
ಚಿಕ್ಕಮಗಳೂರು: ಗ್ರಾಮ ಪಂಚಾಯತಿ ಚುನಾವಣಾ ಪ್ರಚಾರಕ್ಕೆ ಹೋದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾಂಬಳೆ ಗ್ರಾಮದಲ್ಲಿ ನಡೆದಿದೆ.
ಇದೇ ತಿಂಗಳಿನಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿ ಚುನಾವಣೆ ಪ್ರಚಾರಕ್ಕಾಗಿ ಶೋಭಾ ಕರಂದ್ಲಾಜೆ ತೆರಳಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಲವು ವರ್ಷಗಳಿಂದ ಮೊಬೈಲ್ ನೆಟ್ವರ್ಕ್ ಸಮಸ್ಯೆಗಳನ್ನು ಅನುಭವಿಸುತ್ತಿದ್ದೇವೆ. ಆದರೆ ಇದಕ್ಕೆ ಇಲ್ಲಿವರೆಗೆ ಯಾರು ಪರಿಹಾರವನ್ನು ನೀಡಿಲ್ಲ.
ಕುದುರೆಮುಖ, ಜಾಂಬಳೆ, ಕೆಂಕನಕೊಂಡ, ಬಿಳಗಲ್, ನೆಲ್ಲಿಬೀಡಲ್ಲಿ ನೆಟ್ವರ್ಕ್ ಸಮಸ್ಯೆ ದೊಡ್ಡ ಮಟ್ಟದಲ್ಲಿ ಕಾಡುತ್ತಿದ್ದು, ಇದಕ್ಕೆ ಪರಿಹಾರವನ್ನು ಆದಷ್ಟು ಬೇಗ ನೀಡಬೇಕೆಂದು ಸಂಸದೆ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರು ಹಾಗೂ ಗ್ರಾಮಸ್ಥರ ಮಧ್ಯೆ ಜಟಾಪಟಿ ನಡೆದಿದ್ದು, ಶಾಸಕ ಎಂ.ಪಿ ಕುಮಾರಸ್ವಾಮಿಯನ್ನು ಕೂಡಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಗ್ರಾ.ಪಂ. ಚುನಾವಣೆಯಲ್ಲಿ ಫೇಸ್ಬುಕ್ ಹವಾ: ಕೋಟೆನಾಡಿನಲ್ಲಿ ಹಳ್ಳಿಹಕ್ಕಿಗಳ ಪೋಸ್ಟ್ ಕಮೆಂಟ್ ಅಬ್ಬರ