ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್​ಐಆರ್ ದಾಖಲಿಸಿದ ಪೊಲೀಸರು

| Updated By: Rakesh Nayak Manchi

Updated on: Aug 31, 2023 | 12:07 PM

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಬೆಂಗಳೂರು ನಗರದ ವೈಟ್​​ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಸದ್ಯ ಆರೋಪಿ ಪತ್ತೆಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್​ಐಆರ್ ದಾಖಲಿಸಿದ ಪೊಲೀಸರು
ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಬೆಂಗಳೂರಿನ ವೈಟ್​​ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ
Follow us on

ಬೆಂಗಳೂರು, ಆಗಸ್ಟ್ 31: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಬೆಂಗಳೂರು ನಗರದ ವೈಟ್​​ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಸದ್ಯ ಆರೋಪಿ ಪತ್ತೆಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ, ಜಿ. ಪರಮೇಶ್ವರ್, ಸಿಎಂ ಮಮತಾ ಬ್ಯಾನರ್ಜಿ ಅವರ ಸುದ್ದಿಗಳಿಗೆ ಹಾಗೂ ಅವರು ಮಾಡಿದ ಪೋಸ್ಟ್​ಗಳಿಗೆ ಈಶ್ವರಪ್ಪ ಮುನಿಯಪ್ಪ ಎಂಬ ಟ್ವಿಟರ್​ ಖಾತೆಯಲ್ಲಿ ಅವಾಚ್ಯವಾಗಿ ಸಾಲು ಸಾಲು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅಫಿಷಿಯಲ್ ಅಕೌಂಟ್ ಪೋಸ್ಟ್​ಗಳನ್ನ ಶೇರ್ ಮಾಡಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದನ್ನು ಗಮನಿಸಿದ ವೈಟ್​​ಫೀಲ್ಡ್ ಸೈಬರ್ ಕ್ರೈಂ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ