Sign In

By signing in or creating an account, you agree with Associated Broadcasting Company's Terms & Conditions and Privacy Policy.

1.3 ಲಕ್ಷಕ್ಕೂ ಹೆಚ್ಚಿನ ಹಳೆ ಪ್ರಕರಣಗಳಿಗೆ ಮೂರು ತಿಂಗಳಲ್ಲಿ ಮುಕ್ತಿ: ಪೊಲೀಸ್​ ಇಲಾಖೆ ದಿಟ್ಟ ಹೆಜ್ಜೆ

ಹಳೇ ಪ್ರಕರಣಗಳ ವಿಲೇವಾರಿ ಸಂಬಂಧ ರಾಜ್ಯದ ಎಲ್ಲ ಜಿಲ್ಲೆಗಳಗಳ ಪೊಲೀಸ್​ ವರಿಷ್ಠಾಧಿಕಾರಿಗಳು ಹಾಗೂ ಐಜಿಪಿಗಳ ಜೊತೆ ಎಡಿಜಿಪಿ ಉಮೇಶ್​ ಕುಮಾರ್ ಅವರು ಸಮಾಲೋಚನೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ.

1.3 ಲಕ್ಷಕ್ಕೂ ಹೆಚ್ಚಿನ ಹಳೆ ಪ್ರಕರಣಗಳಿಗೆ ಮೂರು ತಿಂಗಳಲ್ಲಿ ಮುಕ್ತಿ: ಪೊಲೀಸ್​ ಇಲಾಖೆ ದಿಟ್ಟ ಹೆಜ್ಜೆ
ಕರ್ನಾಟಕ ಪೊಲೀಸ್​
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 11, 2023 | 7:41 AM

ಬೆಂಗಳೂರು: ಪೊಲೀಸ್​ ಠಾಣೆಗಳಲ್ಲಿ (Police Station) ಬಾಕಿ ಉಳಿದಿರುವ ಸರಿಸುಮಾರು 1.3 ಲಕ್ಷಕ್ಕೂ ಹೆಚ್ಚಿನ ಹಳೆ ಪ್ರಕರಣಗಳನ್ನು (Cases) ಮೂರು ತಿಂಗಳ ಕಾಲಮಿತಿಯಲ್ಲಿ ಮುಕ್ತಾಯಗೊಳಿಸಲು ರಾಜ್ಯ ಪೊಲೀಸ್​ ಇಲಾಖೆ (Police Department) ಮುಂದಾಗಿದೆ. ಈ ನಿಗದಿತ ಅವಧಿಯಲ್ಲಿ ಹಳೇ ಪ್ರಕರಣಗಳಿಗೆ ಮುಕ್ತಿ ನೀಡುವ ಅಧಿಕಾರಿಗಳನ್ನು ಪುರಸ್ಕರಿಸಲು ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಅಪರಾಧ) ಉಮೇಶ್​ ಕುಮಾರ್ ನಿರ್ಧರಿಸಿದ್ದಾರೆ.

ಇನ್ನು ಹಳೇ ಪ್ರಕರಣಗಳ ವಿಲೇವಾರಿ ಸಂಬಂಧ ರಾಜ್ಯದ ಎಲ್ಲ ಜಿಲ್ಲೆಗಳಗಳ ಪೊಲೀಸ್​ ವರಿಷ್ಠಾಧಿಕಾರಿಗಳು ಹಾಗೂ ಐಜಿಪಿಗಳ ಜೊತೆ ಎಡಿಜಿಪಿ ಸಮಾಲೋಚನೆ ನಡೆಸಿದ್ದಾರೆ. 10 ವರ್ಷಗಳಿಂದ ರಾಜ್ಯದಲ್ಲಿ ಗಂಭೀರ ಸ್ವರೂಪ ಕೃತ್ಯಗಳು (ಕೊಲೆ, ದರೋಡೆ, ಸಲಿಗೆ, ಅವಳಿ ಕೊಲೆ ಸೇರಿ ಇತರೆ) ಹಾಗೂ ಗಂಭೀರವಲ್ಲದ (ಜಗಳ, ನಿಂದನೆ ಇತ್ಯಾದಿ) ಕೃತ್ಯಗಳ ಸಂಬಂಧ ಸಕಾಲಕ್ಕೆ ತನಿಖೆ ನಡೆಸದ ಪತ್ತೆಯಾಗದ ಪ್ರಕರಣಗಳೆಂದು ಹೇಳಿ 1.3 ಲಕ್ಷ ಪ್ರಕರಣಗಳು ಕಡತಗಳಲ್ಲೇ ಉಳಿದಿವೆ.

ಹೀಗಾಗಿ ಈ ಪ್ರಕರಣಗಳ ಬಗ್ಗೆ ಪ್ರತಿ ಠಾಣೆಯಿಂದ ಮಾಹಿತಿ ಪಡೆದು ತ್ವರಿತವಾಗಿ ವಿಲೇವಾರಿ ಮಾಡುವಂತೆ ಎಡಿಜಿಪಿ ಉಮೇಶ್‌ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೊಸದಾಗಿ ದಾಖಲಾಗುವ ಪ್ರಕರಣಗಳ ಜತೆ ಹಳೆ ಪ್ರಕರಣಗಳನ್ನು ಸಹ ಹಂತ ಹಂತವಾಗಿ ಮುಕ್ತಾಯಗೊಳಿಸಲಾಗುತ್ತದೆ. ಈಗ ಪ್ರತಿ ತಿಂಗಳು ಸರಾಸರಿ 2 ಸಾವಿರ ಪ್ರಕರಣಗಳತನಿಖೆ ನಡೆಯುತ್ತಿವೆ.

ಇದನ್ನೂ ಓದಿ: Video: ಸಂಚಾರಕ್ಕೆ ಅಡ್ಡಿಯಾದ ಗುಂಡಿಗಳು: ಸಂಚಾರಿ ಪೊಲೀಸ್​ರ ಕೆಲಸಕ್ಕೆ ಎಲ್ಲರ ಮೆಚ್ಚುಗೆ

ಅಪರಾಧ ಪ್ರಕರಣಗಳ ತನಿಖೆ ಕುರಿತು ಆಗಾಗ್ಗೆ ಪರಿಶೀಲಿಸಿ ಸಭೆ ನಡೆಸಬೇಕು. ಈ ಕುರಿತು ಕೇಂದ್ರ ಕಚೇರಿಗೆ ಕೂಡಾ ನಿಯಮಿತವಾಗಿ ಮಾಹಿತಿ ನೀಡುವಂತೆ ಸಹ ನಿರ್ದೇಶಿಸಲಾಗಿದೆ. ಹಳೇ ಪ್ರಕರಣಗಳ ತನಿಖೆಗೆ ಯಾವುದೇ ಮಾರ್ಗಸೂಚಿ ನೀಡದೇ, ಕಾನೂನು ಪ್ರಕಾರ ಅಧಿಕಾರಿಗಳೇ ಸ್ವಯಂ ಚೌಕಟ್ಟು ರೂಪಿಸಿ ಕೊಂಡು ಹಳೇ ಪ್ರಕರಣಗಳಿಗೆ ಮುಕ್ತಿ ಕೊಡಲಾಗುತ್ತದೆ. ಆದರೆ ಆದಷ್ಟು ಬೇಗ ಪ್ರಕರಣಗಳು ಮುಕ್ತಾಯ ಕಾಣಬೇಕು. ಈ ಬಗ್ಗೆ ಉದಾಸೀನತೆ ತೋರಿದರೆ ಸಹಿಸುವುದಿಲ್ಲ ಎಂದು ಎಡಿಜಿಪಿ ತಾಕೀತು ಮಾಡಿದ್ದಾರೆ.

ರಾಜ್ಯದಲ್ಲಿ ಹಳೇ ಪ್ರಕರಣಗಳ ವಿಲೇವಾರಿಯಲ್ಲಿ ರಾಮನಗರ ಜಿಲ್ಲೆ ಮೊದಲ ಸ್ಥಾನದಲ್ಲಿದೆ, ಇನ್ನುಳಿದಂತೆ ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ, ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪೊಲೀಸರು ಕೂಡ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಎಡಿಜಿಪಿ ಉಮೇಶ್​ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ