ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ

|

Updated on: Nov 06, 2020 | 1:34 PM

ಬೆಂಗಳೂರು: ಮಸೀದಿಯಲ್ಲಿ ಧ್ವನಿವರ್ಧಕ ಬಳಸುವ ಕುರಿತಾಗಿ ಪೊಲೀಸ್ ಮಹಾನಿರ್ದೇಶಕರು ಗುರುವಾರ ಸಂಜೆ ಹೊರಡಿಸಿದ ಸುತ್ತೋಲೆ ವಿವಾದ ಹುಟ್ಟಿಸಿದೆ. ಮುಸ್ಲಿಂ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದೆಯೇ ಈಗ ಪೊಲೀಸ್ ಇಲಾಖೆ ಸ್ಪಷ್ಟೀಕರಣ ನೀಡಿದೆ. ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಇಂಥ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಪೊಲೀಸ್ ಮಹಾನಿರ್ದೇಶಕರಿಗೆ ಗೊತ್ತಿಲ್ಲದೇ ಅವರ ಕಚೇರಿಯ ಸಿಬ್ಬಂದಿಯೊಬ್ಬ ಈ ಸುತ್ತೋಲೆಯನ್ನು ಹೊರಡಿಸಿದ್ದಾನೆ. ಪೊಲೀಸ್ ಇಲಾಖೆ ಇಂಥ ಯಾವ ಸುತ್ತೋಲೆಯನ್ನು ಹೊರಡಿಸಿಲ್ಲ. ಈ ಕುರಿತು ಪೊಲೀಸ್ ಇಲಾಖೆ ಆಂತರಿಕ ತನಿಖೆಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು […]

ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ
ಲೌಡ್​ಸ್ಪೀಕರ್​​​ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಮಸೀದಿಯಲ್ಲಿ ಧ್ವನಿವರ್ಧಕ ಬಳಸುವ ಕುರಿತಾಗಿ ಪೊಲೀಸ್ ಮಹಾನಿರ್ದೇಶಕರು ಗುರುವಾರ ಸಂಜೆ ಹೊರಡಿಸಿದ ಸುತ್ತೋಲೆ ವಿವಾದ ಹುಟ್ಟಿಸಿದೆ. ಮುಸ್ಲಿಂ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದೆಯೇ ಈಗ ಪೊಲೀಸ್ ಇಲಾಖೆ ಸ್ಪಷ್ಟೀಕರಣ ನೀಡಿದೆ.

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಇಂಥ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಪೊಲೀಸ್ ಮಹಾನಿರ್ದೇಶಕರಿಗೆ ಗೊತ್ತಿಲ್ಲದೇ ಅವರ ಕಚೇರಿಯ ಸಿಬ್ಬಂದಿಯೊಬ್ಬ ಈ ಸುತ್ತೋಲೆಯನ್ನು ಹೊರಡಿಸಿದ್ದಾನೆ. ಪೊಲೀಸ್ ಇಲಾಖೆ ಇಂಥ ಯಾವ ಸುತ್ತೋಲೆಯನ್ನು ಹೊರಡಿಸಿಲ್ಲ. ಈ ಕುರಿತು ಪೊಲೀಸ್ ಇಲಾಖೆ ಆಂತರಿಕ ತನಿಖೆಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಬರುವ ಇಂಥ ವಿಚಾರಗಳಿಗೆ ಪ್ರತಿಕ್ರಿಯಿಸಬಾರದು ಎಂದು ಇಲಾಖೆ ವಿನಂತಿ ಮಾಡಿದೆ.