AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡ್ರನ್ನ ಭೇಟಿಯಾದ ಯಡಿಯೂರಪ್ಪ: ಈ ಭೇಟಿ ಹಿಂದೆ ರಾಜಕೀಯ ಲೆಕ್ಕಾಚಾರ!

ರಾಜಕೀಯದಲ್ಲಿ ಯಾರು ಮಿತ್ರರು ಅಲ್ಲ, ಯಾರು ಶತ್ರುಗಳು . ಶತ್ರುವಿನ ಶತ್ರು ಮಿತ್ರ ಎಂಬ ಮಾತಿನಂತೆ ಈ ಹಿಂದೆ ರಾಜಕೀಯ ಬದ್ಧ ವೈರಿಗಳಾಗಿದ್ದ ಮಾಜಿ ಪ್ರಧಾನಿ ಎಚ್​​​ಡಿ ದೇವೇಗೌಡ ಅವರನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭೇಟಿ ಮಾಡಿದ್ದು, ರಾಜ್ಯರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಹಾಗಾದ್ರೆ, ದೇವೇಗೌಡರ ಭೇಟಿ ವೇಳೆ ಏನೆಲ್ಲಾ ಚರ್ಚೆ ಆಯ್ತು? 2028ರ ವಿಧಾನಸಭಾ ಚುನಾವಣೆಯಲ್ಲೂ ಮೈತ್ರಿ ಬಗ್ಗೆ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಅದು ಈ ಕೆಳಗಿನಂತಿದೆ.

ದೇವೇಗೌಡ್ರನ್ನ ಭೇಟಿಯಾದ ಯಡಿಯೂರಪ್ಪ: ಈ ಭೇಟಿ ಹಿಂದೆ ರಾಜಕೀಯ ಲೆಕ್ಕಾಚಾರ!
ಯಡಿಯೂರಪ್ಪ-ದೇವೇಗೌಡ ಬೇಟಿ
ರಮೇಶ್ ಬಿ. ಜವಳಗೇರಾ
|

Updated on:Oct 30, 2026 | 8:36 PM

Share

ಬೆಂಗಳೂರು, (ಅಕ್ಟೋಬರ್ 30): ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಎನ್​​​​ಡಿಯ ಕ್ಲೀನ್ ಸ್ವೀಪ್ ಮಾಡಿದ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆ್ಯಕ್ಟಿವ್ ಆಗಿದ್ದು, ಪುತ್ರ ವಿವೈ ವಿಜಯೇಂದ್ರನ ಮತ್ತಷ್ಟು ಬಲಪಡಿಸಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ. ಹೌದು…ಇಂದು ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಇದೇ ವೇಳೆ ಪ್ರಸಕ್ತ ರಾಜ್ಯ ರಾಜಕಾರಣದ ಬಗ್ಗೆ ಮಹತ್ವದ ಚರ್ಚೆ ಮಾಡಿದ್ದಾರೆ.

ಪುತ್ರನ ಕೈ ಬಲಪಡಿಸಲು ಮುಂದಾದ್ರ ಬಿಎಸ್​​​ವೈ?

ಸೈಲೆಂಟ್ ಆಗಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಯಾವಾಗ ಪರಿಷತ್​​ನ ನಾಲ್ಕು ಕ್ಷೇತ್ರಗಳಲ್ಲೂ ಎನ್​​ಡಿಎ ಗೆಲ್ಲುತ್ತಿದ್ದಂತೆಯೇ ಆ್ಯಕ್ಟಿವ್ ಆಗಿದ್ದಾರೆ.  ತಮ್ಮ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರಿಂದ ಬಿಎಸ್​​ವೈ ಪುಲ್ ಖುಷ್ ಆಗಿದ್ದು, ಇದೇ ಖುಷಿಯಲ್ಲಿ ಪುತ್ರನಿಗೆ ಮತ್ತಷ್ಟು ಬೂಸ್ಟ್ ನೀಡಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಮಿತ್ರ ಪಕ್ಷದ ಮುಖ್ಯಸ್ಥ ದೇವೇಗೌಡ ಅವರನ್ನು ಭೇಟಿ ಮಾಡಿ ರಾಜಕೀಯ ಆಗು ಹೋಗುಗಳ ಬಗ್ಗೆ ಚರ್ಚಿಸಿದ್ದಾರೆ.

ಬಿಜೆಪಿಯಲ್ಲೇ ಕೆಲವರು ವಿಜಯೇಂದ್ರ ಅವರನ್ನು ಮುಂದುವರಿಸಲು ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಪಕ್ಷದಲ್ಲೇ ವಿಜಯೇಂದ್ರ ವಿರೋಧಿ ಬಣವೇ ಸೃಷ್ಟಿಯಾಗಿದೆ.  ಇನ್ನೊಂದೆಡೆ  ವಿಧಾನಸಭೆ ಚುನಾವಣೆಗೆ ಎರಡು ವರ್ಷ ಇದೆ.  ಹೀಗಾಗಿ ಮುಂದೆ ಏನೆಲ್ಲಾ ಬದಲಾವಣೆ ಆಗುತ್ತೋ  ಎನ್ನುವ ದೃಷ್ಟಿಯಿಂದ ಮುಂಜಾಗ್ರತಾವಾಗಿ  ಈಗಿನಿಂದಲೇ ಮಿತ್ರ ಪಕ್ಷದ ಜೊತೆ ಉತ್ತಮ ಸಂಬಂಧ ಇಟ್ಟುಕೊಳ್ಳುವ ಪಯತ್ನ ಇದಾಗಿದೆ ಎನ್ನಬಹುದು.

ಇದನ್ನೂ ನೋಡಿ:  ಹೆಚ್​​.ಡಿ. ದೇವೇಗೌಡರ ಭೇಟಿಯಾದ ಬಿ.ಎಸ್​​. ಯಡಿಯೂರಪ್ಪ: ತೀವ್ರ ಕುತೂಹಲ ಮೂಡಿಸಿದ ರಾಜಕೀಯ ಧುರೀಣರ ನಡೆ

ದೇವೇಗೌಡ ಜೊತೆ ಏನೆಲ್ಲಾ ಮಾತು

ದೇವೇಗೌಡರ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ದೇವೇಗೌಡರ ಜೊತೆ ಪ್ರಚಲಿತ ರಾಜಕೀಯ ಬಗ್ಗೆ ಚರ್ಚೆ ಮಾಡಿದ್ದು, ಅವರು ಕೂಡಾ ಅನೇಕ ಸಲಹೆಗಳನ್ನು ಕೊಟ್ಟಿದ್ದಾರೆ.ಒಂದು ಒಳ್ಳೆಯ ಬಿಜೆಪಿ-ಜೆಡಿಎಸ್ ಸರ್ಕಾರ ಬರಬೇಕು ಎಂಬ ಬಗ್ಗೆ ಎಲ್ಲರ ಅಭಿಪ್ರಾಯ ಇದೆ. ಕುಮಾರಸ್ವಾಮಿಯವರು ಹಾಗೂ ಇತರರ ಜೊತೆ ಚರ್ಚೆ ಬಳಿಕ ಮುಂಬರುವ ಚುನಾವಣೆಗಳಲ್ಲಿ ಕೂಡಾ ಹೋರಾಟ ಮಾಡುತ್ತೇವೆ. ಸುಮಾರು ಮೂವತ್ತು ನಿಮಿಷಗಳ ಕಾಲ ಚರ್ಚೆ ಮಾಡಿದ್ದೇವೆ. ನರೇಂದ್ರ ಮೋದಿ, ಅಮಿತ್ ಶಾ, ದೇವೇಗೌಡರು ಒಟ್ಟಾಗಿ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ಪ್ರಸ್ತುತ ವಿದ್ಯಮಾನಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ. ಒಟ್ಟಾಗಿ ಹೋಗುತ್ತೇವೆ, ಹೋರಾಟ ಮಾಡುತ್ತೇವೆ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು. ಕಾಂಗ್ರೆಸ್ ಗೊಂದಲ, ಬಡಿದಾಟ ನೋಡಿದರೆ, ಪದೇ ಪದೇ ದೆಹಲಿಗೆ ಹೋಗಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವುದನ್ನು ನೋಡಿದರೆ ಯಾವ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು ಎಂಬ ವಾತಾವರಣ ಇದೆ. ಪರಿಸ್ಥಿತಿ ಕೈ ಮೀರಿ ಹೋಗುತ್ತಿದ್ದು, ರಾಜ್ಯದಲ್ಲಿ ನಾವು ದುಸ್ಥಿತಿ ಎದುರಿಸುತ್ತಿದ್ದೇವೆ. ನಾವು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಅವರಿಗೂ ಅರಿವಾಗುತ್ತಿದೆ ಅನ್ನಿಸುತ್ತಿದೆ. ಜನ ಏನು ತೀರ್ಮಾನ ಮಾಡುತ್ತಾರೆ ಎಂದು ನೋಡೋಣ. ಬಸ್ ಗಳಿಗೆ ಡೀಸೆಲ್ ಹಾಕಲೂ ಆಗದ ಪರಿಸ್ಥಿತಿ ರಾಜ್ಯದಲ್ಲಿ ಇದೆ. ಸ್ಟಿಂಗ್ ಆಪರೇಷನ್ ವಿಚಾರ ಎಲ್ಲಾ ನೀವೇ ನೋಡುತ್ತಿದ್ದೀರಲ್ಲ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Fri, 30 October 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್
‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್
‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ
‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ
ಬಿಗ್ ಬಾಸ್ ಮನೆಯಲ್ಲಿ ಸೋನಿಕಾ, ತಾಂಡವ್, ಗಗನ್ ಮದುವೆ ಮಾತುಕತೆ
ಬಿಗ್ ಬಾಸ್ ಮನೆಯಲ್ಲಿ ಸೋನಿಕಾ, ತಾಂಡವ್, ಗಗನ್ ಮದುವೆ ಮಾತುಕತೆ
ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಪೊಲೀಸರ ಜೊತೆಗೆ ಫೀಲ್ಡಿಗಿಳಿದ ಸಚಿವ
ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಪೊಲೀಸರ ಜೊತೆಗೆ ಫೀಲ್ಡಿಗಿಳಿದ ಸಚಿವ
​​ಸ್ಟಿಂಗ್ ಆಪರೇಷನ್​ ಕೇಸಿಗೆ ಸ್ಫೋಟಕ ತಿರುವು:ಕುತೂಹಲ ಮೂಡಿಸಿದ ಸಿಸಿಬಿ ನಡೆ
​​ಸ್ಟಿಂಗ್ ಆಪರೇಷನ್​ ಕೇಸಿಗೆ ಸ್ಫೋಟಕ ತಿರುವು:ಕುತೂಹಲ ಮೂಡಿಸಿದ ಸಿಸಿಬಿ ನಡೆ
ಸಿಎಂಗೆ ಮಹತ್ವದ ಮನವಿ ಮಾಡಿಕೊಂಡ ತನ್ವೀರ್ ಸೇಠ್
ಸಿಎಂಗೆ ಮಹತ್ವದ ಮನವಿ ಮಾಡಿಕೊಂಡ ತನ್ವೀರ್ ಸೇಠ್
ವಾಟಾಳ್ ನಾಗರಾಜ್​ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಬೇಕು ಎಂದು ನನಗೆ ಆಸೆ: ಸಿಎಂ
ವಾಟಾಳ್ ನಾಗರಾಜ್​ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಬೇಕು ಎಂದು ನನಗೆ ಆಸೆ: ಸಿಎಂ
ದಾವಣಗೆರೆ: ಮನೆ ಮುಂದೆ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ
ದಾವಣಗೆರೆ: ಮನೆ ಮುಂದೆ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ
ಸ್ಟಿಂಗ್​​ ಪ್ರಕರಣ ಸಂಬಂಧ ಕುಮಾರಸ್ವಾಮಿ ದೆಹಲಿ ಮನೆ ಮಹಜರು?
ಸ್ಟಿಂಗ್​​ ಪ್ರಕರಣ ಸಂಬಂಧ ಕುಮಾರಸ್ವಾಮಿ ದೆಹಲಿ ಮನೆ ಮಹಜರು?