೈಕ್ ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ದೇವನಹಳ್ಳಿ ಏರ್ಪೋರ್ಟ್ನಲ್ಲಿ ಕಸ್ಟಮರಿ ಕಾರ್ಯಾಚರಣೆ; ದುಬೈನಿಂದ ರಾಡ್, ಸ್ಕ್ರೂನಲ್ಲಿ ತಂದಿದ್ದ 360 ಗ್ರಾಂ ಚಿನ್ನ ಜಪ್ತಿ
ಇದನ್ನೂ ಓದಿ: ದೇವನಹಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರದ ವ್ಯಕ್ತಿ ಬಂಧನ!