ಕರ್ನಾಟಕದ ವಿವಿಧೆಡೆ ಪೌರಕಾರ್ಮಿಕರ ಪ್ರತಿಭಟನೆ: ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ

ಕರ್ನಾಟಕದ ವಿವಿಧೆಡೆ ಪೌರಕಾರ್ಮಿಕರ ಪ್ರತಿಭಟನೆ: ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ
ಬೆಂಗಳೂರಿನಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 01, 2022 | 1:01 PM

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನಗರ ಸೇರಿದಂತೆ ಕರ್ನಾಟಕದ ವಿವಿಧೆಡೆ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ 6.30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿದ್ದಾರೆ. ವೇತನ ಹೆಚ್ಚಳ ಮತ್ತು ಹುದ್ದೆ ಕಾಯಮಾತಿ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಪರಾಮರ್ಶೆ ನಡೆಸಲಿದ್ದಾರೆ. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರಿಗೆ ₹ 2,000 ಸಂಕಷ್ಟ ಭತ್ಯೆ ಕೊಡಲು ಸರ್ಕಾರ ನಿರ್ಧರಿಸಿದೆ. ಇಂದು ಮಧ್ಯಾಹ್ನ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಂಕಷ್ಟ ಭತ್ಯೆಗೆ ಅನುಮೋದನೆ ಸಿಗುವ ಸಾಧ್ಯತೆಯಿದೆ.

ಫ್ರೀಡಂ ಪಾರ್ಕ್​ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ನೌಕರಿ ಕಾಯಮಾತಿಗೆ ಒತ್ತಾಯಿಸುತ್ತಿರುವ ಅವರು, ಮುಖ್ಯಮಂತ್ರಿ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಬೆಂಗಳೂರು ನಗರ ಹಾಗೂ ರಾಜ್ಯಾದ್ಯಂತ ನೇರವೇತನ ಪೌರ ಕಾರ್ಮಿಕರನ್ನು ಕಾಯಂ ಮಾಡಬೇಕು. ಬೆಂಗಳೂರು ನಗರದಲ್ಲಿ ಮೇಲ್ವಿಚಾರಕರನ್ನು (ಮೇಸ್ತ್ರಿ) ಕಾಯಂ ಮಾಡಬೇಕು. ಬೆಂಗಳೂರು ನಗರ ಆಟೋಚಾಲಕರು, ಲಾರಿ ಚಾಲಕರು, ಲೋಡರ್ಸ್ ಸಹಾಯಕರನ್ನು ಕಾಯಂ ಮಾಡಬೇಕು ದಿವಂಗತ ಐಡಿಪಿ ಸಾಲಪ್ಪ ಅವರ ವರದಿಯನ್ನು ಜಾರಿಗೆ ತರಬೇಕು. ಒಳಚರಂಡಿ ಸ್ವಚ್ಛತಾ ಕಾರ್ಮಿಕರನ್ನು ಕಾಯಂ ಮಾಡಬೇಕು ಎಂದು ಪೌರಕಾರ್ಮಿಕರು ಒತ್ತಾಯಿಸುತ್ತಿದ್ದಾರೆ.

ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ ಮಹಾನಗರ ಪಾಲಿಕೆ ಹೊರಗುತ್ತಿಗೆ ಪೌರಕಾರ್ಮಿಕರು ಚನ್ನಮ್ಮ ವೃತ್ತದಲ್ಲಿ ದಿಢೀರ್ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪೌರಕಾರ್ಮಿಕರ ಸೇವೆ ಕಾಯಂಗೊಳಿಸಬೇಕು. ಹೊರಗುತ್ತಿಗೆ ನೌಕರರನ್ನು ಪೌರಕಾರ್ಮಿಕ ಮಾದರಿಯಲ್ಲಿ ನೇರ ವೇತನಕ್ಕೆ ಅರ್ಹರಾಗಿಸಬೇಕು ಎಂದು ಒತ್ತಾಯಿಸಿದರು. ಪೌರ ಕಾರ್ಮಿಕರ ಎರಡನೇ ಹಂತದ ನೇಮಕಾತಿ ಆರಂಭಿಸಬೇಕು ಎಂದು ಕೋರಿದ ಅವರು, ಇಂದು ಕರ್ತವ್ಯ ನಿರ್ವಹಿಸಲಿಲ್ಲ. ಹೀಗಾಗಿ ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದ ಕಸ ರಾಚುತ್ತಿತ್ತು. ಸಾರ್ವನಿಕರು ಮೂಗು ಮುಚ್ಚಿಕೊಂಡು ಸಂಚರಿಸಬೇಕಾಯಿತು.

ರಾಮನಗರ ಜಿಲ್ಲೆಯ ವಿವಿಧ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳ ಪೌರಕಾರ್ಮಿಕರು ಕೆಲಸ ನಿಲ್ಲಿಸಿ, ಜಿಲ್ಲಾಧಿಕಾರಿ‌ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

Published On - 1:01 pm, Fri, 1 July 22

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ