400 ಕೋಟಿ ದರೋಡೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಚುನಾವಣೆಗಾಗಿ ಹಣ ಸಾಗಿಸಲಾಗ್ತಿತ್ತಾ?

Edited By:

Updated on: Jan 26, 2026 | 11:30 AM

ಬೆಳಗಾವಿ ಗಡಿಯಲ್ಲಿ 400 ಕೋಟಿ ರೂಪಾಯಿ ಮೌಲ್ಯದ ಎರಡು ಕಂಟೇನರ್‌ಗಳ ರಾಬರಿ ಪ್ರಕರಣ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದೆ. ಮಹಾರಾಷ್ಟ್ರ ಚುನಾವಣೆ ಅಥವಾ ತಿರುಪತಿಯಲ್ಲಿ ಹವಾಲಾ ಹಣ ಬದಲಾವಣೆಗೆ ಈ ಹಣ ಸಾಗಿಸಲಾಗುತ್ತಿತ್ತು ಎಂಬ ಅನುಮಾನಗಳು ವ್ಯಕ್ತವಾಗಿವೆ. ಮಹಾರಾಷ್ಟ್ರ ಸರ್ಕಾರ ಎಸ್ಐಟಿ ರಚಿಸಿದ್ದು, ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಬೆಳಗಾವಿ, ಜನವರಿ 26: ಚೋರ್ಲಾ ಘಾಟ್ ಬಳಿ ಸುಮಾರು 400 ಕೋಟಿ ರೂಪಾಯಿ ಮೌಲ್ಯದ ಎರಡು ಕಂಟೇನರ್‌ಗಳು ದರೋಡೆಯಾದ ಪ್ರಕರಣ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದೆ. ಅಕ್ಟೋಬರ್‌ನಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಣ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣಾ ಖರ್ಚಿಗೆ ಸಾಗಿಸಲಾಗುತ್ತಿತ್ತು ಎಂಬ ಅನುಮಾನಗಳು ವ್ಯಕ್ತವಾಗಿವೆ. ಮಹಾರಾಷ್ಟ್ರ ಸರ್ಕಾರ ಈ ರಾಬರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದ್ದಾರೆ. ಮತ್ತೊಂದೆಡೆ ಈ ಬಗ್ಗೆ ಗಂಭೀರ ಆರೋಪ ಮಾಡಿರುವ ಕರ್ನಾಟಕ ಬಿಜೆಪಿ ಎಂಎಲ್ಸಿ ರವಿಕುಮಾರ್​​, ಗೋವಾದಿಂದ ತಿರುಪತಿಗೆ ಹಣ ಸಾಗಿಸಿ ಹಳೆ ನೋಟುಗಳನ್ನು ಹೊಸ ನೋಟುಗಳಾಗಿ ಬದಲಾಯಿಸುವ ಯೋಜನೆ ಇತ್ತು ಎಂದಿದ್ದಾರೆ. ಅಲ್ಲದೆ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ, ಪಾಂಡಿಚೇರಿ ಸೇರಿದಂತೆ ಐದು ರಾಜ್ಯಗಳ ಚುನಾವಣೆಗೆ ಹಣ ಸರಬರಾಜು ಆಗುತ್ತಿತ್ತಾ ಎಂ ಬಗ್ಗೆಯೂ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಪ್ರಿಯಾಂಕ್ ಖರ್ಗೆ ಮತ್ತು ಎಂ.ಬಿ. ಪಾಟೀಲ್ ಕೂಡ ಹಣದ ಮೂಲದ ಬಗ್ಗೆ ಪ್ರಶ್ನಿಸಿ, ತನಿಖೆಗೆ ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.