ಅಕ್ರಮವಾಗಿ ಸಾಗಿಸುತ್ತಿದ್ದ ಗ್ರಾನೈಟ್ ಕಲ್ಲು, ಲಾರಿ ವಶ: ಕನಕಪುರ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
ಕಾನೂನುಬಾಹಿರ ಚಟುವಟಿಕೆಗಳಲ್ಲಿ ಯಾರೇ ಇದ್ದರೂ ಸುಮ್ಮನೆ ಬಿಡುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದರು. ಆದರೆ ರಾಜ್ಯದಲ್ಲಿ ಇದಕ್ಕೆ ಸಂಬಂಧಿಸಿದ ಕೃತ್ಯ ದಿನೇ ದಿನೇ ಹೆಚ್ಚಾಗುತ್ತಲೇ ಇದೆ.
ರಾಮನಗರ: ಇಂದು (ಮಾರ್ಚ್ 13) ಕನಕಪುರ ತಾಲೂಕಿನ ಅರಳಾಳುಸಂದ್ರ ಬಳಿ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ ಗ್ರಾನೈಟ್ ಕಲ್ಲು ಮತ್ತು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಎಂ ಎಂ ಕ್ವಾರಿಯಿಂದ ಆಕ್ರಮವಾಗಿ ಗ್ರಾನೈಟ್ ಕಲ್ಲನ್ನು ಸಾಗಾಟ ಮಾಡಲಾಗುತ್ತಿತ್ತು. ತಹಶೀಲ್ದಾರ್ ವರ್ಷಾ ಒಡೆಯರ್ ಎಂಬುವವರ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಯಾವುದೇ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಿನ್ನೆಲೆ ಲಾರಿ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಈ ಪ್ರಕರಣ ಕನಕಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.
ಹೊಸ ಕಾನೂನು ಜಾರಿಗೆ ಚಿಂತನೆ ರಾಜ್ಯದ ಹಲವು ಕಡೆ ಕಲ್ಲು ಕ್ವಾರಿಯಲ್ಲಿ ಅಕ್ರಮ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ಜಿಲೆಟಿನ್ ಸ್ಪೋಟಕ ಪೂರೈಕೆ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತೇವೆ. ಇದಕ್ಕಾಗಿ ಹೊಸ ಕಾನೂನುಗಳನ್ನು ಜಾರಿ ಮಾಡುವ ಚಿಂತನೆಯೂ ಇದೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಯಾರೇ ಇದ್ದರೂ ಸುಮ್ಮನೆ ಬಿಡುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದರು. ಆದರೆ ರಾಜ್ಯದಲ್ಲಿ ಇದಕ್ಕೆ ಸಂಬಂಧಿಸಿದ ಕೃತ್ಯ ದಿನೇ ದಿನೇ ಹೆಚ್ಚಾಗುತ್ತಲೇ ಇದೆ.
ಒಂದು ತಿಂಗಳ ಗಡುವು ರಾಜ್ಯದ ಎಲ್ಲಾ ಕಲ್ಲು ಕ್ವಾರಿಗಳು ಸರ್ವೆ ನಡೆಸಿ ವದರಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಫೆಬ್ರವರಿ 3 ರಂದು ಸೂಚನೆ ನೀಡಿದ್ದು, ಕ್ವಾರಿಗಳಲ್ಲಿ ಕೈಗೊಲ್ಳುತ್ತಿರುವ ಸುರಕ್ಷತಾ ನಿಯಮಾವಳಿಗಳ ಬಗ್ಗೆ ವದಿ ನೀಡಲು ಒಂದು ತಿಂಗಳ ಕಾಲ ಸಮಯವನ್ನು ನೀಡಿದೆ.
ಇದನ್ನೂ ಓದಿ
ಅಕ್ರಮ ಕಲ್ಲು ಕ್ವಾರಿ ಮೇಲೆ ಅಧಿಕಾರಿಗಳ ದಾಳಿ: 234 ಜಿಲೆಟಿನ್ ಕಡ್ಡಿ, ಸ್ಫೋಟಕ ವಸ್ತು ವಶಕ್ಕೆ
ಜಿಲೆಟಿನ್ ದಾಸ್ತಾನು, ಬಳಕೆಗೆ ಶೀಘ್ರ ಕಟ್ಟುನಿಟ್ಟಿನ ಕಾನೂನು ಜಾರಿ: ಮುರುಗೇಶ್ ನಿರಾಣಿ
Published On - 3:27 pm, Sat, 13 March 21