Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟು ಪ್ರಯತ್ನಿಸಿದರೂ ತಾಯಿಯನ್ನು ಉಳಿಸಿಕೊಳ್ಳಲಾಗಲಿಲ್ಲ, ಆ್ಯಂಬುಲೆನ್ಸ್ ತಬ್ಬಿ ಕಣ್ಣೀರು ಹಾಕಿದ ಪೊಲೀಸ್ ಸಿಬ್ಬಂದಿ

ನಿನ್ನೆ ತಡರಾತ್ರಿ ಕೊರೊನಾದಿಂದ ಬಲಿಯಾದ ತಾಯಿಯನ್ನು ನೋಡಲು ರಾತ್ರಿ 10 ಗಂಟೆಗೆ ಸುಮನಹಳ್ಳಿ ಚಿತಾಗಾರದ ಬಳಿ ಬಂದು ಕಾಯ್ತಿದ್ದ ಹಲಸೂರು ಗೇಟ್ ಪೊಲೀಸ್ ಸಿಬ್ಬಂದಿ ತಾಯಿಯ ಶವ ಬಂದ ಬಳಿಕ ಆ್ಯಂಬುಲೆನ್ಸ್ ತಬ್ಬಿ ಕಣ್ಣೀರು ಹಾಕಿದ್ದಾರೆ.

ಎಷ್ಟು ಪ್ರಯತ್ನಿಸಿದರೂ ತಾಯಿಯನ್ನು ಉಳಿಸಿಕೊಳ್ಳಲಾಗಲಿಲ್ಲ, ಆ್ಯಂಬುಲೆನ್ಸ್ ತಬ್ಬಿ ಕಣ್ಣೀರು ಹಾಕಿದ ಪೊಲೀಸ್ ಸಿಬ್ಬಂದಿ
, ಆ್ಯಂಬುಲೆನ್ಸ್ ತಬ್ಬಿ ಕಣ್ಣೀರು ಹಾಕಿದ ಖಾಕಿ
Follow us
ಆಯೇಷಾ ಬಾನು
| Updated By: Digi Tech Desk

Updated on:Apr 22, 2021 | 11:32 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ತಮ್ಮ ಕಣ್ಣ ಮುಂದೆಯೇ ತಮ್ಮವರು ನರಳು ತಿದ್ದರೂ ಏನು ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಚಿತಾಗಾರದ ಮುಂದೆ ಕೊರೊನಾ ವಾರಿಯರ್ ಕಣ್ಣೀರು ಹಾಕಿದ್ದಾರೆ. ಪೊಲೀಸ್ ಸಿಬ್ಬಂದಿ ತಮ್ಮ ತಾಯಿಯನ್ನು ಕಳೆದುಕೊಂಡು ಬಿಕ್ಕಿ ಬಿಕ್ಕಿ ಅತ್ತಿದ್ದಂತಹ ಕರುಳು ಹಿಂಡುವ ಘಟನೆ ನಡೆದಿದೆ.

ನಿನ್ನೆ ತಡರಾತ್ರಿ ಕೊರೊನಾದಿಂದ ಬಲಿಯಾದ ತಾಯಿಯನ್ನು ನೋಡಲು ರಾತ್ರಿ 10 ಗಂಟೆಗೆ ಸುಮನಹಳ್ಳಿ ಚಿತಾಗಾರದ ಬಳಿ ಬಂದು ಕಾಯ್ತಿದ್ದ ಹಲಸೂರು ಗೇಟ್ ಪೊಲೀಸ್ ಸಿಬ್ಬಂದಿ ತಾಯಿಯ ಶವ ಬಂದ ಬಳಿಕ ಆ್ಯಂಬುಲೆನ್ಸ್ ತಬ್ಬಿ ಕಣ್ಣೀರು ಹಾಕಿದ್ದಾರೆ. 58 ವರ್ಷದ ಲಕ್ಷ್ಮೀ ಕೊರೊನಾಗೆ ಬಲಿಯಾದ ತಾಯಿ. ಇವರ ಪತಿ ಕೂಡ ನಿವೃತ್ತ ಪೊಲೀಸ್ ಸಿಬ್ಬಂದಿ. ಮಗ ಕೂಡ ಈಗ ಹಲಸೂರು ಗೇಟ್ ಪೊಲೀಸ್ ಠಾಣೆಯ ಸಿಬ್ಬಂದಿ. ಕೊರೊನಾ ವಾರಿಯರ್ ಆದ ಈ ಕುಟುಂಬ ಕೊನೆ ಕ್ಷಣದಲ್ಲಿ ತಾಯಿಯನ್ನು ಉಳಿಸಿಕೊಳ್ಳಲು ಪರದಾಡಿದೆ.

100 ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ಅಲೆದಾಡಿ ಬೆಡ್ಗಾಗಿ ಅಂಗಲಾಚಿದೆ. ಕೊಲಂಬಿಯಾ ಏಷಿಯಾದಲ್ಲಿ ಕಾಲಿಗೆ ಬಿದ್ರೂ ಇವರಿಗೆ ಬೆಡ್ ಸಿಕ್ಕಿಲ್ಲ. ಕೊನೆಗೆ ವಿಜಯನಗರ ಮಾರುತಿ ಆಸ್ಪತ್ರೆಗೆ ಕೊರೊನಾ ಸೋಂಕಿತ ತಾಯಿಯನ್ನು ದಾಖಲಿಸಿದ್ದಾರೆ. ಆದ್ರೆ ಅಲ್ಲಿ ಒಂದೇ ದಿನಕ್ಕೆ 1 ಲಕ್ಷ 14 ಸಾವಿರ ಬಿಲ್ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದ ಹಿನ್ನೆಲೆಯಲ್ಲಿ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 7.30 ಕ್ಕೆ ಅಂತ್ಯಕ್ರಿಯೆ ನಡೆದಿದ್ದು ಸರ್ಕಾರದ ವಿರುದ್ಧ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ.

ದರಿದ್ರ ಸರ್ಕಾರ ಇದು. ಕೊರೊನಾ ವಾರಿಯರ್ಸ್ ಅಂತಾರೆ ಅವರಿಗೆ ಈ ಗತಿ ಬಂದಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು. ಎಷ್ಟೇ ಅಲೆದರೂ ಒಂದು ವೆಂಟಿಲೇಟರ್ ಬೆಡ್ ಸಿಗಲಿಲ್ಲ. ಬೊಮ್ಮಾಯಿ ಅವರ ಹೆಂಡತಿ ಮಕ್ಕಳನ್ನ ಮೊದಲು ಕಾಪಾಡಿಕೊಳ್ಳಲಿ. ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಮೃತರ ಸಂಬಂಧಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ನಾವು ಲಸಿಕೆ ಹಾಕಿಸಿಕೊಳ್ಳೋದಿಲ್ಲ; ಇಲ್ಲಿ ಬಂದು ಕೊರೊನಾ ಹಬ್ಬಿಸಬೇಡಿ ಎಂದು ವಿಶ್ವನಾಥ್‌ ವಿರುದ್ಧ ಗರಂ ಆದ ಹಾಡಿ ಜನ

Published On - 11:19 am, Thu, 22 April 21

ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ
ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ