ನೀತಿ ಸಂಹಿತೆ ಎಫೆಕ್ಟ್: “ಮುಖ್ಯಮಂತ್ರಿ ಪದಕ” ಪ್ರದಾನ ಮುಂದೂಡಿಕೆ

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಶ್ರಮಿಸುತ್ತಿದ್ದಾರೆ. ಪೊಲೀಸರ ಅವಿರತ ಶ್ರಮದಿಂದ ರಾಜ್ಯದಲ್ಲಿ ಶಾಂತಿ‌ ನೆಲೆಸಿದೆ. ಕೊರೊನಾ ವೇಳೆ ವೇಳೆ ಅಧಿಕಾರಿಗಳು ಉತ್ತಮ‌ವಾಗಿ ಕೆಲಸ ನಿರ್ವಹಿಸಿದ್ದಾರೆ. ಪೊಲೀಸ್​ ಸಿಬ್ಬಂದಿ ತಮ್ಮ ಪ್ರಾಣ ಲೆಕ್ಕಿಸದೆ ಕೆಲಸ ನಿರ್ವಹಿಸಿದ್ದಾರೆ‌ ಎಂದು ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಹೇಳಿದ್ದಾರೆ.

ನೀತಿ ಸಂಹಿತೆ ಎಫೆಕ್ಟ್: ಮುಖ್ಯಮಂತ್ರಿ ಪದಕ ಪ್ರದಾನ ಮುಂದೂಡಿಕೆ
ಪೊಲೀಸ್​​ ಧ್ವಜ ದಿನಾಚರಣೆ
Follow us
ವಿವೇಕ ಬಿರಾದಾರ
|

Updated on:Apr 03, 2023 | 6:49 AM

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು (Police) ಶ್ರಮಿಸುತ್ತಿದ್ದಾರೆ. ಪೊಲೀಸರ ಅವಿರತ ಶ್ರಮದಿಂದ ರಾಜ್ಯದಲ್ಲಿ ಶಾಂತಿ‌ ನೆಲೆಸಿದೆ. ಕೊರೊನಾ ವೇಳೆ ಅಧಿಕಾರಿಗಳು ಉತ್ತಮ‌ವಾಗಿ ಕೆಲಸ ನಿರ್ವಹಿಸಿದ್ದಾರೆ. ಪೊಲೀಸ್​ ಸಿಬ್ಬಂದಿ ತಮ್ಮ ಪ್ರಾಣ ಲೆಕ್ಕಿಸದೆ ಕೆಲಸ ನಿರ್ವಹಿಸಿದ್ದಾರೆ‌ ಎಂದು ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ (Government CS Vandita Sharma) ಅವರು ಹೇಳಿದ್ದಾರೆ. ಪೊಲೀಸ್ ಧ್ವಜ ದಿನಾಚರಣೆ ಹಿನ್ನೆಲೆ ಇಂದು (ಏ.2) ಕೋರಮಂಗಲ ಕೆಎಸ್ಆರ್​ಪಿ ಮೈದಾನದಲ್ಲಿ ಪೊಲೀಸ್​ ಕವಾಯತು ನಡೆಯಿತು. ಈ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕವಾಗಿ “ಮುಖ್ಯಮಂತ್ರಿ ಪದಕ” ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (CM Basavaraj Bommai) ವಿತರಣೆ ಮಾಡಬೇಕಿತ್ತು. ಆದರೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಮುಖ್ಯಮಂತ್ರಿ ಪದಕ ವಿತರಣೆ ಮುಂದೂಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಭಾಗಿಯಾಗಿದ್ದರು. ಬಳಿಕ ಮಾತನಾಡಿದ ಅವರು ಹುತಾತ್ಮ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳಿಗೆ ಗೌರವ ಸಲ್ಲಿಸುತ್ತೇನೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಯಾವುದೇ ಸಮಸ್ಯೆ ಆಗದ ರೀತಿ ಕೆಲ‌ಸ ಮಾಡುತ್ತಾರೆ ಅನ್ನೋ ನಂಬಿಕೆ ಇದೆ ಎಂದು ಹೇಳಿದರು.

ಉತ್ತಮ ಸೇವೆ ಸಲ್ಲಿಸಿದ ಶಿವಮೊಗ್ಗ ಜಿಲ್ಲೆಯ ಮೂವರು ಸೇರಿ ರಾಜ್ಯದ 42 ಪೊಲೀಸರಿಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟವಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಇನ್ಸ್ ಪೆಕ್ಟರ್ ಕೆ.ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಕೆ.ಶಿವಕುಮಾರ್, ಡಿಎಆರ್ ಪಡೆಯ ಎ.ಹೆಚ್.ಸಿ ಜೈ ಜಗದೀಶ್ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:23 pm, Sun, 2 April 23