ಕರ್ನಾಟಕದ ಕಾಂಗ್ರೆಸ್ ಸರ್ಕಾರದಿಂದ ದೇಶ ದ್ರೋಹಿಗಳಿಗೆ ರಕ್ಷಣೆ; ಬಸವರಾಜ ಬೊಮ್ಮಾಯಿ ಟೀಕೆ
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಮೂಲಕ ಜನರಿಗೆ ಹತ್ತಿರವಾಗಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದ್ದರೂ ಕೆಲವು ಅಪ್ರಾಮಾಣಿಕ ಪೊಲೀಸ್ ಅಧಿಕಾರಿಗಳಿಂದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ವಿಳಂಬವಾಗುತ್ತಿದೆ ಮತ್ತು ಕೆಲವೊಂದು ಪ್ರಕರಣಗಳಲ್ಲಿ ಸರ್ಕಾರ ವಿಫಲವಾಗುತ್ತಿದೆ ಎಂಬ ಅಸಮಾಧಾನ ಹೆಚ್ಚಾಗಿದೆ. ಈ ಬಗ್ಗೆ ಕರ್ನಾಟಕದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಕಿಡಿಕಾರಿದ್ದು, ಡ್ರಗ್ಸ್ ಮತ್ತು ಭಯೋತ್ಪಾದನೆ ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದಿದ್ದಾರೆ.

ನವದೆಹಲಿ, ಜುಲೈ 31: ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳು, ಅದನ್ನು ಭೇದಿಸುವಲ್ಲಿ ವಿಫಲವಾಗುತ್ತಿರುವ ನಮ್ಮ ರಾಜ್ಯದ ಗುಪ್ತಚರ ಇಲಾಖೆಯ ಬಗ್ಗೆ ನಿನ್ನೆ (ಜುಲೈ 30) ಟಿವಿ9 ಡಿಜಿಟಲ್ (TV9 Digital) ವಿವರವಾದ ವಿಶ್ಲೇಷಣಾ ಲೇಖನವನ್ನು ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕೂಡ ಇದೇ ವಿಚಾರದ ಬಗ್ಗೆ ದೆಹಲಿಯಲ್ಲಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಡ್ರಗ್ಸ್ ಮತ್ತು ಭಯೋತ್ಪಾದಕರನ್ನು ಪತ್ತೆಹಚ್ಚುವಲ್ಲಿ ಕರ್ನಾಟಕ ಸರ್ಕಾರ (Karnataka Government) ವಿಫಲವಾಗಿದೆ ಎಂದು ಅವರು ಟೀಕಿಸಿದ್ದಾರೆ.
ಡ್ರಗ್ಸ್ ಮತ್ತು ಭಯೋತ್ಪಾದಕಕರನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರ ನಡೆಸುವ ಎಲ್ಲ ನೈತಿಕತೆಯನ್ನು ಕಳೆದುಕೊಂಡಿದೆ. ಅವರು ದೇಶದ್ರೋಹಿಗಳಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಇದನ್ನೂ ಓದಿ: ಮನೆ ಮನೆಗೆ ಕರ್ನಾಟಕ ಪೊಲೀಸ್: ಅಪರಾಧ ಕೃತ್ಯ ಭೇದಿಸಲು ಹೊರ ರಾಜ್ಯಗಳ ಪೊಲೀಸ್!
ನವದೆಹಲಿಯಲ್ಲಿ ಇಂದು ಖಾಸಗಿ ಸುದ್ದಿಯೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲಿಸ್ ಇಲಾಖೆ ಅಪರಾಧ ಕೃತ್ಯಗಳನ್ನು ಮಾಡುವವರ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾರೆ. ಕಳೆದ ವಾರ ಮಹಾರಾಷ್ಟ್ರ ಪೊಲೀಸರು ಮೈಸೂರಿಗೆ ಬಂದು ಸುಮಾರು 394 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ನಮ್ಮ ರಾಜ್ಯದ ಗೃಹ ಸಚಿವರು ಡ್ರಗ್ಸ್ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
#WATCH | Gujarat ATS arrested a woman, Shama Parveen (30) from Bengaluru, who was associated with Al Qaeda.
BJP MP and former Karnataka CM Basavraj Bommai says, “Law and order in Karnataka is becoming the worst. Police have lost control over the criminal activities in… pic.twitter.com/SktnGv0VrP
— ANI (@ANI) July 31, 2025
ಇದನ್ನೂ ಓದಿ: ದಯಾನಂದ್ ಮತ್ತು ಅಧಿಕಾರಿಗಳ ಅಮಾನತು: ಭಾವನಾತ್ಮಕ ಆಕ್ರೋಶ ಪೊಲೀಸರ ನೈತಿಕ ಸ್ಥೈರ್ಯ ಹೆಚ್ಚಿಸದು
ಇನ್ನೊಂದೆಡೆ ಗುಜರಾತ್ ಎಟಿಎಸ್ ತಂಡ ಆಗಮಿಸಿ ಭಾರತ ಉಪ ಖಂಡದಲ್ಲಿ ಆಲ್ ಖೈದಾ ಸದಸ್ಯೆಯಾಗಿರುವ ಮಹಿಳೆಯನ್ನು ಬಂಧಿಸಿದ್ದಾರೆ. ಆಲ್ ಖೈದಾ ಭಾರತದಲ್ಲಿ ಸ್ಥಾಪನೆಯಾಗಿ ಪಾಕಿಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ಮಹಿಳೆ ಭಾರತ ಉಪ ಖಂಡದಲ್ಲಿ ಅಲ್ ಖೈದಾ ಸಂಘಟನೆಗೆ ನೇಮಕಾತಿ ಮಾಡುವ ಕೆಲಸ ಮಾಡುತ್ತಿದ್ದಳು. ಗುಜರಾತ್ ಎಟಿಎಸ್ ತಂಡ ಬಂದು ಅವಳನ್ನು ಬಂಧಿಸಿದ್ದಾರೆ. ಕರ್ನಾಟಕ ಪೊಲಿಸರು ಏನು ಮಾಡುತ್ತಿದ್ದಾರೆ. ರಾಜ್ಯದ ಗೃಹ ಸಚಿವರು ಬೀಟ್ ಪೊಲಿಸ್ ಹಾಗೂ ಇನ್ಸ್ ಪೆಕ್ಟರನ್ನು ಅಮಾನತು ಮಾಡುವುದಾಗಿ ಹೇಳುತ್ತಾರೆ. ಇದು ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆಯ ಸಂಪೂರ್ಣ ವೈಫಲ್ಯವಾಗಿದೆ. ಅವರೇ ಜವಾಬ್ದಾರರಾಗಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




