Bengaluru Power cut : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು 5 ಗಂಟೆ ವಿದ್ಯುತ್ ವ್ಯತ್ಯಯ
ಬೆಸ್ಕಾಂ ಹೆಣ್ಣೂರು ಎಂಯುಎಸ್ಎಸ್-66ಕೆ.ವಿ. ಉಪ ಕೇಂದ್ರದಲ್ಲಿ ತುರ್ತುನಿರ್ವಹಣಾ ಕಾಮಗಾರಿ ಹಿನ್ನಲೆ ಸೆಪ್ಟೆಂಬರ್ 30 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ವಿದ್ಯುತ್ ಸರಬರಾಜು ಕಡಿತಗೊಳ್ಳಲಿದೆ ಎಂದು ತಿಳಿಸಲಾಗಿದೆ. ಹಾಗಾದರೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು, ಸೆಪ್ಟೆಂಬರ್ 30: ಬೆಸ್ಕಾಂ (BESCOM) ಹೆಣ್ಣೂರು ಎಂಯುಎಸ್ಎಸ್-66ಕೆ.ವಿ. ಉಪ ಕೇಂದ್ರದಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವುದರ ಸಲುವಾಗಿ ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರಿನ ವಿದ್ಯುತ್ ಸರಬರಾಜು ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ಕಡಿತ?
ಹೆಣ್ಣೂರು ಬಂಡೆ, ಸಮುದ್ರಿಕಾ ಎನ್ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ತು ಜಯಂತಿ ಕಾಲೇಜು, ಕೆ. ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್ಶಿಪ್, ಮಾರುತಿ ಟೌನ್ಶಿಪ್, ನಾಗರಗಿರಿ ಟೌನ್ಶಿಪ್, ಬಿಡಿಎಸ್ ಗಾರ್ಡನ್, ಕೊತ್ತನೂರು, ಪಟೇಲ್ ರಾಮಯ್ಯ ಲೇಔಟ್, ಸಿಎಸ್ಐ ಗೇಟ್, ಬೈರತಿ ಕ್ರಾಸ್, ಬೈರತಿ ಗ್ರಾಮ, ಗೆದ್ದಲಹಳ್ಳಿ, ಬ್ಲೆಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟಮೆಂಟ್, ಹಿರೇಮಠ ಲೇಔಟ್, ಟ್ರೆನಿಟಿ ಫಾರ್ಚುನ್, ಮೈಕಲ್ ಸ್ಕೂಲ್, ಬಿಎಚ್ಕೆ ಇಂಡಸ್ಟ್ರೀಸ್, ಜಾನಕಿರಾಮ್ ಲೇಔಟ್, ವಡ್ಡರಪಾಳ್ಯ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಪ್ರಕಾಶ್ ಗಾರ್ಡನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.
ವಿದ್ಯುತ್ ಸಂಬಂಧಿತ ದೂರು ನೀಡಲು ಸಂಪರ್ಕಿಸಿ
ವಿದ್ಯುತ್ ಸಂಪರ್ಕ ಸಂಬಂಧಿತ ದೂರುಗಳನ್ನು ವಾಟ್ಸ್ಆ್ಯಪ್ ಮೂಲಕವೇ ನೀಡಬಹುದು.ಬೆಸ್ಕಾಂ ಸಹಾಯವಾಣಿ ಸಂಖ್ಯೆಗಳ ವಿವರವನ್ನೂ ನೀಡಿದೆ.
ಬೆಂಗಳೂರು ನಗರ
- ದಕ್ಷಿಣ ವೃತ್ತ : 8277884011
- ಪಶ್ಚಿಮ ವೃತ್ತ:8277884012
- ಪೂರ್ವ ವೃತ್ತ : 8277884013
- ಉತ್ತರ ವೃತ್ತ :8277884014
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:56 am, Tue, 30 September 25




