ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ 1: ಸ್ಪಷ್ಟನೆ ನೀಡುವ ಬರದಲ್ಲಿ ರಾಯರೆಡ್ಡಿ ಮತ್ತೊಂದು ಎಡವಟ್ಟು

| Updated By: ವಿವೇಕ ಬಿರಾದಾರ

Updated on: Apr 09, 2025 | 7:14 PM

ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ ಒನ್​ ಇದೆ ಎಂಬ ಹೇಳಿಕೆ ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಈ ಹೇಳಿಕೆಯನ್ನು ಇಟ್ಟುಕೊಂಡು ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುತ್ತಿವೆ. ಈ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡುವ ಭರದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ 1: ಸ್ಪಷ್ಟನೆ ನೀಡುವ ಬರದಲ್ಲಿ ರಾಯರೆಡ್ಡಿ ಮತ್ತೊಂದು ಎಡವಟ್ಟು
ಬಸವರಾಜ ರಾಯರೆಡ್ಡಿ
Follow us on

ಬೆಂಗಳೂರು, ಏಪ್ರಿಲ್​ 09: ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್​ (Karnataka No.1 in Corruption) ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರರೂ ಆಗಿರುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ (Basavaraj Rayareddy) ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುತ್ತಿವೆ. ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡುವ ಭರದಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, ರಾಜ್ಯದಲ್ಲಿ ಕಳಪೆ ಗುಣಮಟ್ಟದ ಕಾಮಗಾರಿಗಳು ಆಗುತ್ತಿವೆ. ಇದು ನಿಲ್ಲಬೇಕು ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದ ದೃಷ್ಟಿಯಿಂದ ಭ್ರಷ್ಟಾಚಾರದ ವಿಚಾರವಾಗಿ ಮಾತನಾಡಿದ್ದೇನೆ. ಯಾವ ಪಕ್ಷದ ವಿರುದ್ಧವೂ ನಾನು ಮಾತನಾಡಿಲ್ಲ. ಕರ್ನಾಟಕದಲ್ಲಿ ಈ ಬಗ್ಗೆ ಚರ್ಚೆಯಾಗಲಿ. ಭ್ರಷ್ಟಾಚಾರ ವ್ಯವಸ್ಥೆ ತಡೆಗಟ್ಟಲು ಮುಖ್ಯಮಂತ್ರಿಗಳು ದಿಟ್ಟವಾದ ಹೆಜ್ಜೆ ಇಟ್ಟಿದ್ದಾರೆ. ಈಗಿನ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಇಲ್ಲ ಅಂತ ಹೇಳಲ್ಲ ಎಂದರು.

ನಾನು ಆತ್ಮವಂಚನೆ ಮಾಡಿಕೊಂಡು ಇಂದು ಪ್ರತಿಕ್ರಿಯೆ ನೀಡುತ್ತಿಲ್ಲ. ಮುಡಾದಲ್ಲಿ ಸಿಎಂ ತಪ್ಪಿಲ್ಲ, ಆರೋಪ ಬಂದಿದ್ದಕ್ಕೆ ಸೈಟ್ ವಾಪಸ್ ಕೊಟ್ಟಿದ್ದಾರೆ. ​ಸಿದ್ದರಾಮಯ್ಯ ನನ್ನ ಸ್ನೇಹಿತರು, ಮುಕ್ತವಾಗಿ ಮುಖ್ಯಮಂತ್ರಿಗಳನ್ನು ಬೆಂಬಲಿಸುತ್ತೇನೆ ಎಂದರು.

ಇದನ್ನೂ ಓದಿ
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ಬಾಬ್ರಿ ಮಸೀದಿ ಒಡೆದು ರಾಮ ಮಂದಿರ ನಿರ್ಮಾಣ ಮಾಡಿದ್ರು ಮುಸ್ಲಿಂ ವಿರೋಧಿಸಿಲ್ಲ
ಜುಲೈನಲ್ಲಿ ಸಚಿವ ಸಂಪುಟ ಪುನರ್ ರಚನೆ: ಸುಳಿವು ನೀಡಿದ ಬಸವರಾಜ್ ರಾಯರೆಡ್ಡಿ
ಕಳೆದವಾರ ಸಿಎಂಗೆ ಶಾಸಕ ಬಸವರಾಜ ರಾಯರೆಡ್ಡಿ ಪತ್ರ ಬರೆದಿದ್ದರು.

ಅಭಿವೃದ್ಧಿ ಕೆಲಸದಲ್ಲಿ ಭ್ರಷ್ಟಾಚಾರ ನಿಲ್ಲಬೇಕು

ಅಬಕಾರಿ ಇಲಾಖೆ, ಸಾರಿಗೆ ಇಲಾಖೆಯಲ್ಲಿ‌ ಭ್ರಷ್ಟಾಚಾರ ಆಗ್ತಿತ್ತು. ಮುಖ್ಯಮಂತ್ರಿಗಳು ಇದಕ್ಕೆ ಈಗ ಕಡಿವಾಣ ಹಾಕುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪ, ಕೆಂಗಲ್ ಹನುಮಂತಯ್ಯ ಅವರ ಮೇಲೆಯೂ ಭ್ರಷ್ಟಾಚಾರದ ಆಪಾದನೆ ಬಂದಿತ್ತು. ಅಭಿವೃದ್ಧಿ ಕೆಲಸದಲ್ಲಿ ಭ್ರಷ್ಟಾಚಾರ ನಿಲ್ಲಬೇಕು. ಎಲ್ಲೆಲ್ಲಿ ತಪ್ಪಾಗಿದೆ ಸರಿಪಡಿಸಲು ಸಲಹೆ ನೀಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಸಚಿವರಷ್ಟೇ ಅಲ್ಲ; ಈಗ ಅಧಿಕಾರಿಗಳೂ ಕ್ಯಾರೇ ಅಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಮತ್ತೆ ಪತ್ರ ಬರೆದ ಶಾಸಕ ಬಸವರಾಜ ರಾಯರೆಡ್ಡಿ

ನಮ್ಮ ಸರ್ಕಾರದ ಮೇಲೆ ಆರೋಪ ಮಾಡಲು ಬಿಜೆಪಿಗೆ ಯಾವ ನೈತಿಕತೆಯೂ ಇಲ್ಲ. ಬಿಜೆಪಿ ಸರ್ಕಾರದಲ್ಲಿ ಎಷ್ಟು ಜನ ಮಂತ್ರಿಗಳು ಜೈಲಿಗೆ ಹೋಗಿ ಬಂದಿಲ್ಲ? ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಹಕ್ಕಿಲ್ಲ. ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಆರೋಪ ಕೇಳಿ ಬಂದಿದೆ. ಅದರ ಬಗ್ಗೆ ತನಿಖೆ ಆಗುತ್ತಿದೆ. ಹಿಂದಿನ ಸರ್ಕಾರದಿಂದ ಕರ್ನಾಟಕ ಕೆಟ್ಟಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಸರಿ ಮಾಡಬೇಕು, ಸರಿಪಡಿಸುತ್ತಾರೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Wed, 9 April 25