Bengaluru Power Cut: ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ! ಇಲ್ಲಿದೆ ಮಾಹಿತಿ
Power Cut: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಇಂದು(ಆ.11) ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತನ ಕೇಬಲ್ ಪರಿವರ್ತನೆ ಕಾಮಗಾರಿ ಮತ್ತು ಇತರೆ ನಿರ್ವಹಣಾ ಯೋಜನೆಗಳು ವಿದ್ಯುತ್ ವ್ಯತ್ಯಯಕ್ಕೆ ಕಾರಣವಾಗಲಿದೆ.
ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಇಂದು(ಆ.11) ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತನ ಕೇಬಲ್ ಪರಿವರ್ತನೆ ಕಾಮಗಾರಿ ಮತ್ತು ಇತರೆ ನಿರ್ವಹಣಾ ಯೋಜನೆಗಳು ವಿದ್ಯುತ್ ವ್ಯತ್ಯಯಕ್ಕೆ ಕಾರಣವಾಗಲಿದೆ.
ಕಳೆದ ಕೆಲವು ದಿನಗಳಿಂದ ನಗರದ ಹಲವು ಭಾಗಗಳಲ್ಲಿ ನಿರ್ವಹಣಾ ಕಾಮಗಾರಿಯಿಂದಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್(ಬೆಸ್ಕಾಂ). ಕೇಬಲ್‌ಗಳ ಚಾರ್ಜ್ ಮಾಡುವುದು, ಮರ ಕಡಿಯುವುದು, ಟ್ರಾನ್ಸ್‌ಫಾರ್ಮರ್ ಕೆಲಸ, ಮಾಸ್ಟರ್ ಟೆಸ್ಟಿಂಗ್ ಸೇರಿದಂತೆ ಇಲಾಖೆ ನಿರ್ವಹಣೆ ಕಾರ್ಯಗಳಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಜಕ್ಕಸಂದ್ರ, ಎಚ್‌ಎಸ್‌ಆರ್ 5ನೇ ವಲಯ, ಶಿಕ್ಷಕರ ಕಾಲೋನಿ ವೆಂಕಟಾಪುರ ಭಾಗಗಳು, ಸಲಾರ್ಪುರಿಯಾ ಗ್ರೀನೇಜ್ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರುತ್ತದೆ. ಎಲೆಕ್ಟ್ರಾನಿಕ್ಸ್ ಸಿಟಿ ಹಂತ 2, ವೀರಸಂದ್ರ, ಅನಂತನಗರ, ದೊಡ್ಡನಾಗಮಂಗಲ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಪವರ್ ಕಟ್ ಆಗಲಿದೆ. ಎಲೆಕ್ಟ್ರಾನಿಕ್ಸ್ ಸಿಟಿ ಹಂತ 2, ವೀರಸಂದ್ರ, ಅನಂತ ನಗರ, ದೊಡ್ಡನಾಗಮಂಗಲ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (ಆ.12) ಪವರ್ ಕಟ್ ಇದೆ. ಆ. 13ರಂದು ಎಲೆಕ್ಟ್ರಾನಿಕ್ಸ್ ಸಿಟಿ ಹಂತ 2, ವೀರಸಂದ್ರ, ಅನಂತನಗರ, ದೊಡ್ಡನಾಗಮಂಗಲ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:56 am, Thu, 11 August 22