ತುಮಕೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಸಿದ್ಧಗಾಂಗ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಶ್ರೀ ಗಳ ಜೊತೆಗೆ ಮಾತಕತೆ ನಡೆಸಿದ್ದಾರೆ. ಎಡೆಯೂರಿನಲ್ಲಿ ಶ್ರೀಮತಿ ಮೈತ್ರಾದೇವಿ ಯಡಿಯೂರಪ್ಪ ಸ್ಮಾರಕ ಭವನ ನಿರ್ಮಾಣ ಆಗಿದೆ. ನವೆಂಬರ್ 13 ರಂದು ಅದರ ಉದ್ಘಾಟನೆ ಆಗಲಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಸ್ಮಾರಕ ಭವನ ಸಿದ್ದಗಂಗಾ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಲೋಕಾರ್ಪಣೆ ಆಗಲಿದೆ. ಮಾಜಿ ಸಿಎಂ ಯಡಿಯೂರಪ್ಪ ಮತ್ತು ಕುಟುಂಬ ಸೇರಿದಂತೆ, ಸಚಿವರು, ಶಾಸಕರುಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಂದು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.
ಈ ಕಾರ್ಯಕ್ರಮಕ್ಕೆ ಸ್ವಾಮಿಜಿಗಳಿಗೆ ಆಹ್ವಾನ ನೀಡಿದ್ದೇನೆ. ಬಡವರ ಮದುವೆ ಶುಭ ಕಾರ್ಯ ಮಾಡುವ ನಿಟ್ಟಿನಲ್ಲಿ ಮಂಗಳ ಭವನ ನಿರ್ಮಾಣ ಆಗಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ ಪೊಲೀಸ್ ಪೇದೆಗಳ ನೇಮಕಾತಿ ವಯೋಮಿತಿ ಹೆಚ್ಚಳ ವಿಚಾರ ಸಾಕಷ್ಟು ದಿನದಿಂದ ಈ ಬೇಡಿಕೆ ಇದೆ. ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಗೆ ಹೋಲಿಸಿಕೊಂಡರೆ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ನಾನು ಸಹಾನುಭೂತಿಯಿಂದ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಯುವಕರು ಆತಂಕದಲ್ಲಿ ಇದ್ದಾರೆ ಎಂದು ಹೇಳಿದರು.
ಸಿದ್ಧಗಾಂಗ ಮಠಕ್ಕೆ ಭೇಟಿ ನೀಡಿದ ವೇಳೆ ಪೊಲೀಸ್ ಪೇದೆ ಆಕಾಂಕ್ಷಿಗಳು ಬಿ.ವೈ.ವಿಜಯೇಂದ್ರ ಕಾಲಿಗೆ ಬಿದ್ದು ಬೇಡಿಕೊಂಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ಬಿ.ವೈ.ವಿಜಯೇಂದ್ರ ಮುಂದೆ ಪೊಲೀಸ್ ಆಕಾಂಕ್ಷಿಗಳ ಅಳಲು ತೋಡಿಕೊಂಡಿದ್ದಾರೆ. ಪೊಲೀಸ್ ನೇಮಕಾತಿಯ ವಯೋಮಿತಿ ಹೆಚ್ಚಿಸುವಂತೆ ಮನವಿ ನೀಡಿ ಕಾಲಿಗೆರಗಿ ಪರಿಪರಿಯಾಗಿ ಬೇಡಿಕೊಂಡಿದ್ದಾರೆ.
ವಯೋಮಿತಿಯನ್ನು 25 ರಿಂದ 27 ಹಾಗೂ 27ರಿಂದ 29 ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ ಸಿಎಂ ಗಮನಕ್ಕೆ ತಂದು ಬೇಡಿಕೆ ಈಡೇರಿಸುವ ಭರವಸೆ ಕೊಟ್ಟಿದ್ದಾರೆ. ಸಿದ್ದಲಿಂಗ ಶ್ರೀ ಗಳ ಭೇಟಿಯಾದ ಬಳಿಕ ಈ ಪ್ರಸಂಗ ನಡೆದಿದೆ.
Published On - 7:02 pm, Sat, 29 October 22