Davangere News: ಪೊಲೀಸರ ದಾಳಿ; ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷ ಲಕ್ಷ ಮೌಲ್ಯದ ಮದ್ಯ ವಶ

| Updated By: ವಿವೇಕ ಬಿರಾದಾರ

Updated on: Jul 02, 2023 | 7:32 AM

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ಡಿಸಿಆರ್​​ಬಿ ಪೊಲೀಸರು ದಾಳಿ ಮಾಡಿದ್ದು ಅಕ್ರಮವಾಗಿ ಸಂಗ್ರಹಿಸಿದ್ದ 3.61 ಲಕ್ಷ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

Davangere News: ಪೊಲೀಸರ ದಾಳಿ; ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷ ಲಕ್ಷ ಮೌಲ್ಯದ ಮದ್ಯ ವಶ
ಸಾಂದರ್ಭಿಕ ಚಿತ್ರ
Follow us on

ದಾವಣಗೆರೆ: ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ಡಿಸಿಆರ್​​ಬಿ ಪೊಲೀಸರು (Police) ದಾಳಿ ಮಾಡಿದ್ದು ಅಕ್ರಮವಾಗಿ ಸಂಗ್ರಹಿಸಿದ್ದ 3.61 ಲಕ್ಷ ಮೌಲ್ಯದ ಮದ್ಯವನ್ನು (Alcohol) ವಶಪಡಿಸಿಕೊಂಡಿದ್ದಾರೆ. ಈ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಂ.ಬಿ.ರವಿಕುಮಾರ (47) ಹಾಗೂ ತಿಪ್ಪೇಶ (43) ಬಂಧಿತ ಆರೋಪಿಗಳು. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ನಗರದಲ್ಲಿ ಅಕ್ರಮ ಗುಟ್ಕಾ ತಯಾರಿಕಾ ಘಟಕ ಪತ್ತೆ

ಕಲಬುರಗಿ: ನಗರದ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಅಕ್ರಮವಾಗಿ ಗುಟ್ಕಾ ತಯಾರಿಕಾ ಘಟಕ ಪತ್ತೆಯಾಗಿದೆ. ದಾಲ್ ಮಿಲ್​​ನಲ್ಲಿ ಎಂಬ ಘಟಕದಲ್ಲಿ ಅಕ್ರಮವಾಗಿ ಗುಟ್ಕಾ ತಯಾರಿಸಿ ಕೆಲ‌ ಪಾನ್ ಮಸಾಲಾಗಳ ಹೆಸರುಗಳ ನಕಲಿ ಪೌಚ್​​ನಲ್ಲಿ ಮಾರಾಟ ಮಾಡಲಾಗುತ್ತಿತ್ತು. ಸ್ಥಳದಲ್ಲಿ ‌ಗುಟ್ಕಾ ತಯಾರಿಕೆಗೆ ಬಳಸುತ್ತಿದ್ದ ವಸ್ತುಗಳು ಪತ್ತೆಯಾಗಿದೆ.

ಇದನ್ನೂ ಓದಿ: KSRTC ಬಸ್​ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಕೊಡಗು ಮೂಲದ ದಂಪತಿ ಸಾವು

ಬಿಹಾರ್, ಉತ್ತರಪ್ರದೇಶದಿಂದ ಅನೇಕ ಕಾರ್ಮಿಕರನ್ನು ಕರೆತಂದು ನಕಲಿ ಗುಟ್ಕಾ ತಯಾರು ಮಾಡಲಾಗುತ್ತಿತ್ತು. ಪೊಲೀಸರು ಅಕ್ರಮವಾಗಿ ಗುಟ್ಕಾ ತಯಾರಿಸುತ್ತಿದ್ದ ಘಟಕದ ಮಾಲೀಕರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ