BSSK ಕಾರ್ಖಾನೆ ಪುನ:ಶ್ಚೇತನ ಚರ್ಚೆಗೆ ಮುಖ್ಯಮಂತ್ರಿ ಬಳಿಗೆ ನಿಯೋಗ: ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್

ಬಿಎಸ್ಎಸ್​ಕೆ ಪುನಶ್ಚೇತನ ಮಾಡಲು ಪ್ರಸ್ತಾವನೆಯನ್ನು ಸಹಕಾರ ಮತ್ತು ಇನ್ನೀತರ ಇಲಾಖೆಗೆ ಕಳುಹಿಸಿರಿ. ಎಲ್ಲ ಶಾಸಕರು ಸೇರಿ ಮುಂದಿನ ಪ್ರಯತ್ನ ಮಾಡುತ್ತೇವೆ ಎಂದು ಶಾಸಕರಾದ ಈಶ್ವರ ಖಂಡ್ರೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

BSSK ಕಾರ್ಖಾನೆ ಪುನ:ಶ್ಚೇತನ ಚರ್ಚೆಗೆ ಮುಖ್ಯಮಂತ್ರಿ ಬಳಿಗೆ ನಿಯೋಗ: ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್
ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Feb 24, 2021 | 5:23 PM

ಬೀದರ್: ಪಶು ಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ನಡೆದಿದ್ದು, ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನ:ಶ್ಚೇತನದ ಬಗ್ಗೆ ಈ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆಯಿತು.ಕೆಡಿಪಿ ಸಭೆಯ ಆರಂಭಕ್ಕೆ ಮೊದಲು ವಿಷಯ ಪ್ರಸ್ತಾಪಿಸಿದ ಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ್ ರೈತರಿಗೆ ಕಬ್ಬು ಪೂರೈಸಲು ಕಾರ್ಖಾನೆ ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿಂದೆ ಎಲ್ಲ ಶಾಸಕರು ಮತ್ತು ಎಲ್ಲ ಸಕ್ಕರೆ ಕಾರ್ಖಾನೆಗಳ ಮುಖ್ಯಸ್ಥರೊಂದಿಗೆ ನಡೆದ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 2400 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಲಾಗಿತ್ತು. ಆದರೆ, ಸಭೆಯಲ್ಲಾದ ತೀರ್ಮಾನದ ಪಾಲನೆ ಆಗುತ್ತಿಲ್ಲ. ಕೆಲವು ಕಾರ್ಖಾನೆಗಳು ರೈತರಿಗೆ ಕೇವಲ 1,400 ಇಲ್ಲವೇ 1,500 ರೂಪಾಯಿ ಪಾವತಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಶಾಸಕರಾದ ಈಶ್ವರ ಖಂಡ್ರೆ ಅವರು ಮಾತನಾಡಿ, ಈ ಹಿಂದೆ ನಡೆದ ಸಭೆಯಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ ಪಾವತಿಸಲು 2,400 ರೂಪಾಯಿ ಬೆಲೆ ನಿಗದಿ ಮಾಡಿರುವುದು ಉತ್ತಮ ನಿರ್ಧಾರ. ಇದರಲ್ಲಿ ಕೊರತೆಯ ಹಣವನ್ನು ಸರ್ಕಾರವೇ ಕೊಡಬೇಕು. ಸಭೆಯಲ್ಲಿ ಆಗಿರುವ ನಿರ್ಧಾರದಂತೆ ನಡೆದುಕೊಳ್ಳದ ಕಾರ್ಖಾನೆಗಳ ಮೇಲೆ ಕ್ರಮ ವಹಿಸಿ ಎಂದು ಹೇಳಿದರು.

ಬೀದರ್ ರೈತರ ಜೀವನಾಡಿಯಾದ ಬಿಎಸ್ಎಸ್​ಕೆ ಪುನಾರಂಭಕ್ಕೂ ಮೊದಲು ಒತ್ತು ಕೊಡಬೇಕು ಎಂದು ಸಚಿವರಿಗೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರಾದ ಪ್ರಭು ಚವ್ಹಾಣ್ ಅವರು ಬೀದರ್ ಜಿಲ್ಲೆಯಲ್ಲೇ ದೊಡ್ಡ ಕಾರ್ಖಾನೆಯಾದ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಯಬೇಕು ಎಂಬುವುದು ನಮ್ಮ ಆಶಯವೂ ಆಗಿದೆ. ಎಲ್ಲ ಶಾಸಕರ ಸಲಹೆಯಂತೆ ಬಿಎಸ್ಎಸ್​ಕೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಚರ್ಚಿಸಲು, ಎಲ್ಲ ಶಾಸಕರು ಸೇರಿ ಮುಖ್ಯಮಂತ್ರಿ ಬಳಿಗೆ ನಿಯೋಗ ಕೊಂಡೊಯ್ಯೋಣ ಎಂದರು.

sugar cane meeting

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ಚೇತನದ ಬಗ್ಗೆ ಸಭೆ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್. ಮಾತನಾಡಿ, ಕಾರ್ಖಾನೆಯು ಬಹಳಷ್ಟು ದುರಸ್ತಿಯಾಗಬೇಕಿದೆ. ಕಬ್ಬು ಪೂರೈಸಿದ ರೈತರಿಗೆ ಹಣ ಪಾವತಿಸುವುದು ಬಾಕಿ ಇದೆ. ಅಲ್ಲಿನ ಕಾರ್ಮಿಕರಿಗೆ ವೇತನ ಪಾವತಿ ಕೂಡ ಬಾಕಿಯಿದೆ. ಅಲ್ಲದೇ ಇಎಸ್ಐ, ಪಿಎಫ್ ಕಟ್ಟಿರುವುದಿಲ್ಲ ಎಂದು ತಿಳಿಸಿದರು.

ರೈತರು ಪೂರೈಸಿದ ಕಬ್ಬಿನ ಪಾವತಿಗೆ, ಕಾರ್ಮಿಕರ ವೇತನ ಮತ್ತು ಇನ್ನಿತರ ವೇತನ ಸೇರಿ ಒಟ್ಟು ಕಾರ್ಖಾನೆಗೆ ಈಗ 18.30 ಕೋಟಿ ರೂಪಾಯಿ ಬೇಕಾಗುತ್ತದೆ. ಈಗ ಕಾರ್ಖಾನೆಯಲ್ಲಿರುವ ಸಕ್ಕರೆ ಮಾರಾಟದಿಂದ 94 ಲಕ್ಷ ರೂಪಾಯಿ ಬರಬಹುದು ಎಂದು ಅಂದಾಜಿಸಲಾಗಿದೆ. ಕಾರ್ಮಿಕರ ವೇತನ ಬಾಕಿ, ರೈತರಿಗೆ ಹಣ ಕೊಡುವುದು ಮತ್ತು ಇನ್ನಿತರ ಖರ್ಚು ಭರಿಸಲು ಸಕ್ಕರೆ ಮಾರಾಟಕ್ಕೆ ಸೂಕ್ತ ಬೆಲೆ ಸಿಗುತ್ತಿಲ್ಲ ಎಂದು ತಿಳಿಸಿದ್ದು, ಕಾರ್ಖಾನೆಯನ್ನು ಪುನಃ ಆರಂಭಿಸಲು ಬಹಳಷ್ಟು ಹಣ ಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್. ಆರ್ ಸಭೆಯ ಗಮನಕ್ಕೆ ತಂದರು.

ಬಿಎಸ್ಎಸ್​ಕೆ ಪುನ:ಶ್ಚೇತನ (BSSK) ಮಾಡುವ ಪ್ರಸ್ತಾವನೆಯನ್ನು ಸಹಕಾರ ಮತ್ತು ಇನ್ನಿತರ ಇಲಾಖೆಗೆ ಕಳುಹಿಸಿರಿ. ಎಲ್ಲ ಶಾಸಕರು ಸೇರಿ ಮುಂದಿನ ಪ್ರಯತ್ನ ಮಾಡುತ್ತೇವೆ ಎಂದು ಶಾಸಕರಾದ ಈಶ್ವರ ಖಂಡ್ರೆ ಅವರು ಜಿಲ್ಲಾಧಿಕಾರಿಗೆ ಸೂಚಿಸಿದರು.

Prabhu Chauhan

ಪಶು ಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್

ಸಕ್ಕರೆ ಮಾರಾಟ ಬಳಿಕ ಮೊದಲು ರೈತರಿಗೆ ಹಣ ನೀಡಿ, ನಂತರ ಕಾರ್ಮಿಕರ ವೇತನ ಪಾವತಿಸಿ. ಆಮೇಲೆ ಬೇರೆಯವರಿಗೆ ಹಣ ನೀಡಲು ಚರ್ಚೆಯಾದ ಬಗ್ಗೆ ಈ ಸಭೆಯಲ್ಲಿ ಸಭಾ ನಡಾವಳಿ ಮಾಡಿ ಅದರಂತೆ ಹಣ ಪಾವತಿಗೆ ಕ್ರಮ ವಹಿಸಬೇಕು ಎಂದು ಶಾಸಕರಾದ ಈಶ್ವರ ಖಂಡ್ರೆ ಅವರು ಸಲಹೆ ನೀಡಿದರು.

‘ಕಾರ್ಖಾನೆಯ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಮಾಡಬಾರದು’ ಕಾರ್ಖಾನೆಯಲ್ಲಿ ಬಹಳಷ್ಟು ಸಮಸ್ಯೆಗಳಿದ್ದರೂ, ಕಾರ್ಖಾನೆಯ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಯ ಚುನಾವಣೆ ನಿಗದಿಯಾಗಿದೆ. ಇದು ಸಮಂಜಸವಲ್ಲ. ಬಿಎಸ್ಎಸ್​ಕೆಗೆ ಈ ಸಂದರ್ಭದಲ್ಲಿ ಚುನಾವಣೆ ಮಾಡಬಾರದು ಎಂದು ಎಲ್ಲರೂ ಸೇರಿ ಒಕ್ಕೊರಲಿನ ತೀರ್ಮಾನ ತೆಗೆದುಕೊಳ್ಳೋಣ ಎಂದು ಇದೇ ವೇಳೆ ವಿಧಾನ ಪರಿಷತ್ ಸದಸ್ಯರಾದ ರಘುನಾಥ್​ರಾವ್​ ಮಲ್ಕಾಪುರೆ ಅವರು ಸಭೆಯಲ್ಲಿ ಮಂಡಿಸಿದ ಪ್ರಸ್ತಾಪಕ್ಕೆ ಸಭೆಯಲ್ಲಿದ್ದ ಎಲ್ಲ ಶಾಸಕರು ಬೆಂಬಲಿಸಿದರು.

ಬಿಎಸ್ಎಸ್​ಕೆಗೆ ಈಗ ಚುನಾವಣೆ ಬೇಡ ಎನ್ನುವ ಬಗ್ಗೆ ಈ ಸಭೆಯಲ್ಲಾದ ಚರ್ಚೆಯನ್ನು ಸರ್ಕಾರಕ್ಕೆ ತಿಳಿಸಲಾಗುವುದು. ಅಲ್ಲಿಂದ ಚುನಾವಣೆ ಬೇಡ ಎನ್ನುವ ಆದೇಶ ಬಂದಲ್ಲಿ ಮುಂದಿನ ಕ್ರಮ ವಹಿಸಲಾಗುವುದು. ಕಾರಂಜಾ ನದಿ ನೀರಿನಿಂದ ಮನೆಗಳು ಮುಳುಗಡೆಯಾದ ಸಂತ್ರಸ್ತರಿಗೆ ಪುನರ್ವಸತಿ ಸೌಕರ್ಯ ಕಲ್ಪಿಸುವುದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಸಭೆ ನಡೆಸಿ ಮುಂದಿನ ಪ್ರಕ್ರಿಯೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಪ್ರತಿಕ್ರಿಯಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ನಿರ್ಮಲಾ ವೈಜನಾಥ ಮಾನೆಗೋಪಾಳೆ, ಶಾಸಕರಾದ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಬೀದರ್​ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ, ಬೆಂಗಳೂರು ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ. ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರಾದ ವಿಜಯಕುಮಾರ ಅಣ್ಣೆಪ್ಪಾ ಪಾಟೀಲ್, ಜಿಲ್ಲಾ ಪಂಚಾಯತಿ ಸಿಇಓ ಜಹೀರಾ ನಸಿಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬೀದರ್​ ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಇದನ್ನೂ ಓದಿ: ಅರಣ್ಯ ಅಭಿವೃದ್ಧಿಗೆ ಅನುದಾನ ನೀಡಲು ಸಿದ್ಧ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ