Karnataka Rains: ಕರ್ನಾಟಕದ ಈ 6 ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಭಾರಿ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನವೆಂಬರ್ 9 ರಿಂದ ಮೂರು ದಿನಗಳ ಕಾಲ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ಈ 6 ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಭಾರಿ ಮಳೆ, ಯೆಲ್ಲೋ ಅಲರ್ಟ್​
ಮಳೆ
Image Credit source: PTI

Updated on: Nov 05, 2024 | 7:33 AM

ಕರ್ನಾಟಕದ 6 ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ಧರ್ಮಸ್ಥಳ, ಮಾಣಿ, ಉಪ್ಪಿನಂಗಡಿ, ಪುತ್ತೂರು, ಬೆಳ್ತಂಗಡಿ, ಭಾಗಮಂಡಲ, ಹೆಸರಘಟ್ಟ, ಕೊಲ್ಲೂರು, ಚನ್ನರಾಯಪಟ್ಟಣ, ಮೂಡಿಗೆರೆ, ಸೋಮವಾರಪೇಟೆ, ಕೊಟ್ಟಿಗೆಹಾರ, ಚಿಂತಾಮಣಿ, ಬೇಲೂರು, ದೊಡ್ಡಬಳ್ಳಾಪುರ, ಎಂಎಂ ಹಿಲ್ಸ್​ನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ನವೆಂಬರ್ 9ರ ಬಳಿಕ ಮತ್ತೆ ಹೆಚ್ಚಾಗಲಿದೆ ಮಳೆ

ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 16.5 ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 28.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us