AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಸರ್ಕಾರಿ ಕೆಲಸದ ಆಮಿಷವೊಡ್ಡಿ ಅಪ್ರಾಪ್ತೆ ಜೊತೆ ಎರಡನೇ ಮದುವೆಯಾಗಿದ್ದ ವ್ಯಕ್ತಿ ಅರೆಸ್ಟ್

ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯೋಗೇಶ್, 15 ವರ್ಷದ ಯುವತಿಗೆ ಸರ್ಕಾರಿ ಕೆಲಸದ ಆಮಿಷವೊಡ್ಡಿ ಮದುವೆಯಾಗಿದ್ದ ಎಂಬ ಮಾಹಿತಿ ದೊರಕಿದೆ. ಅಧಿಕಾರಿಗಳು ಅಪ್ರಾಪ್ತೆಯನ್ನು ರಕ್ಷಿಸಿದ್ದಾರೆ. ಸದ್ಯ ಹಾಸನದ ಉಜ್ವಲ ಕೇಂದ್ರದಲ್ಲಿ ಅಪ್ರಾಪ್ತೆ ಇದ್ದಾಳೆ.

ಹಾಸನ: ಸರ್ಕಾರಿ ಕೆಲಸದ ಆಮಿಷವೊಡ್ಡಿ ಅಪ್ರಾಪ್ತೆ ಜೊತೆ ಎರಡನೇ ಮದುವೆಯಾಗಿದ್ದ ವ್ಯಕ್ತಿ ಅರೆಸ್ಟ್
ಯೋಗೇಶ್ ಗೌಡ
TV9 Web
| Edited By: |

Updated on:Jun 06, 2021 | 2:10 PM

Share

ಹಾಸನ: 15 ವರ್ಷದ ಅಪ್ರಾಪ್ತೆಯನ್ನು ಜಿಲ್ಲೆಯ ಅರಕಲಗೂಡು ತಾಲೂಕಿನ ಗ್ರಾಮದ ಯೋಗೇಶ್ ಗೌಡ ಮದುವೆಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. 47 ವರ್ಷದ ಯೋಗೇಶ್ ಗೌಡ ಮೊದಲ ಪತ್ನಿ ನಿಧನವಾದ ಹಿನ್ನೆಲೆ ಎರಡನೇ ಮದುವೆಯಾಗಿದ್ದಾನೆ. ಮೊದಲ ಪತ್ನಿ ಮೃತಪಟ್ಟ 10 ತಿಂಗಳಿಗೆ ಅಪ್ರಾಪ್ತೆ ಜೊತೆ ಯೋಗೇಶ್ ಮದುವೆಯಾಗಿದ್ದು, ಆಲೂರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯೋಗೇಶ್, 15 ವರ್ಷದ ಯುವತಿಗೆ ಸರ್ಕಾರಿ ಕೆಲಸದ ಆಮಿಷವೊಡ್ಡಿ ಮದುವೆಯಾಗಿದ್ದ ಎಂಬ ಮಾಹಿತಿ ದೊರಕಿದೆ. ಅಧಿಕಾರಿಗಳು ಅಪ್ರಾಪ್ತೆಯನ್ನು ರಕ್ಷಿಸಿದ್ದಾರೆ. ಸದ್ಯ ಹಾಸನದ ಉಜ್ವಲ ಕೇಂದ್ರದಲ್ಲಿ ಅಪ್ರಾಪ್ತೆ ಇದ್ದಾಳೆ. 10 ತಿಂಗಳ ಹಿಂದೆ ಅನಾರೋಗ್ಯದಿಂದ ಯೋಗೇಶ್ ಗೌಡ ಪತ್ನಿ ಸಾವನ್ನಪ್ಪಿದ್ದಳು. ವರ್ಷದೊಳಗೆ ಮದುವೆಯಾಗಬೇಕು. ಶುಭಕಾರ್ಯ ನಡೆಯಬೇಕೆಂದು ಎರಡನೆ ಮದುವೆ ಮಾಡಿಕೊಂಡಿದ್ದಾನೆ.

ಬಾಲಕಿ ಹಾಗು ಆಕೆಯ ಪೋಷಕರನ್ನು ಪುಸಲಾಯಿಸಿ ಯೋಗೇಶ್ ಗೌಡ ಅಪ್ರಾಪ್ತೆಯನ್ನು ಮದುವೆಯಾಗಿದ್ದಾನೆ. ದಾವಣಗೆರೆ ಮೂಲದ ಅಪ್ರಾಪ್ತೆ ಆಲೂರು ತಾಲೂಕಿನ ಮುದಿಗೆರೆಯ ಅಜ್ಜಿ ಮನೆಯಲ್ಲಿದ್ದಳು. ನನ್ನ ಮದುವೆಯಾದರೆ ಸರ್ಕಾರಿ ಕೆಲಸ ಸಿಗುತ್ತದೆ ಎಂದು ಆಸೆ ತೋರಿಸಿ ಯೋಗೇಶ್ ಗೌಡ ಮದುವೆಯಾಗಿದ್ದ. ಅರಕಲಗೂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿ ಹಾಸನದ ಉಜ್ವಲ ಕೇಂದ್ರಕ್ಕೆ ಬಿಟ್ಟಿದ್ದಾರೆ. ಈ ಪ್ರಕರಣ ಆಲೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ

ಮಾರಕಾಸ್ತ್ರಗಳಿಂದ ಕೊಚ್ಚಿ ಕಲಬುರಗಿ ಯುವಕನ ಬರ್ಬರ ಕೊಲೆ

ಬಾಗಲಕೋಟೆ: ಇಂದು ಒಂದೇ ದಿನ 3 ಬಾಲ್ಯವಿವಾಹ ತಡೆದ ಅಧಿಕಾರಿಗಳು

(Police have arrested a man who had been married with minor girl for a second time)

Published On - 2:09 pm, Sun, 6 June 21

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ