ಜೈಲ್ ಭರೋ ಚಳವಳಿ: ಪ್ರತಿಭಟನಾ ನಿರತ ಸಾರಿಗೆ ನೌಕರರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್
ಕೋಲಾರದ ಸಂಗೊಂಡಹಳ್ಳಿ ಬಳಿ ಸಾರಿಗೆ ನೌಕರರು ಜೈಲ್ ಭರೋ ಚಳವಳಿ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತ ಸಾರಿಗೆ ನೌಕರರನ್ನು ವಶಕ್ಕೆ ಪಡೆದು ಕೋಲಾರ ಗ್ರಾಮಾಂತರ ಠಾಣೆಗೆ ಕರೆದುಕೊಂಡು ಬಂದಿದ್ದರು.
ಕೋಲಾರ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 12 ದಿನಕ್ಕೆ ಬಂದಿದೆ. ಕೊರೊನಾ ಹೆಚ್ಚಳದ ಸಮಸ್ಯೆ ಎದುರಿಸುತ್ತಿರುವ ಸರ್ಕಾರವು ಸಾರಿಗೆ ನೌಕರರ ಮುಷ್ಕರಕ್ಕೆ ಕ್ಯಾರೇ ಅನ್ನುತ್ತಿಲ್ಲ. ಈ ನಡುವೆ ಪ್ರತಿಭಟನಾ ನಿರತ ಸಾರಿಗೆ ನೌಕರರ ಮೇಲೆ ಲಾಠಿ ಚಾರ್ಜ್ ನಡೆದಿದೆ. ಸಾರಿಗೆ ನೌಕರರನ್ನ ಅಟ್ಟಾಡಿಸಿ ಪೊಲೀಸರು ಹೊಡೆದಿರುವ ಘಟನೆ ನಡೆದಿದೆ.
ಕೋಲಾರದ ಸಂಗೊಂಡಹಳ್ಳಿ ಬಳಿ ಸಾರಿಗೆ ನೌಕರರು ಜೈಲ್ ಭರೋ ಚಳವಳಿ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತ ಸಾರಿಗೆ ನೌಕರರನ್ನು ವಶಕ್ಕೆ ಪಡೆದು ಕೋಲಾರ ಗ್ರಾಮಾಂತರ ಠಾಣೆಗೆ ಕರೆದುಕೊಂಡು ಬಂದಿದ್ದರು. ಹೀಗಾಗಿ ಪೊಲೀಸರ ಕ್ರಮ ಖಂಡಿಸಿ ಠಾಣೆಗೆ ಮುತ್ತಿಗೆ ಹಾಕಲು ನೌಕರರು ಪ್ರಯತ್ನಿಸಿದ್ದಾರೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಠಾಣೆ ಎದುರು ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ನೌಕರರನ್ನ ಅಟ್ಟಾಡಿಸಿ ಹೊಡೆದಿದ್ದಾರೆ.
ಇದನ್ನೂ ಓದಿ: ರಸ್ತೆಯಲ್ಲಿ ಹೋಗುವ ಕುಡುಕನ ಮಾತಿನಂತಿದೆ ಸಿದ್ದರಾಮಯ್ಯನವರ ಮಾತು; ಕೆ.ಎಸ್.ಈಶ್ವರಪ್ಪ ವಾಗ್ದಾಳಿ