ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಪೋಸ್ಟ್ ಹಾಕುವ ಮುನ್ನ ಎಚ್ಚರ: ಪೊಲೀಸ್ ಇಲಾಖೆಯಿಂದ ಸೂಕ್ತ ಕ್ರಮ
ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮ ಪೋಸ್ಟ್ ಹಾಕಿದರೇ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮ ಪೋಸ್ಟ್ ಹಾಕಿದರೇ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. “ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸೂಕ್ತ ಕಾನೂನು ಕ್ರಮವನ್ನು ಪ್ರಾರಂಭಿಸುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ” ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಕಾಳಿ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ
ಜನೆವರಿ 17 ರಂದು ರಿಷಿ ಕುಮಾರ್ ಸ್ವಾಮೀಜಿ ಶ್ರೀರಂಗಪಟ್ಟಣದ ಮಸೀದಿ ಮುಂದೆ ನಿಂತು ವಿಡಿಯೋ ಮಾಡಿ ಹಿಂದೂಗಳಿಗೆ ಕರೆ ನೀಡಿದ್ದರು. ಶ್ರೀರಂಗಪಟ್ಟಣದ ದೇವಾಲಯವನ್ನು ಕೆಡವಿ ಮಸೀದಿ ಮಾಡಿದ್ದಾರೆ. ಇದು ಮೊದಲು ದೇವಾಲಯವಿತ್ತು. ಇದನ್ನು ಕೆಡವಿದ್ದಾರೆ ಅಂತಾ ಆರೋಪಿಸಿ, ಇದನ್ನು ಆದಷ್ಟು ಬೇಗ ಬಾಬ್ರಿ ಮಸೀದಿ ರೀತಿಯಲ್ಲಿ ಕೆಡವಬೇಕೆಂದು ರಿಷಿ ಕುಮಾರ್ ಸ್ವಾಮೀಜಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಹಿಂದೂಗಳು ಅತಿ ಬೇಗ ಜಾಗೃತರಾಗಿ ಹೊಡೆಯಬೇಕಾದ ಮಸೀದಿಯಲ್ಲಿ ಇದೂ ಒಂದು ಎಂದು ವಿಡಿಯೋ ಮಾಡಿದ್ದರು.
ಇದು ವಿವಾದಾತ್ಮಕ ವಿಡಿಯೋ ಸಮಾಜದಲ್ಲಿ ಕೋಮು ಸೌಹಾರ್ದತೆ ಹಾನಿ ಆಗುವ ನಿಟ್ಟಿನಲ್ಲಿ ಚಿಕ್ಕಮಗಳೂರು ಪೊಲೀಸರು ಜನೆವರಿ 18 ರಂದು ಬೆಳಿಗಿನ ಜಾವ 4-30ಕ್ಕೆ ಚಿಕ್ಕಮಗಳೂರು ಮಠದಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
Published On - 4:26 pm, Sun, 31 July 22