ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಪರಮೇಶ್ವರ್​

ರಾಜ್ಯದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಖಾಸಗಿ ವಾಹನಗಳ ಮೇಲೆ "ಪೊಲೀಸ್" ಎಂದು ಬರೆಯುವುದು ಕಾನೂನುಬಾಹಿರ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.ಇಂತಹ ಕ್ರಮ ಕಾನೂನು ಉಲ್ಲಂಘನೆಯಾಗುತ್ತದೆ ಮತ್ತು 2022ರ ಸರ್ಕಾರದ ಸುತ್ತೋಲೆಯ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ವಿಷಯ ಶ್ರವಣಬೆಳಗೊಳ ಶಾಸಕರ ಪ್ರಶ್ನೆಗೆ ಲಿಖಿತ ಉತ್ತರವಾಗಿ ನೀಡಲಾಗಿದೆ.

ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಪರಮೇಶ್ವರ್​
ಸಾಂದರ್ಭಿಕ ಚಿತ್ರ
Edited By:

Updated on: Mar 11, 2025 | 11:26 AM

ದಾವಣಗೆರೆ, ಮಾರ್ಚ್​ 11: ಪೊಲೀಸ್ (Police) ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ (G Parameshwara) ಸ್ಪಷ್ಟನೆ ನೀಡಿದ್ದಾರೆ. ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತ ಮೂಲಕ ಸಚಿವ ಡಾ. ಜಿ ಪರಮೇಶ್ವರ್​ ಉತ್ತರ ನೀಡಿದ್ದಾರೆ.

ಪ್ರಶ್ನೆ: ರಾಜ್ಯದ ಪೊಲೀಸ್​ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ?

ಉತ್ತರ: ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ‌ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ.

ಇದನ್ನೂ ಓದಿ
ಮಾಲೀಕನ ಸಾವಿನಿಂದ ಅನಾಥವಾಗಿದ್ದ ಶ್ವಾನ ಈಗ ಪೊಲೀಸರ ನೆಚ್ಚಿನ ನಾಯಿ​​
ರನ್ಯಾ ರಾವ್ ಕುಟುಂಬ ನಟಿಯೊಂದಿಗೆ ಅಂತರ ಕಾಯ್ದುಕೊಂಡಿದೆ!
ಚಿಕ್ಕಬಳ್ಳಾಪುರ: ಮನೆ ದರೋಡೆಗೆ ಪೊಲೀಸ್​ನಿಂದಲೇ ಟ್ರೈನಿಂಗ್! ಆರೋಪಿ ಅಂದರ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್

ಪ್ರಶ್ನೆ: ಹಾಗಿದ್ದಲ್ಲಿ, ಸ್ವಂತ ವಾಹನಗಳ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಕೆಲ ಪೊಲೀಸ್​ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರವು ತೆಗೆದುಕೊಂಡಿರುವ ಕ್ರಮಗೇಳನು?

ಉತ್ತರ: ತಮ್ಮ ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಯಿಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಸ್ವಂತ ವಾಹನದ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೇ ಅವರ ವಿರುದ್ಧ 2022 ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ ಎಂದು ಗೃಹ ಸಚಿವ ಡಾ. ಜಿ‌.ಪರಮೇಶ್ವರ ಲಿಖಿತ ಉತ್ತರ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ