ಮೋದಿ ಪ್ರವಾಸದ ವೇಳೆ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ಗೆ ನೋಟಿಸ್ ಜಾರಿ
ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಪ್ರವಾಸದ ವೇಳೆ ಅನುಮತಿ ಇಲ್ಲದಿದ್ದರೂ ಪ್ರತಿಭಟನೆ ನಡೆಸಿದ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗಲು 2 ದಿನಗಳ ಕಾಲಾವಕಾಶ ಕೇಳಿದ ನಲಪಾಡ್.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಪ್ರವಾಸದ ವೇಳೆ ಅನುಮತಿ ಇಲ್ಲದಿದ್ದರೂ ಪ್ರತಿಭಟನೆ ನಡೆಸಿದ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed nalapad)ಗೆ ಪೊಲೀಸರಿಂದ ನೋಟಿಸ್ (Notice) ಜಾರಿಯಾಗಿದೆ. ಸೋಮವಾರದಂದು ಮೋದಿ ರಾಜ್ಯ ಪ್ರವಾಸದಲ್ಲಿರುವಾಗ ನಲಪಾಡ್ ಮತ್ತು ಬೆಂಬಲಿಗರು, ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು. ಅನುಮತಿ ನಿರಾಕರಿಸಿದ್ದರೂ ಪ್ರತಿಭಟನೆ ನಡೆಸಿದ ಹಿನ್ನೆಲೆ ಭಾರತಿನಗರ ಠಾಣೆಯ ಇನ್ಸ್ಪೆಕ್ಟರ್ ಅವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ ನಾಳೆ (ಜೂ.22) ದೆಹಲಿಗೆ ತೆರಳುತ್ತಿರುವ ಹಿನ್ನೆಲೆ ವಿಚಾರಣೆಗೆ ಹಾಜರಾಗಲು ಎರಡು ದಿನಗಳ ಕಾಲಾವಕಾಶವನ್ನು ಮೊಹಮ್ಮದ್ ನಲಪಾಡ್ ಕೇಳಿಕೊಂಡಿದ್ದಾರೆ. ಅದರಂತೆ ಎರಡು ದಿನಗಳ ನಂತರ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಲಿದ್ದಾರೆ.
ಇದನ್ನೂ ಓದಿ: ಮಧ್ಯಪ್ರದೇಶ, ಕರ್ನಾಟಕದ ಬಳಿಕ ಮಹಾರಾಷ್ಟ್ರದಲ್ಲಿ ಅಪರೇಷನ್ ಕಮಲ; ಶಿವಸೇನಾ ವಿರುದ್ಧ ಬಂಡಾಯ ಎದ್ದ 22 ಶಾಸಕರು
ಸೋಮವಾರ ಮಧ್ಯಾಹ್ನದ ವೇಳೆಗೆ ಮೋದಿ ಪ್ರವಾಸದ ನಡುವೆ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಮೊಹಮ್ಮದ್ ನಲಪಾಡ್ ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಅವರು ಯೋಜನೆ ವಿರುದ್ಧ ಭಿತ್ತಿಚಿತ್ರ ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇದಾದ ಬಳಿಕ ಸಂಜೆ ವೇಳೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬಳಿ ಮತ್ತೊಮ್ಮೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:26 pm, Tue, 21 June 22