AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PFI Ban: ಪಿಎಫ್ಐ ವಿರುದ್ಧ ಮುಂದುವರಿದ ಕಾರ್ಯಾಚರಣೆ, ಕಾರ್ಯಕರ್ತರ ಖಾತೆಯಲ್ಲಿ ಭಾರೀ ಮೊತ್ತದ ಹಣ ಪತ್ತೆ

ಕೇಂದ್ರ ಸರ್ಕಾರವು ಪಿಎಫ್​ಐನ ಅಧಿಕೃತ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು

PFI Ban: ಪಿಎಫ್ಐ ವಿರುದ್ಧ ಮುಂದುವರಿದ ಕಾರ್ಯಾಚರಣೆ, ಕಾರ್ಯಕರ್ತರ ಖಾತೆಯಲ್ಲಿ ಭಾರೀ ಮೊತ್ತದ ಹಣ ಪತ್ತೆ
ಪಿಎಫ್ಐ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 29, 2022 | 10:08 AM

Share

ಮಂಗಳೂರು: ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (UNLAWFUL ACTIVITIES (PREVENTION) ACT – UAPA) ಅನ್ವಯ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Popular Front of India – PFI) ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರವು ಪಿಎಫ್​ಐನ ಅಧಿಕೃತ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಖಾತೆಗಳಲ್ಲಿ ಕೋಟ್ಯಾಂತರ ರೂಪಾಯಿ ಹಣ ಇತ್ತು. ಇದನ್ನು ಹೊರತುಪಡಿಸಿಯೂ ಕೋಟ್ಯಂತರ ರೂಪಾಯಿ ಹಣವು ಸಂಘಟನೆಯ ಬಳಿಯಿದೆ ಎಂದು ಟಿವಿ9ಗೆ ಜಾರಿ ನಿರ್ದೇಶನಾಲಯದ (ಇಡಿ) ಉನ್ನತ ಮೂಲದಿಂದ ಮಾಹಿತಿ ಲಭ್ಯವಾಗಿದೆ. ಕೆಲ ಸಾಮಾನ್ಯ ಕಾರ್ಯಕರ್ತರ ಖಾತೆಗಳಲ್ಲಿಯೂ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿದೆ. ಇದು ದೇಶ-ವಿದೇಶಗಳಿಂದ ಬಂದಿರುವ ದೇಣಿಗೆ ಹಣ. ಯುಪಿಐ ಕೋಡ್, ಕ್ಯುಆರ್​ ಕೋಡ್ ಮೂಲಕ ಸಣ್ಣಸಣ್ಣ ಮೊತ್ತದ ಹಣವನ್ನು ಹಲವು ಸಲ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

12 ಪಿಎಫ್ಐ ಕಚೇರಿಗಳಿಗೆ ಬೀಗ

ಪಿಎಫ್​ಐ ನಿಷೇಧ ಆದೇಶ ಹೊರಬಿದ್ದ ನಂತರ ಮಂಗಳೂರಿನ 12 ಪಿಎಫ್​​ಐ ಕಚೇರಿಗಳಿಗೆ ಬೀಗ ಹಾಕಲಾಗಿದೆ. ಮಂಗಳೂರು, ಪಣಂಬೂರು, ಸುರತ್ಕಲ್, ಬಜ್ಪೆ, ಉಳ್ಳಾಲ, ಕೋಣಾಜೆ ಸೇರಿದಂತೆ ವಿವಿಧೆಡೆ ತಡರಾತ್ರಿವರೆಗೂ ಪೊಲೀಸರು ದಾಳಿ ನಡೆಸಿದರು. ದಾಳಿ ಕಾರ್ಯಾಚರಣೆ ವೇಳೆ ದಾಖಲೆಗಳನ್ನೂ ಜಪ್ತಿ ಮಾಡಲಾಯಿತು. ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಮಡಿಕೇರಿ ಪಿಎಫ್​ಐ ಕಚೇರಿ ಮೇಲೆ ದಾಳಿ

ಕೊಡಗು ಜಿಲ್ಲಾಧಿಕಾರಿ ಆದೇಶದ ಮೇರೆಗೆ ಮಡಿಕೇರಿಯ ಮಹದೇವ ಪೇಟೆಯಲ್ಲಿರುವ ಪಿಎಫ್​​ಐ ಕಚೇರಿ ಮೇಲೆ ಪೊಲೀಸರು ತಡರಾತ್ರಿ ದಾಳಿ ನಡೆಸಿ ಶೋಧ ನಡೆಸಿದರು. ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ನಡೆದ ತಪಾಸಣೆ ನಡೆಯಿತು. ತಪಾಸಣೆ ಬಳಿಕ ಕಚೇರಿಗೆ ಬೀಗಮುದ್ರೆ ಹಾಕಲಾಯಿತು.

ಬೆಳಗಾವಿ: ಪಿಎಫ್​ಐ ಜಿಲ್ಲಾಧ್ಯಕ್ಷ ನಾಪತ್ತೆ

ಬೆಳಗಾವಿ: ದೇಶಾದ್ಯಂತ ಪಿಎಫ್‌ಐ ಸಂಘಟನೆ ನಿಷೇಧ ಆದೇಶ ಜಾರಿಗೆ ಬಂದಿದೆ. ಆದರೆ ಬೆಳಗಾವಿ ಪೊಲೀಸರಿಗೆ ಈವರೆಗೆ ಪಿಎಫ್​ಐ ಜಿಲ್ಲಾ ಘಟಕದ ಅಧ್ಯಕ್ಷ ನವೀದ್ ಕಟಗಿ ಎಲ್ಲಿದ್ದಾರೆ ಎಂದು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಬೆಳಗಾವಿ ನಗರ ಪೊಲೀಸರು ದಾಳಿ ನಡೆಸಬಹುದು ಎಂಬುದನ್ನು ಅರಿತಿದ್ದ ನವೀದ್ ಸುಲಭವಾಗಿ ಪರಾರಿಯಾಗಿದ್ದ. ಇದೀಗ ಪ್ರತ್ಯೇಕ ತಂಡಗಳನ್ನು ರಚಿಸಿ ನವೀದ್ ಬಂಧನಕ್ಕೆ ಪೊಲೀಸರು ನೆರೆಯ ಗೋವಾ, ಮಹಾರಾಷ್ಟ್ರ ಸೇರಿದಂತೆ ಹಲವು ಕಡೆ ಶೋಧಕಾರ್ಯ ಆರಂಭಿಸಿದ್ದಾರೆ.

ನವೀದ್ ಕಟಗಿ ಮೊಬೈಲ್ ಬಳಸುತ್ತಿಲ್ಲ. ಹೀಗಾಗಿ ಅವನ ಪತ್ತೆಯು ಪೊಲೀಸರಿಗೆ ಕಷ್ಟವಾಗಿದೆ. ಪಿಎಫ್​ಐ ಮೇಲೆ ಎನ್‌ಐಎ ದಾಳಿ ನಡೆಸಿದ್ದನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದ. ಯುವಕರನ್ನು ಸಂಘಟಿಸಿ ಸೆ 22ರಂದು ಕಾಕತಿ ಬಳಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದ.

ಉಡುಪಿ: ಮುಂದುವರಿದ ಶೋಧ

ಉಡುಪಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪಿಎಫ್​ಐ ಮತ್ತು ಎಸ್​ಡಿಪಿಐ ಕಚೇರಿಗಳನ್ನು ಪೊಲೀಸರು ತಪಾಸಣೆ ಮಾಡಿದ್ದಾರೆ. ಪಿಎಫ್​ಐ ಕಚೇರಿಗೆ ಸೇರಿದ ದಾಖಲೆ, ಪೀಠೋಪಕರಣ ಜಪ್ತಿ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಹೂಡೆ ಮತ್ತು ಗಂಗೊಳ್ಳಿಯಲ್ಲಿರುವ ಎಸ್​ಡಿಪಿಐ ಕಚೇರಿಗಳಿಗೆ ಬೀಗಮುದ್ರೆ ಹಾಕಲಾಗಿದೆ. ಎಸ್​ಡಿಪಿಐ ಮುಖಂಡರಾದ ಬಶೀರ್​, ನಜೀರ್​ ಮನೆಗಳನ್ನು ಪರಿಶೀಲಿಸಲು ಪೊಲೀಸರು ಮುಂದಾದರು. ಆದರೆ ಮನೆಗಳಿಗೆ ಬೀಗ ಹಾಕಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬರಿಗೈಲಿ ಹಿಂದಿರುಗಬೇಕಾಯಿತು.

Published On - 10:08 am, Thu, 29 September 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​