AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ ಪ್ರಮಾಣವಚನ: ಸಮಾರಂಭಕ್ಕೆ ಆಗಮಿಸುವವರಿಗೆ ಕೆಲ ಸೂಚನೆಗಳು ಪೊಲೀಸ್ರು

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ನಾಳೆ (ಜೂನ್ 03) ಸಂಜೆ 4.05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ದೇಶ-ರಾಜ್ಯದ ಹಲವು ಗಣ್ಯರು, ವಿಐಪಿಗಳು ಆಗಮಿಸುತ್ತಿರುವ ಹಿನ್ನೆಲೆ ಬೆಂಗಳೂರು ನಗರ ಪೊಲೀಸರು ಬಿಗಿ ಭದ್ರತೆ ಹಾಗೂ ವಿಶೇಷ ಸಂಚಾರ ವ್ಯವಸ್ಥೆ ಜಾರಿಗೊಳಿಸಿದ್ದಾರೆ. ಇದರ ಜೊತೆಗೆ ಈ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಕೆಲವು ಸಲಹೆ-ಸೂಚನೆಗಳನ್ನ ನೀಡಲಾಗಿದೆ.

ಡಿಕೆ ಶಿವಕುಮಾರ್​ ಪ್ರಮಾಣವಚನ: ಸಮಾರಂಭಕ್ಕೆ ಆಗಮಿಸುವವರಿಗೆ ಕೆಲ ಸೂಚನೆಗಳು ಪೊಲೀಸ್ರು
Dk Shivakumar
Shivaprasad B
| Edited By: |

Updated on: Jun 02, 2026 | 10:24 PM

Share

ಬೆಂಗಳೂರು, (ಜೂನ್ 02): ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್  (DK Shivakumar) ಅವರ ಪ್ರಮಾಣವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ನಗರದ ಎಲ್ಲಾ ಜಂಟಿ ಪೊಲೀಸ್ ಆಯುಕ್ತರು, ಲಾ ಅಂಡ್ ಆರ್ಡರ್ ಡಿಸಿಪಿಗಳು ಹಾಗೂ ಟ್ರಾಫಿಕ್ ಡಿಸಿಪಿಗಳ ಜೊತೆ ಸಭೆ ನಡೆಸಿ ಬಂದೋಬಸ್ತ್ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಜೂನ್ 03ರ ಸಂಜೆ 4.05ಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಭಾರಿ ಪ್ರಮಾಣದ ಭದ್ರತೆ ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಕೆಲ ಸಲಹೆ ಸೂಚೆನಗಳನ್ನ ನೀಡಲಾಗಿದೆ.

ಮುಖ್ಯಾಂಶಗಳು

  • ಜೂನ್ 3ರಂದು ಸಿಎಂ ಆಗಿ ಡಿ.ಕೆ.ಶಿವಕುಮಾರ್​ ಪ್ರಮಾಣವಚನ ಸ್ವೀಕಾರ
  • ಲೋಕಭವನದ ಗಾಜಿನಮನೆಯಲ್ಲಿ ನಡೆಯಲಿರುವ ಕಾರ್ಯಕ್ರಮ
  • ಸಮಾರಂಭಕ್ಕೆ ಆಗಮಿಸುವವರಿಗೆ ಕೆಲವು ಸಲಹೆ ಮತ್ತು ಸೂಚನೆಗಳು ನೀಡಿದ ಪೊಲೀಸ್ರು
  • ಪಾಸ್ ಹೊಂದಿರುವವರು ಮಾತ್ರ ಲೋಕಭವನ ಪ್ರವೇಶಕ್ಕೆ ಅವಕಾಶ

ಪ್ರಮಾಣವಚನ ಕಾರ್ಯಕ್ರಮಕ್ಕೆ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ.ಆಗಮಿಸುವ ಅತಿಥಿಗಳಿಗೆ ಪ್ರತ್ಯೇಕ ಪಾಸ್‌ಗಳನ್ನು ವಿತರಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿ ಪೊಲೀಸ್ ಇಲಾಖೆ ಪಡೆದುಕೊಂಡಿದೆ. ಹೊರ ರಾಜ್ಯಗಳಿಂದಲೂ ಹಲವು ಗಣ್ಯರು ಹಾಗೂ ವಿಐಪಿಗಳು ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಅವರ ಭದ್ರತೆಗೂ ವಿಶೇಷ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಡಿ.ಕೆ. ಶಿವಕುಮಾರ್ ಪ್ರಮಾಣ ವಚನಕ್ಕೆ ಬರುವ ಅತಿಥಿಗಳ ಮೆಗಾ ಲಿಸ್ಟ್ ಇಲ್ಲಿದೆ! ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರು ಯಾರು ಗೊತ್ತಾ?

ಸಲಹೆ -ಸೂಚನೆಗಳೇನು?

  • ಪಾಸ್ ಹೊಂದಿರುವವರು ಮಾತ್ರ ಲೋಕಭವನ ಪ್ರವೇಶಕ್ಕೆ ಅವಕಾಶ
  • ಪ್ರತಿ ಪಾಸ್‌ಗೆ ಒಬ್ಬರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ
  • ಪಾಸ್ ಹೊಂದಿರುವವರು ಮಧ್ಯಾಹ್ನ 2 ಗಂಟೆಯೊಳಗೆ ಆಸೀನರಾಗಬೇಕು
  • ಲೋಕಭವನಕ್ಕೆ ಆಗಮಿಸುವವರು ಗೋಪಾಲಗೌಡ ವೃತ್ತದಿಂದ ಪೊಲೀಸ್ ತಿಮ್ಮಯ್ಯ ವೃತ್ತದ ಮೂಲಕ ಲೋಕಭವನ ಪ್ರವೇಶಿಸಬೇಕು.
  • ಕಾರ್ಯಕ್ರಮಕ್ಕೆ ಆಹ್ವಾನ ಹೊಂದಿರುವ ವಾಹನಗಳನ್ನು ಹೊರತುಪಡಿಸಿ ಗೋಪಾಲಗೌಡ ವೃತ್ತ ದಾಟಿ ಮುಂದೆ ಹೋಗಲು ವಾಹನಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
  • ಕಾರಿನ ಪಾಸ್ ಹೊಂದಿರುವ ವಾಹನಗಳನ್ನು ಹೊರತುಪಡಿಸಿ ಪೊಲೀಸ್ ತಿಮ್ಮಯ್ಯ ವೃತ್ತ ದಾಟಿ ಯಾವುದೇ ವಾಹನಗಳಿಗೆ ಪ್ರವೇಶ ಇರಲ್ಲ.
  • ಯಾವುದೇ ಕಾರಣಕ್ಕೂ ಪಾಸ್‌ಗಳು ದುರುಪಯೋಗಪಡಿಸಿಕೊಳ್ಳಬಾರದು. ದುರುಪಯೋಗ ಪಡಿಸಿಕೊಂಡಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ.

ಭಾರಿ ವಾಹನಗಳ ಸಂಚಾರ ನಿಷೇಧ

ಜೂನ್ 3ರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು ನಿರ್ಬಂಧಿತ ರಸ್ತೆಗಳನ್ನು ತಪ್ಪಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಪೊಲೀಸರು, ಸಾರ್ವಜನಿಕರ ಸಹಕಾರವನ್ನು ಕೋರಿದ್ದಾರೆ.

Follow Us
Shivaprasad B
Shivaprasad B