ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸರಬರಾಜು ಆರೋಪ: ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸರ ದಾಳಿ

ಸ್ಯಾಂಡಲ್ ವುಡ್ ಡ್ರಗ್ ಡೀಲಿಂಗ್ ಕೇಸ್ ಸಂಬಂಧ ಈ ದಾಳಿ ನಡೆದಿದ್ದು, ಗೋವಿಂದಪುರ ಪೊಲೀಸರಿಂದ ಈ ದಾಳಿ ನಡೆದಿದೆ. ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆ ಮೇಲೆ ಪೊಲೀಸರು ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದಾರೆ.

ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸರಬರಾಜು ಆರೋಪ: ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸರ ದಾಳಿ
ಬಿಗ್ ಬಾಸ್ ಖ್ಯಾತಿಯ ಮಸ್ತಾನ್
Follow us
ಪೃಥ್ವಿಶಂಕರ
|

Updated on:Mar 05, 2021 | 11:58 AM

ಬೆಂಗಳೂರು: ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸರಬರಾಜು ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಿಂದಾಗಿ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ ಡೀಲಿಂಗ್ ಕೇಸ್ ಸಂಬಂಧ ಈ ದಾಳಿ ನಡೆದಿದ್ದು, ಗೋವಿಂದಪುರ ಪೊಲೀಸರಿಂದ ಈ ದಾಳಿ ನಡೆದಿದೆ. ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆ ಮೇಲೆ ಪೊಲೀಸರು ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದಾರೆ. ಬಾಣಸವಾಡಿ ಎಸಿಪಿ ಸಕ್ರಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಗೋವಿಂದರಾಜಪುರ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಸಪ್ಲೈ ಮಾಡುವಾಗ ಬಲೆಗೆ ಬಿದ್ದಿದ್ದ ಡ್ರಗ್ ಫೆಡ್ಲರ್ ಜಾನ್ ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಫೆಡ್ಲರ್ ಜಾನ್ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿದಾಗ ಪೊಲೀಸರಿಗೆ ಮಸ್ತಾನ್ ಚಂದ್ರ ನಂಬರ್ ಸಿಕ್ಕಿತ್ತು. ಅಲ್ಲದೆ ಮಸ್ತಾನ್ ಚಂದ್ರ ಅವರಿಗೆ ಡ್ರಗ್ ನೀಡಿರುವುದಾಗಿ ಜಾನ್ ಹೇಳಿಕೊಂಡಿದ್ದಾನೆ.

ಕೇಶವ್ ಕೌಲ್ ಎಂಬಾತನ ಮನೆ ಮೇಲೂ ಪೊಲೀಸರ ದಾಳಿ.. ಜೊತೆಗೆ ಕೇಶವ್ ಕೌಲ್ ಎಂಬಾತನ ಮನೆ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಸಂಜಯನಗರದ ಪೂರ್ವ ವಿಟ್ರಿಯ ಅಪಾರ್ಟ್ ಮೆಂಟ್​ನಲ್ಲಿ ಕೇಶವ್ ಕೌಲ್ ವಾಸವಾಗಿದ್ದಾನೆ. ಕೇಶವ್ ಕೌಲ್ ಹಾಗೂ ಮಸ್ತಾನ್ ಚಂದ್ರ ಸಂಪರ್ಕದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಬಾಣಸವಾಡಿ ಮತ್ತು ಕೆಜಿ ಹಳ್ಳಿಯ ಹದಿನೈದಕ್ಕೂ ಹೆಚ್ಚು ಮಂದಿ ಪೊಲೀಸರಿಂದ ದಾಳಿ ನಡೆದಿದೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆ ಡ್ರಗ್ ಪೆಡ್ಲರ್ ಅರೆಸ್ಟ್​.. ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಮತ್ತೊಂದು ಕಾರ್ಯಾಚರಣೆ ನಡೆಸಿ MDMA ಡ್ರಗ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಯುಗೋಚುಕ್ವು ವಿಕ್ಟರ್(34) ಬಂಧಿತ ಡ್ರಗ್ ಪೆಡ್ಲರ್ ಆಗಿದ್ದಾನೆ. ಬಂಧಿತನಿಂದ 40 ಲಕ್ಷ ‌ಮೌಲ್ಯದ 500 ಗ್ರಾಂ ತೂಕದ MDMA ಡ್ರಗ್ ಪಿಲ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಆರೋಪಿ ಸ್ಟೂಡೆಂಟ್ ವೀಸಾದಡಿ ಬೆಂಗಳೂರಿಗೆ ಬಂದು ಈ ಕೃತ್ಯ ಎಸಗುತ್ತಿದ್ದ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಆಕ್ಟ್ ಅಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:ಸಿಸಿಬಿ ಪೊಲೀಸರಿಂದ ನೈಜೀರಿಯನ್ ಡ್ರಗ್​ ಪೆಡ್ಲರ್ಸ್ ಸೆರೆ.. ಬಂಧಿತರಿಂದ 15 ಲಕ್ಷ ಮೌಲ್ಯದ ಡ್ರಗ್ಸ್ ವಶ..!

Published On - 7:43 am, Fri, 5 March 21

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು