AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

B.Y.Vijayendra: ಬಿ.ವೈ.ವಿಜಯೇಂದ್ರ ಕಾಲಿಗೆ ಬಿದ್ದ ಪೊಲೀಸ್ ಪೇದೆ ಆಕಾಂಕ್ಷಿಗಳು

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಸಿದ್ಧಗಾಂಗ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಶ್ರೀ ಗಳ ಜೊತೆಗೆ ಮಾತಕತೆ ನಡೆಸಿದ್ದಾರೆ. ಎಡೆಯೂರಿನಲ್ಲಿ ಶ್ರೀಮತಿ ಮೈತ್ರಾದೇವಿ ಯಡಿಯೂರಪ್ಪ ಸ್ಮಾರಕ ಭವನ ನಿರ್ಮಾಣ ಆಗಿದೆ.

B.Y.Vijayendra: ಬಿ.ವೈ.ವಿಜಯೇಂದ್ರ ಕಾಲಿಗೆ ಬಿದ್ದ ಪೊಲೀಸ್ ಪೇದೆ ಆಕಾಂಕ್ಷಿಗಳು
Police constable aspirants who fell at the feet of B.Y.Vijayendra
TV9 Web
| Edited By: |

Updated on:Oct 29, 2022 | 7:02 PM

Share

ತುಮಕೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಸಿದ್ಧಗಾಂಗ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಶ್ರೀ ಗಳ ಜೊತೆಗೆ ಮಾತಕತೆ ನಡೆಸಿದ್ದಾರೆ. ಎಡೆಯೂರಿನಲ್ಲಿ ಶ್ರೀಮತಿ ಮೈತ್ರಾದೇವಿ ಯಡಿಯೂರಪ್ಪ ಸ್ಮಾರಕ ಭವನ ನಿರ್ಮಾಣ ಆಗಿದೆ. ನವೆಂಬರ್ 13 ರಂದು ಅದರ ಉದ್ಘಾಟನೆ ಆಗಲಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಸ್ಮಾರಕ ಭವನ ಸಿದ್ದಗಂಗಾ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಲೋಕಾರ್ಪಣೆ ಆಗಲಿದೆ. ಮಾಜಿ ಸಿಎಂ ಯಡಿಯೂರಪ್ಪ ಮತ್ತು ಕುಟುಂಬ ಸೇರಿದಂತೆ, ಸಚಿವರು, ಶಾಸಕರುಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಂದು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮಕ್ಕೆ ಸ್ವಾಮಿಜಿಗಳಿಗೆ ಆಹ್ವಾನ ನೀಡಿದ್ದೇನೆ. ಬಡವರ ಮದುವೆ ಶುಭ ಕಾರ್ಯ ಮಾಡುವ ನಿಟ್ಟಿನಲ್ಲಿ ಮಂಗಳ ಭವನ ನಿರ್ಮಾಣ ಆಗಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ ಪೊಲೀಸ್ ಪೇದೆಗಳ ನೇಮಕಾತಿ ವಯೋಮಿತಿ‌ ಹೆಚ್ಚಳ ‌ವಿಚಾರ ಸಾಕಷ್ಟು ದಿನದಿಂದ ಈ ಬೇಡಿಕೆ ಇದೆ. ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಗೆ ಹೋಲಿಸಿಕೊಂಡರೆ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ನಾನು ಸಹಾನುಭೂತಿಯಿಂದ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಯುವಕರು ಆತಂಕದಲ್ಲಿ ಇದ್ದಾರೆ ಎಂದು ಹೇಳಿದರು.

ಸಿದ್ಧಗಾಂಗ ಮಠಕ್ಕೆ ಭೇಟಿ ನೀಡಿದ ವೇಳೆ ಪೊಲೀಸ್ ಪೇದೆ ಆಕಾಂಕ್ಷಿಗಳು ಬಿ.ವೈ.ವಿಜಯೇಂದ್ರ ಕಾಲಿಗೆ ಬಿದ್ದು ಬೇಡಿಕೊಂಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ಬಿ.ವೈ.ವಿಜಯೇಂದ್ರ ಮುಂದೆ ಪೊಲೀಸ್ ಆಕಾಂಕ್ಷಿಗಳ ಅಳಲು ತೋಡಿಕೊಂಡಿದ್ದಾರೆ. ಪೊಲೀಸ್ ನೇಮಕಾತಿಯ ವಯೋಮಿತಿ ಹೆಚ್ಚಿಸುವಂತೆ ಮನವಿ ನೀಡಿ ಕಾಲಿಗೆರಗಿ ಪರಿಪರಿಯಾಗಿ ಬೇಡಿಕೊಂಡಿದ್ದಾರೆ.

ವಯೋಮಿತಿಯನ್ನು 25 ರಿಂದ 27 ಹಾಗೂ 27ರಿಂದ 29 ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ ಸಿಎಂ ಗಮನಕ್ಕೆ ತಂದು ಬೇಡಿಕೆ ಈಡೇರಿಸುವ ಭರವಸೆ ಕೊಟ್ಟಿದ್ದಾರೆ. ಸಿದ್ದಲಿಂಗ ಶ್ರೀ ಗಳ ಭೇಟಿಯಾದ ಬಳಿಕ ಈ ಪ್ರಸಂಗ ನಡೆದಿದೆ.

Published On - 7:02 pm, Sat, 29 October 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!