AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳಿಂದ ಲಂಚ ಪಡೆಯುವಾಗ ACB ದಾಳಿ: ತಪ್ಪಿಸಿಕೊಳ್ಳಲು ಹೋಗಿ ಕಾಲು ಮುರಿದುಕೊಂಡ ಕಾನ್ಸ್​ಟೇಬಲ್!

ಎಸಿಬಿ ದಾಳಿ ವೇಳೆ ತಪ್ಪಿಸಿಕೊಳ್ಳಲು ಹೋಗಿ ಪೇದೆಯೊಬ್ಬರು ಕಾಲು ಮುರಿದುಕೊಂಡ ಘಟನೆ ಬೈಯಪ್ಪನಹಳ್ಳಿ ಪೊಲೀಸ್​ ಠಾಣೆಯಲ್ಲಿ ನಡೆದಿದೆ.

ಆರೋಪಿಗಳಿಂದ ಲಂಚ ಪಡೆಯುವಾಗ ACB ದಾಳಿ: ತಪ್ಪಿಸಿಕೊಳ್ಳಲು ಹೋಗಿ ಕಾಲು ಮುರಿದುಕೊಂಡ ಕಾನ್ಸ್​ಟೇಬಲ್!
ದಾಳಿ ವೇಳೆ ಬಲೆಗೆ ಬಿದ್ದ ಅಧಿಕಾರಿಗಳು
Skanda
| Edited By: |

Updated on:Jan 12, 2021 | 8:10 PM

Share

ಬೆಂಗಳೂರು: ಎಸಿಬಿ ದಾಳಿ ವೇಳೆ ತಪ್ಪಿಸಿಕೊಳ್ಳಲು ಹೋಗಿ ಪೇದೆಯೊಬ್ಬರು ಕಾಲು ಮುರಿದುಕೊಂಡ ಘಟನೆ ಬೈಯಪ್ಪನಹಳ್ಳಿ ಪೊಲೀಸ್​ ಠಾಣೆಯಲ್ಲಿ ನಡೆದಿದೆ. ಆರೋಪಿಗಳಿಂದ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಗಡಿಬಿಡಿಗೊಂಡ ಕಾನ್​ಸ್ಟೇಬಲ್​ ಕುಮಾರ್ ಹಣ ಸಮೇತ ತಪ್ಪಿಸಿಕೊಳ್ಳಲು ಹೋದಾಗ ​ ಕಾಲು ಮುರಿದುಕೊಂಡಿದ್ದಾರೆ.

ಮೊಬೈಲ್​ ಕದ್ದ ಆರೋಪಿಗಳಿಂದ ಬೈಯಪ್ಪನಹಳ್ಳಿ ಪೊಲೀಸ್​ ಠಾಣೆ ಸಿಬ್ಬಂದಿ 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸಬ್​ ಇನ್​ಸ್ಪೆಕ್ಟರ್​ ಸೌಮ್ಯಾ, ಹೆಡ್​ ಕಾನ್​ಸ್ಟೇಬಲ್​ ಜೆ.ಪಿ.ರೆಡ್ಡಿ ಈ ತೆರನಾದ ಬೇಡಿಕೆ ಇಟ್ಟಿದ್ದು, ಆರೋಪಿಗಳು ಲಂಚ ನೀಡಲು ಒಪ್ಪಿಕೊಂಡಿದ್ದಾರೆ. ಅದರಂತೆ, ಲಂಚ ಸ್ವೀಕರಿಸಿ ಅದನ್ನು ಕಾನ್​ಸ್ಟೇಬಲ್​ ಕುಮಾರ್​ ಕೈಗೆ ನೀಡಿದ್ದ ವೇಳೆಯಲ್ಲೇ ಎಸಿಪಿ ಪ್ರತಾಪ್​ ರೆಡ್ಡಿ ನೇತೃತ್ವದ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಎಸಿಬಿ ಅಧಿಕಾರಿಗಳನ್ನು ನೋಡಿ ಗಲಿಬಿಲಿಗೊಂಡ ಪೇದೆ ಕುಮಾರ್​ ಹಣದ ಸಮೇತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ತಪ್ಪಿಸಿಕೊಳ್ಳುವಾಗ ಕಾಲು ಮುರಿದಿದ್ದು ಅವರನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ PSI ಸೌಮ್ಯಾ ಹಾಗೂ ಹೆಡ್​ ಕಾನ್​ಸ್ಟೇಬಲ್​ ಜೆ.ಪಿ.ರೆಡ್ಡಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ACB ಬಲೆಗೆ ಹೊಲದ ಪಹಣಿ ಪತ್ರದಲ್ಲಿ ಷರತ್ತು ತಿದ್ದುಪಡಿಗಾಗಿ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ ಬಿದ್ದರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ನಡೆದಿದೆ. ಕಂದಾಯ ನಿರೀಕ್ಷಕ ಶಿವರಾಯಪ್ಪ ಜೋಗಿನ ಎಂಬುವವರು ಪಹಣಿ ಪತ್ರ ತಿದ್ದುಪಡಿಗಾಗಿ ಕೃಷ್ಣ ವಿಠ್ಠಲ ಕುಲಕರ್ಣಿ ಎಂಬ ರೈತನಿಂದ ₹5ಸಾವಿರ ಲಂಚ ಸ್ವೀಕಾರ ಮಾಡುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಎಸಿಬಿ ಡಿವೈಎಸ್​ಪಿ ಎಂ.ಕೆ.ಗಂಗಲ್​ ನೇತೃತ್ವದ ತಂಡ ಕಂದಾಯ ನಿರೀಕ್ಷಕ ಶಿವರಾಯಪ್ಪ ಜೋಗಿನ ಅವರನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಲಾಗಿದೆ.

ಲಂಚ ಸ್ವೀಕರಿಸುತ್ತಿದ್ದ ಸಮಾಜ ಕಲ್ಯಾಣಾಧಿಕಾರಿ ಎಸಿಬಿ ಬಲೆಗೆ ಚಿತ್ರದುರ್ಗ: ಲಂಚ ಸ್ವೀಕರಿಸುತ್ತಿದ್ದ ಸಮಾಜ ಕಲ್ಯಾಣ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿ ಬಲೆಗೆ ಬಿದ್ದಿದ್ದಾರೆ. ತಾಲೂಕಿನ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ಹಾಗೂ ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್​ ಶ್ರೀನಿವಾಸ್ ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದಾರೆ. ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ನೀಡಲು, ಶಿವಪ್ಪ ಎಂಬವರಿಂದ 10,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ, ಎಸಿಬಿ ಡಿವೈಎಸ್​ಪಿ ಬಸವರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಆಗ, ಸಮಾಜ ಕಲ್ಯಾಣ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಎಸಿಎಫ್ ಶಿವಶಂಕರ್ ಮನೆ ಮೇಲೆ ಎಸಿಬಿ ದಾಳಿ: ₹ 3.79 ಕೋಟಿ ಮೌಲ್ಯದ ಆಸ್ತಿ ಪತ್ತೆ

Published On - 6:47 pm, Tue, 12 January 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ