ಕಾಂಗ್ರೆಸ್ನವರು ಹಣ, ಹೆಣದ ಮೇಲೆ ರಾಜಕೀಯ ಮಾಡ್ತಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಸಚಿವ ಸಂಪುಟದ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ಸಂಪುಟ ವಿಸ್ತರಣೆಯ ಬಗ್ಗೆ ನನಗೆ ಮಾಹಿತಿಯೇ ಇಲ್ಲ. ಈ ಬಗ್ಗೆ ಪ್ರಧಾನಿ ಮೋದಿ ನಿರ್ಧಾರ ಮಾಡುತ್ತಾರೆ. ಅಗತ್ಯವಿದ್ದಾಗ ಕೇಂದ್ರ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರು ಹೇಳಿದರು.
ಹುಬ್ಬಳ್ಳಿ: ಕೊವಿಡ್ ನಿರ್ವಹಣೆ ವಿಚಾರವಾಗಿ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ನವರು ಹಣ ಮತ್ತು ಹೆಣದ ಮೇಲೆ ರಾಜಕೀಯ ಮಾಡುತ್ತಾರೆ. ಯಾವುದೇ ದೇಶದಲ್ಲಿ ಕೊವಿಡ್ ವಿಚಾರದಲ್ಲಿ ರಾಜಕಾರಣ ಮಾಡಿಲ್ಲ. ರಾಜಸ್ಥಾನ ಮತ್ತು ಪಂಜಾಬ್ನಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್ ವೇಸ್ಟ್ ಆಗಿದೆ. ಎರಡು ವರ್ಷವಾದರೂ ಕಾಂಗ್ರೆಸ್ನವರಿಗೆ ತಮ್ಮ ಪಕ್ಷದ ಅಧ್ಯಕ್ಷರನ್ನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಕೇವಲ ಬೇಜಾವಾಬ್ದಾರಿತನದ ಹೇಳಿಕೆಗಳನ್ನ ನೀಡುತ್ತಾರೆ ಎಂದು ಹೇಳಿದರು.
ನಂತರ ಸಚಿವ ಸಂಪುಟದ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ಸಂಪುಟ ವಿಸ್ತರಣೆಯ ಬಗ್ಗೆ ನನಗೆ ಮಾಹಿತಿಯೇ ಇಲ್ಲ. ಈ ಬಗ್ಗೆ ಪ್ರಧಾನಿ ಮೋದಿ ನಿರ್ಧಾರ ಮಾಡುತ್ತಾರೆ. ಅಗತ್ಯವಿದ್ದಾಗ ಕೇಂದ್ರ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರು ಹೇಳಿದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬದಲಾವಣೆ ಕೇವಲ ಊಹಾಪೋಹವಷ್ಟೇ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಒಳ್ಳೆಯ ನಾಯಕ. ಉತ್ತರ ಪ್ರದೇಶದಲ್ಲಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯನ್ನು ಆದಿತ್ಯನಾಥ್ ಭೇಟಿಯಾಗಿದ್ದಾರೆ. ಭೇಟಿಯಾದ ವಿಚಾರಕ್ಕೆ ಬದಲಾವಣೆ ಎಂಬ ಚರ್ಚೆಯಾಗುತ್ತಿದೆ. ಭೇಟಿಯಾಗಿದ್ದಾರೆ ಅಂದ ಮಾತ್ರಕ್ಕೆ ಅದು ಬದಲಾವಣೆ ಅಂತಾ ವಿಮರ್ಶೆ ಮಾಡೋದು ವಿಚಿತ್ರವಾಗಿದೆ ಎಂದು ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟರು.
ಇದನ್ನೂ ಓದಿ
ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?
ಯಾವುದೇ ಕಾರಣಕ್ಕೂ ಶಾಲಾ ಶುಲ್ಕವನ್ನು ಕಡಿಮೆ ಮಾಡಲ್ಲ; ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್
(Prahlad Joshi said Congress leaders would do politics on the shroud)