ಫೆ. 25ರಂದು ಪೊಲೀಸ್ ಕಾನ್‍ಸ್ಟೇಬಲ್ ಪರೀಕ್ಷೆ: ಅಭ್ಯರ್ಥಿಗಳು ಫುಲ್ ಶರ್ಟ್‌, ಜೀನ್ಸ್ ಪ್ಯಾಂಟ್ ಧರಿಸುವಂತ್ತಿಲ್ಲ

ಫೆ. 25ರಂದು ನಡೆಯಲಿರುವ ಪೊಲೀಸ್ ಕಾನ್‍ಸ್ಟೇಬಲ್ ಪರೀಕ್ಷೆ ಹಿನ್ನಲೆ ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿಗಳ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನು ಜಾರಿ ಮಾಡಲಾಗಿದೆ. ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಲಾಗಿದೆ. ಸದರಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಆದೇಶಿಸಲಾಗಿದೆ. ಪರೀಕ್ಷೆಗಳಲ್ಲಿ ಅಕ್ರಮ ಹಿನ್ನೆಲೆ ಸರ್ಕಾರ ವಸ್ತ್ರ ಸಂಹಿತೆ ಜಾರಿ ಮಾಡಿದೆ.

ಫೆ. 25ರಂದು ಪೊಲೀಸ್ ಕಾನ್‍ಸ್ಟೇಬಲ್ ಪರೀಕ್ಷೆ: ಅಭ್ಯರ್ಥಿಗಳು ಫುಲ್ ಶರ್ಟ್‌, ಜೀನ್ಸ್ ಪ್ಯಾಂಟ್ ಧರಿಸುವಂತ್ತಿಲ್ಲ
ಪ್ರಾತಿನಿಧಿಕ ಚಿತ್ರ
Edited By:

Updated on: Feb 15, 2024 | 6:44 PM

ಬೆಂಗಳೂರು, ಫೆಬ್ರವರಿ 15: ಪಿಎಸ್​​ಐ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ಅಕ್ರಮ ಹಿನ್ನೆಲೆ ಇದೀಗ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಸದ್ಯ ವಸ್ತ್ರ ಸಂಹಿತೆ (Dress code) ಬಿಡುಗಡೆ ಮಾಡಿದೆ. ಫೆ. 25ರಂದು ನಡೆಯಲಿರುವ ಪೊಲೀಸ್ ಕಾನ್‍ಸ್ಟೇಬಲ್ ಪರೀಕ್ಷೆ ಹಿನ್ನಲೆ ಪುರುಷ, ಮಹಿಳೆ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ 63 ಪರೀಕ್ಷಾ ಕೇಂದ್ರಗಳಲ್ಲಿ 34180 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹಾಲ್ ಟಿಕೆಟ್​ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಲು ಸೂಚನೆ ನೀಡಲಾಗಿದೆ. ನಿಗದಿತ ದಿನಾಂಕದಂದು ಲಿಖಿತ ಪರೀಕ್ಷಗೆ ಹಾಜರಾಗಲು ಸೂಚಿಸಲಾಗಿದೆ. ಸದರಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ 

 

  1. ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‌ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್​ಗಳು ಇರುವ ಶರ್ಟ್‌ಗಳನ್ನು ಧರಿಸುವಂತ್ತಿಲ್ಲ.
  2. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸುವಂತ್ತಿಲ್ಲ.
  3. ಪರೀಕ್ಷಾ ಕೇಂದ್ರದೊಳಗೆ ಹೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು.
  4. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡತಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳೆ ಮತ್ತು ತೃತೀಯ ಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತಸಂಹಿತೆ 

 

  1. ಮಹಿಳೆ ಮತ್ತು ತೃತೀಯ ಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  2. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ.
  3. ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಆಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
  4. ಮಹಿಳೆ ಮತ್ತು ತೃತೀಯ ಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:30 pm, Thu, 15 February 24