AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ನಾಮಫಲಕ ತೆಗೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಬಂಧನ

ಗಡಿಯಲ್ಲಿ ತಮಿಳು ಮತ್ತು ಹಿಂದಿ ಬೋರ್ಡ್ ತೆಗೆಯಬೇಕು. ಬ್ಯಾಂಕ್​ಗಳಲ್ಲಿ ಕನ್ನಡದ ಚಲನ್ ಕೊಡಬೇಕು. ಬ್ಯಾಂಕ್​ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ ವಾಟಾಳ್ ನಾಗರಾಜ್, ಬಸ್ ನಿಲ್ದಾಣದ ತಮಿಳು ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

ತಮಿಳು ನಾಮಫಲಕ ತೆಗೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಬಂಧನ
ವಾಟಾಳ್ ನಾಗರಾಜ್​
TV9 Web
| Edited By: |

Updated on: Jul 10, 2021 | 3:35 PM

Share

ಕೋಲಾರ: ಕನ್ನಡ ಉಳಿಸಿ ಚಳುವಳಿ ಮೂಲಕ ತಮಿಳು ನಾಮಫಲಕಕ್ಕೆ ಮಸಿ ಬಳಿದ ಹಿನ್ನೆಲೆ ವಾಟಾಳ್ ನಾಗರಾಜ್ ಮತ್ತು ಪ್ರತಿಭಟನಾ ನಿರತರನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು ಹದಿನೈದಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಕೆಜಿಎಫ್ ನಗರದ ಮುನಿಸಿಪಲ್ ಬಸ್ ನಿಲ್ದಾಣದಲ್ಲಿ ವಾಟಾಳ್ ನಾಗರಾಜ್​ರವರನ್ನು ಬಂಧಿಸಲಾಗಿದೆ. ಕನ್ನಡ ಉಳಿಸಿ ಚಳುವಳಿ ಮಾಡುತ್ತಿರುವ ವಾಟಾಳ್, ತಮಿಳು ನಾಮಫಲಕಗಳನ್ನು ತೆಗೆಯುವಂತೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ ಮಾಡಿದ್ದರು.

ಗಡಿಯಲ್ಲಿ ತಮಿಳು ಮತ್ತು ಹಿಂದಿ ಬೋರ್ಡ್ ತೆಗೆಯಬೇಕು. ಬ್ಯಾಂಕ್​ಗಳಲ್ಲಿ ಕನ್ನಡದ ಚಲನ್ ಕೊಡಬೇಕು. ಬ್ಯಾಂಕ್​ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ ವಾಟಾಳ್ ನಾಗರಾಜ್, ಬಸ್ ನಿಲ್ದಾಣದ ತಮಿಳು ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

ಜುಲೈ 12ಕ್ಕೆ ವಾಟಾಳ್ ಪ್ರತಿಭಟನೆ ಮೇಕೆದಾಟು ಯೋಜನೆ ವಿಚಾರಕ್ಕೆ ಸಂಬಂಧಿಸಿ ಜುಲೈ 12 ರಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಸರ್ವಪಕ್ಷ ಸಭೆ ಕರೆದಿರುವ ಹಿನ್ನೆಲೆ, ಸ್ಟಾಲಿನ್ ಹಾಗೂ ತಮಿಳುನಾಡಿನ ಕ್ರಮ ವಿರೋಧಿಸಿ ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ಮಾಡಲಿದ್ದಾರೆ. ಮೇಕೆದಾಟು ವಿಚಾರವಾಗಿ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದು ತಪ್ಪು. ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ನದಿ ಜೋಡಣೆಗೆ ಮುಂದಾಗಿದೆ ಎಂದು ಹೇಳಿಕೆ ನೀಡಿದ ವಾಟಾಳ್, ಕೇಂದ್ರದಿಂದ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಜುಲೈ 12 ರಂದು ಮೈಸೂರು ಬ್ಯಾಂಕ್ ಸರ್ಕಲ್​​ನಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ

ಕಾರ್ಯಕರ್ತನಿಗೆ ಕಪಾಳಮೋಕ್ಷ: ‘ಹೆಗಲ ಮೇಲೆ ಕೈ ಹಾಕೋದು ಅಂದ್ರೆ ಏನರ್ಥ?’ ಸ್ಪಷ್ಟನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಅಧಿಕಾರಿಗಳು ಕೊಡುವುದು ರಿಪೋರ್ಟ್; ನಮಗೆ ಬೇಕಾಗಿರುವುದು ಸರ್ಟಿಫಿಕೇಟ್: ಕೆಆರ್​ಎಸ್ ಡ್ಯಾಂ ಬಗ್ಗೆ ಪಟ್ಟು ಬಿಡದ ಸುಮಲತಾ

(Police have arrested Vatal Nagaraj who protested in kolar)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್