ಕಳಪೆ ಮಟ್ಟದ ಆಹಾರ, ಸೂಕ್ತ ವ್ಯವಸ್ಥೆ ಇಲ್ಲದ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳ ಪರದಾಟ
ಚಿತ್ರದುರ್ಗ: ಶಿಕ್ಷಣ ಕ್ಷೇತ್ರ ಅಭಿವೃದ್ಧಿಗಾಗಿ ನಾನಾ ಯೋಜನೆಗಳನ್ನು ರೂಪಿಸಲಾಗುತ್ತದೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತದೆ. ಆದ್ರೆ, ಭ್ರಷ್ಟರು ಮಾತ್ರ ವಿದ್ಯಾರ್ಥಿಗಳಿಗೆ ನೀಡುವ ಅನ್ನಕ್ಕೂ ಕನ್ನ ಹಾಕುತ್ತಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರ ತವರು ಕ್ಷೇತ್ರದಲ್ಲೇ ಬಿಸಿಎಂ ಹಾಸ್ಟೆಲ್ ಗಳ ಸ್ಥಿತಿ ಹೇಳತೀರದಾಗಿದೆ. ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದ ದಿವಂಗತ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ. ಸರ್ ಎಂ.ವಿಶ್ವೇಶ್ವರಯ್ಯ ಗ್ರಾಮೀಣ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ವಿದ್ಯಾಭ್ಯಾಸ ಮಾಡುವ 40 ವಿದ್ಯಾರ್ಥಿಗಳು […]

ಚಿತ್ರದುರ್ಗ: ಶಿಕ್ಷಣ ಕ್ಷೇತ್ರ ಅಭಿವೃದ್ಧಿಗಾಗಿ ನಾನಾ ಯೋಜನೆಗಳನ್ನು ರೂಪಿಸಲಾಗುತ್ತದೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತದೆ. ಆದ್ರೆ, ಭ್ರಷ್ಟರು ಮಾತ್ರ ವಿದ್ಯಾರ್ಥಿಗಳಿಗೆ ನೀಡುವ ಅನ್ನಕ್ಕೂ ಕನ್ನ ಹಾಕುತ್ತಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರ ತವರು ಕ್ಷೇತ್ರದಲ್ಲೇ ಬಿಸಿಎಂ ಹಾಸ್ಟೆಲ್ ಗಳ ಸ್ಥಿತಿ ಹೇಳತೀರದಾಗಿದೆ.
ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದ ದಿವಂಗತ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ. ಸರ್ ಎಂ.ವಿಶ್ವೇಶ್ವರಯ್ಯ ಗ್ರಾಮೀಣ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ವಿದ್ಯಾಭ್ಯಾಸ ಮಾಡುವ 40 ವಿದ್ಯಾರ್ಥಿಗಳು ಸೇರಿ ವಿವಿಧ ಕಾಲೇಜುಗಳ ಒಟ್ಟು 80ಜನ ವಿದ್ಯಾರ್ಥಿಗಳು ಇದೇ ಹಾಸ್ಟಲ್‌ನಲ್ಲಿದ್ದಾರೆ.
ಆದ್ರೆ ಈ ಹಾಸ್ಟೆಲ್ ಅವ್ಯವಸ್ಥೆಯ ಆಗರವಾಗಿದ್ದು, ವಿದ್ಯಾರ್ಥಿಗಳು ದಿನನಿತ್ಯ ಪರದಾಡುತ್ತಿದ್ದಾರೆ. ಇಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದು, ಯಾವಾಗ್ಲೋ ಅಡುಗೆ ಮಾಡಿಟ್ಟು ಹೋಗುತ್ತಿದ್ದಾರಂತೆ.
ಇನ್ನು ಕೇವಲ ಕಳಪೆ ಆಹಾರ ಮಾತ್ರವಲ್ಲ ಇಲ್ಲಿ ಸೂಕ್ತ ನೀರಿನ ವ್ಯವಸ್ಥೆಯೂ ಇಲ್ಲ. ರಾತ್ರಿ ಮಲಗುವುದಂತೂ ಶಿಕ್ಷೆಯೇ ಸರಿ. ಹೀಗಾಗಿ, ಹಾಸ್ಟಲ್ ವಾರ್ಡನ್ ಮತ್ತು ಇಲ್ಲಿನ ಸಿಬ್ಬಂದಿ ಸರ್ಕಾರ ಹಣವನ್ನು ದುರುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳ ಅನ್ನಕ್ಕೆ ಕನ್ನ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳನ್ನ ಕೇಳಿದ್ರೆ ಹಾಸ್ಟಲ್ ಅವ್ಯವಸ್ಥೆ ನಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಅಂತಿದ್ದಾರೆ.

Published On - 5:14 pm, Sun, 1 December 19




