ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಬಿಗಿ ಭದ್ರತೆ: ಇಂದು ಮಧ್ಯಾಹ್ನ ಸಂಪುಟ ಸಭೆ

ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ಸಿಡಿ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ನಿವಾಸ ಕಾವೇರಿ ಬಳಿ ಪ್ರತಿಭಟನೆ ಮಾಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಬಿಗಿ ಭದ್ರತೆ: ಇಂದು ಮಧ್ಯಾಹ್ನ ಸಂಪುಟ ಸಭೆ
ಬಿ.ಎಸ್​.ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
preethi shettigar
| Updated By: Digi Tech Desk

Updated on:Mar 03, 2021 | 11:21 AM

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ಸಿ.ಡಿ. ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕಾವೇರಿ ನಿವಾಸದ ಬಳಿ ಪ್ರತಿಭಟನೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಿದ್ದು, ಬಿಎಸ್​ವೈ ನಿವಾಸದ ಬಳಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನು ಪೂರ್ವಾನುಮತಿ ಇಲ್ಲದೆ ಯಾರನ್ನೂ ಮನೆಯ ಒಳಗೆ ಬಿಡದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸಂಪುಟ ಸಭೆ: ಇಂದು ಮಧ್ಯಾಹ್ನ 2 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಂಪುಟ ಸಭೆಯಲ್ಲಿ 19 ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಜಲಸಂಪನ್ಮೂಲ ಇಲಾಖೆ 2 ಯೋಜನೆಗಳ ಬಗ್ಗೆ, ಕಡೂರು, ಹೊಸದುರ್ಗ ತಾಲೂಕುಗಳಲ್ಲಿನ ಎರಡು ಯೋಜನೆ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ.

ಇನ್ನು ಸಚಿವ ರಮೇಶ್ ಜಾರಕಿಹೊಳಿ‌ ಹಾಜರಾತಿ ವಿಚಾರವಾಗಿ ಸಂಪುಟ ಸಭೆಯಲ್ಲಿ ಕುತೂಹಲ ಕೆರಳಿಸಿದ್ದು, ರಮೇಶ್ ಜಾರಕಿಹೊಳಿ‌ ದೆಹಲಿಗೆ ತೆರಳಿದ್ದಾರಾ ಎನ್ನುವ ಕೌತುಕ ಎಲ್ಲರಲ್ಲೂ ಇದೆ. ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ಸಿಡಿ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದ್ದು, ಜಾರಕಿಹೊಳಿ‌ ಸಿಡಿ ಮತ್ತು ರಾಜೀನಾಮೆ ವಿಚಾರ, ರಾಜ್ಯ ಸರ್ಕಾರಕ್ಕೆ ಮುಜುಗರ, ದಿನೇಶ್ ಕಲ್ಲಹಳ್ಳಿ ದೂರು ಬಗ್ಗೆಯೂ ಕೂಡ ಇಂದಿನ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಹೊಸ ಡ್ರೆಸ್​ ಹಾಕಿ ಖುಷಿಯಿಂದ ಶಾಲೆಗೆ ಹೋದ ಬಾಲಕಿಯನ್ನು ಬೈದು ಮನೆಗೆ ಕಳಿಸಿದ ಶಿಕ್ಷಕಿ; ನೈತಿಕ ಪೊಲೀಸ್​ಗಿರಿಯ ವಿರುದ್ಧ ನೆಟ್ಟಿಗರು ಗರಂ

Published On - 11:14 am, Wed, 3 March 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್